ಬೆಂಗಳೂರು: ಆಟೋ ಚಾಲಕ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಡೆದಿದೆ.
ನಗರದ (Bengaluru) ಕೋಣನಕುಂಟೆ ಪೊಲೀಸ್ (Police) ಠಾಣೆ ವ್ಯಾಪ್ತಿಯಲ್ಲಿ ಗುರುವಾರ ರಾತ್ರಿ ವೇಳೆ ಈ ಘಟನೆ ನಡೆದಿದೆ. ಮಹಮ್ಮದ್ ಅನ್ಸರ್ ಆರೋಪ ಎನ್ನಲಾಗಿದೆ. ಚಿಕ್ಕಮಗಳೂರು ಮೂಲದ ಯುವತಿ ತ್ರಿಷಾ, ಕೇರಳ ಮೂಲದ ಯುವಕ ಮಹಮ್ಮದ್ ಅನ್ಸರ್ ಕೆಲಸಕ್ಕೆಂದು ಬೆಂಗಳೂರಿಗೆ ಬಂದಿದ್ದಾರೆ. ಮಹಮದ್ ಅನ್ಸರ್ ಮತ್ತು ತ್ರಿಷಾ ತಮ್ಮ ಸ್ನೇಹಿತ ಚೇತನ್ ಎಂಬುವವರನ್ನು ಭೇಟಿ ಮಾಡಲು ಜಯನಗರ ಮೆಟ್ರೋ ಸ್ಟೇಷನ್ ಬಳಿ ಬಂದಿದ್ದಾರೆ.
ಆಗ ಚೇತನ್ ಇವರನ್ನು ಭೇಟಿಯಾಗಲು ಬಂದಿಲ್ಲ. ಈ ವೇಳೆ ತ್ರಿಷಾ ಮತ್ತು ಮಹಮದ್ ಆನ್ಸರ್ ಇಬ್ಬರೇ ಇರುವುದನ್ನು ನೋಡಿದ ಓರ್ವ ಆಟೋ ಚಾಲಕ ರಾತ್ರಿ ಸುಮಾರು 10:30ರ ವೇಳೆಗೆ ಬಂದು ಎಲ್ಲಿಗೆ ಹೋಗಬೇಕು ಎಂದು ಕೇಳಿದ್ದಾನೆ. ಆಗ ರೈಲ್ವೆ ನಿಲ್ದಾಣಕ್ಕೆ ಹೋಗಬೇಕು ಎಂದಿದ್ದಾರೆ. ಆಟೋ ಚಾಲಕ ಬನ್ನಿ ಬಿಡುತ್ತೇನೆ ಎಂದಿದ್ದಾನೆ. ಆ ವೇಳೆ ಇಬ್ಬರೂ ಆಟೋ ಹತ್ತಿದ್ದಾರೆ. ಆಟೋ ಚಾಲಕ “ನನ್ನದೆ ಒಂದು ಮನೆ ಪಿಳ್ಳೆಗಾನಹಳ್ಳಿಯಲಿದೆ. ಅದು ಖಾಲಿ ಇದೆ ಅದನ್ನು ನೀವು ನೋಡಿ ನಿಮಗೆ ಇಷ್ಟವಾದರೆ ಬಾಡಿಗೆಗೆ ಇರಿ” ಎಂದು ಹೇಳಿ ಕರೆದುಕೊಂಡು ಹೋಗುವಾಗ, ಆಟೋ ಚಾಲಕ ದಾರಿಯಲ್ಲಿ ಆಟೋ ನಿಲ್ಲಿಸಿದ್ದಾನೆ.
ನಂತರ ಮದ್ಯ ತೆಗೆದುಕೊಂಡು ಅಲ್ಲಿಂದ ಪಿಳ್ಳಗಾನಹಳ್ಳಿಯಲ್ಲಿನ, ಒಂದು ಮನೆಯ ಮುಂದೆ ಆಟೋ ನಿಲ್ಲಿಸಿ, ಆ ಮನೆಯೊಳಗೆ ತ್ರಿಷಾ ಮತ್ತು ಮಹಮದ್ ಅನ್ಸಾರಿನನ್ನು ಕರೆದುಕೊಂಡು ಹೋಗಿದ್ದಾನೆ. ಆಗ ಇಲ್ಲಿಯೇ ಇದ್ದು ಬೆಳಿಗ್ಗೆ, ಎದ್ದು ಹೋಗಿ ಎಂದು ಹೇಳಿದ್ದಾನೆ. ಬಳಿಕ ಅವರ ಮುಂದೆಯೇ ಮದ್ಯ ಕುಡಿದಿದ್ದಾನೆ. ಮಹಮದ್ ಗೂ ಮದ್ಯ ಕುಡಿಸಿದ್ದಾನೆ. ನಂತರ ತ್ರಿಷಾರನ್ನು ಕರೆದು ಆತನ ಪಕ್ಕದಲ್ಲಿ, ಮಲಗು ಬಾ ಎಂದು ಹೇಳಿದ್ದಾನೆ. ಆಗ ತ್ರಿಷಾ ಭಯವಾಗಿ ಏನ್ ಅಂಕಲ್ ನೀವು ನನ್ನ ತಂದೆಯಂತೆ ಇದ್ದೀರಿ, ಎಂದು ಹೇಳಿದ್ದಾಳೆ.
ಆ ವೇಳೆ ಮಚ್ಚನ್ನು ತೋರಿಸಿ ನೀನು ನನ್ನ ಜೊತೆಯಲಿ ಮಲಗಿಕೊಂಡು ನನ್ನ ಜೊತೆಯಲಿ ಸಹಕರಿಸದಿದ್ದರೆ ನಿಮ್ಮ ಇಬ್ಬರನ್ನು ಇಲ್ಲಿಯೇ ಮುಗಿಸಿ, ಎಲ್ಲಿಯಾದರೂ ಬಿಸಾಡುತ್ತೇನೆಂದು ಹೆದರಿಸಿದ್ದಾನೆ. ಆ ವೇಳೆ ಮಹಮದ್ ಗೆ ಚಾಕುವಿನಿಂದ ಹೊಡೆದಿದ್ದಾನೆ. ಅಲ್ಲಿಂದ ಇಬ್ಬರೂ ತಪ್ಪಿಸಿಕೊಂಡು ಹೋಗಿ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ.