ಬುದ್ಧ ಪೂರ್ಣಿಮೆ ಹಿನ್ನೆಲೆ ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ಭಕ್ತ ಸಾಗರವೇ ಹರಿದು ಬಂದಿತು ಗುರುವಾರ ಬೆಳಗಿನಜಾವ 5 ಗಂಟೆಯಿಂದ ಭಕ್ತರು ಕಪಿಲಾ ನದಿಯಲ್ಲಿ ಪುಣ್ಯಸ್ನಾನ ಮಾಡಿ ಸರತಿ ಸಾಲಿನಲ್ಲಿ ದೇವಾಲಯ ಪ್ರವೇಶಿಸಿ ಪುನೀತರಾದರು. ಹರಕೆ ಹೊತ್ತ ಭಕ್ತಾಧಿಗಳು ಉರುಳು ಸೇವೆ, ಮುಡಿ ಸೇವೆ ಹಾಗೂ ತುಲಾಭಾರ ಸೇವೆಗಳನ್ನು ಸಮರ್ಪಿಸುವ ಮೂಲಕ ತಮ್ಮ ಭಕ್ತಿ ಸಮರ್ಪಿಸಿದರು.ಬುದ್ಧ ಹುಣ್ಣಿಮೆ ಅಂಗವಾಗಿ ಶ್ರೀ ನಂಜುಂಡೇಶ್ವರ ಸ್ವಾಮಿಗೆ ವಿಶೇಷ ಧಾರ್ಮಿಕ ಪೂಜೆ ನೆರವೇರಿಸಲಾಯಿತು. ಬೆಳಗ್ಗೆ 8ರ ನಂತರ ದೇವಾಲಯಕ್ಕೆ ಆಗಮಿಸುವ ಜನರ ಸಂಖ್ಯೆ ಹೆಚ್ಚಾಗಿತ್ತು. ಹೀಗಾಗಿ ನೂರು ರೂಪಾಯಿ ವಿಶೇಷ ಟಿಕೆಟ್ ಮೂಲಕ ದೇವಾಲಯದ ಪ್ರವೇಶ ಪಡೆದುಕೊಳ್ಳುವವರು ಸುಮಾರು ಎರಡು ಗಂಟೆ ಸರತಿ ಸಾಲಿನಲ್ಲಿ ನಿಂತು ದೇವಾಲಯ ಪ್ರವೇಶ ಪಡೆದುಕೊಳ್ಳಬೇಕಾಯಿತು.ನಂಜುಂಡೇಶ್ವರನ ಸನ್ನಿಧಿಯಲ್ಲಿ ಭಕ್ತಿಯಿಂದ ಪೂಜೆ ಮಾಡಿ ಪ್ರಾರ್ಥನೆ ಮಾಡಿದ್ರೆ ಸಕಲ ಇಷ್ಟಾರ್ಥ ಸಿದ್ಧಿಸುತ್ತೆ ಎಂಬ ನಂಬಿಕೆ ಅನಾದಿ ಕಾಲದಿಂದ ಚಾಲ್ತಿಯಲ್ಲಿದೆ.
ಮಧ್ಯಾಹ್ನ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ: ಡಿಕೆಶಿ ಮುಂದಿನ ಸಿಎಂ ಬಹುತೇಕ ಖಚಿತ?
ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಧ್ಯಾಹ್ನ ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಬೆಳಿಗ್ಗೆ ತಮ್ಮ ಅಧಿಕೃತ ನಿವಾಸದಲ್ಲಿ...
Read moreDetails





