ಬೆಂಗಳೂರು: ವರ್ಷದ ಅಂತ್ಯದಲ್ಲಿ ಅಂದರೆ ಸೆಪ್ಟೆಂಬರ್ ಅಥವಾ ಅಕ್ಟೋಬರ್ ನಲ್ಲಿ ಬಿಬಿಎಂಪಿ ಚುನಾವಣೆ ನಡೆಸಲು (BBMP Elections) ಚಿಂತನೆ ನಡೆದಿದೆ ಎನ್ನಲಾಗಿದೆ. ಈ ಕುರಿತು ಸಚಿವರಿಗೆ ಸಿಎಂ ಮಾಹಿತಿ ನೀಡಿದ್ದಾರೆ ಎಂದು ಕೂಡ ತಿಳಿದು ಬಂದಿದೆ.
ಡಿ.ಕೆ.ಸುರೇಶ್ ನಿವಾಸದಲ್ಲಿ ಸಚಿವರ ಡಿನ್ನರ್ ಮೀಟಿಂಗ್ನಲ್ಲಿ (Dinner Meeting) ಈ ವಿಚಾರದ ಕುರಿತು ಚರ್ಚೆ ನಡೆದಿದೆ. ಸಿಎಂ ಹಾಗೂ ಡಿಸಿಎಂ, ಸೆಪ್ಟೆಂಬರ್ ಅಥವಾ ಅಕ್ಟೋಬರ್ ನಲ್ಲಿ ಬಿಬಿಎಂಪಿ ಚುನಾವಣೆ ನಡೆಸುವ ಬಗ್ಗೆ ಸಚಿವರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಅಲ್ಲದೇ, ಡಿಸೆಂಬರ್ ವೇಳೆಗೆ ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ನಡೆಸುವ ಕುರಿತು ಕೂಡ ಚರ್ಚೆ ನಡೆದಿದೆ ಎನ್ನಲಾಗಿದೆ. ಲೋಕಸಭಾ ಚುನಾವಣಾ ಫಲಿತಾಂಶದ (Lok Sabha Election Result) ನಂತರ ಬೃಹತ್ ಗ್ಯಾರಂಟಿ ಸಮಾವೇಶ ನಡೆಸುವ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆದಿದೆ.
ಕನಿಷ್ಠ 10ಕ್ಕಿಂತ ಜಾಸ್ತಿ ಸ್ಥಾನ ಬಂದರೆ ಅದ್ಧೂರಿ ಸಮಾವೇಶಕ್ಕೆ ಪ್ಲ್ಯಾನ್ ಸಹ ಮಾಡಿದ್ದಾರೆ. ಸಚಿವರ ಬದಲಾವಣೆ ಕುರಿತು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ನಮ್ಮ ಮಟ್ಟದಲ್ಲಿ ಅದು ಇಲ್ಲ. ಹೈಕಮಾಂಡ್ ಮನಸ್ಸು ಮಾಡಿದರೇ ಏನು ಬೇಕಾದರೂ ಆಗಬಹುದು. ಎಲ್ಲದಕ್ಕೂ ಸಿದ್ಧವಿರಿ ಎಂದು ಕೂಡ ಸಿಎಂ ಹಾಗೂ ಡಿಸಿಎಂ ಹೇಳಿದ್ದಾರೆ ಎನ್ನಲಾಗಿದೆ.