ಬೆಂಗಳೂರು: ಕುಡಿದು ರಸ್ತೆಯಲ್ಲಿ ಮಲಗುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಗಿರೀಶ್ ಬಂಧಿತ ರೋಪಿ. ಬೆಂಗಳೂರಿನ (Bengaluru) ಬನಶಂಕರಿ ಠಾಣೆ ಪೊಲೀಸರು (Police) ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಗಿರೀಶ್ ಒಂದೇ ವಾರದಲ್ಲಿ ಎರಡು ಕೊಲೆ ಮಾಡಿದ್ದ. ಕುಡಿದು ಬಂದು ರಸ್ತೆ ಬದಿ ಮಲಗಿದ್ದವರನ್ನು ಕೊಲೆ ಮಾಡುತ್ತಿದ್ದ ಎನ್ನಲಾಗಿದೆ.
ಕುಡಿದ ಮತ್ತಿನಲ್ಲಿ ಮೇ 12ರಂದು ಜಯನಗರ 7ನೇ ಬಡಾವಣೆಯಲ್ಲಿ ರಸ್ತೆ ಬದಿಯಲ್ಲಿ ಮಲಗಿದ್ದ ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದ. ಅಲ್ಲದೇ, ಮೇ 18ರಂದು ಸಿಟಿ ಮಾರುಕಟ್ಟೆ ಹಿಂಭಾಗದ ಕಾಂಪ್ಲೆಕ್ಸ್ ನಲ್ಲಿ ಮಲಗಿದ್ದ ವ್ಯಕ್ತಿಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದ. ಈ ಕುರಿತು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದವು. ಸದ್ಯ ಬನಶಂಕರಿ ಠಾಣೆ ಪೊಲೀಸರು ಆರೋಪಿ ಗಿರೀಶನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.