ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ (Congress government) ಅಧಿಕಾರಕ್ಕೆ ಬಂದು ಇಂದಿಗೆ ಒಂದು ವರ್ಷ ಕಳೆದಿದ್ದು, ಈ ಹಿನ್ನೆಲೆ ಬಿಜೆಪಿ (Bjp) ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (BY Vijayendra] ಹಾಗೂ ವಿಧಾನಸಭೆಯ ವಿಪಕ್ಷ ನಾಯಕ ಆರ್. ಅಶೋಕ್, ಮಹತ್ವದ ಸುದ್ದಿಗೋಷ್ಠಿ ಕರೆದಿದ್ದಾರೆ.
ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನ ಬಿಜೆಪಿ ಪ್ರಧಾನ ಕಚೇರಿ ಜಗನ್ನಾಥ ಭವನದಲ್ಲಿ ಸುದ್ದಿಗೋಷ್ಟಿ ನಡೆಯಲಿದೆ. ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಗಳನ್ನು ಪಟ್ಟಿ ಮಾಡಿ ಚಾರ್ಜ್ ಶೀಟ್ (Charge sheet) ಬಿಡುಗಡೆ ಮಾಡುವ ಸಾಧ್ಯತೆಗಳಿವೆ.
ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆ, ಬರ ಪರಿಸ್ಥಿತಿ, ಗ್ಯಾರೆಂಟಿಗಳ ಮೇಲಿನ ಗಮನ ಅಭಿವೃದ್ಧಿ ಹಳ್ಳ ಹಿಡಿಸಿರುವುದು, ಕೊಲೆ, ಮಹಿಳೆಯರ ಮೇಲಿನ ದೌರ್ಜನ್ಯ ಹೀಗೆ ಹಲವು ವಿಚಾರಗಳ ಬಗ್ಗೆ ಬಿಜೆಪಿ ನಾಯಕರು ಮಾಹಿತಿ ನೀಡಲಿದ್ದಾರೆ.