ಮಂಗಳೂರು: ಗುಂಪೊಂದು ನಡುರಸ್ತೆಯಲ್ಲಿಯೇ ನಮಾಜ್ ಮಾಡಿರುವ ಘಟನೆಯೊಂದು ನಡೆದಿದೆ.
ನಗರದ ಕಂಕನಾಡಿಯಲ್ಲಿ (Kankanadi, Mangaluru) ನಡುರಸ್ತೆಯಲ್ಲಿಯೇ ಕೆಲವು ಯುವಕರು ನಮಾಜ್ ಮಾಡಿದ್ದಾರೆ. ಇದು ಈಗ ಚರ್ಚೆಗೆ ಕಾರಣವಾಗಿದೆ. ಸ್ಥಳೀಯರು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.
ಕಳೆದ ಎರಡ್ಮೂರು ದಿನದ ಹಿಂದಿನ ವೀಡಿಯೋ ಇದಾಗಿದೆ. ಈ ವೀಡಿಯೋ ನೋಡಿದ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೇ ರಸ್ತೆಯಲ್ಲಿಯೇ ಯುವಕರು ನಮಾಜ್ ಮಾಡುತ್ತಿರುವುದರಿಂದ ವಾಹನ ಸವಾರರಿಗೆ ತುಂಬಾ ಕಿರಿ ಕಿರು ಉಂಟಾಗಿದೆ. ಈ ಘಟನೆ ಕದ್ರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.