ಮಂಗಳೂರು (Mangalore) ನಗರದ ರಸ್ತೆಯಲ್ಲಿ ನಮಾಜ್ ಮಾಡಿದ ವಿಚಾರಕ್ಕೆ ಬಿಜೆಪಿ (BJP) ನಾಯಕರು ಹಾಗೂ ಹಿಂದು (Hindu) ಸಂಘಟನೆಗಳು ಅಸಮಾಧಾನ ಹೊರಹಾಕಿದ ಬೆನ್ನಲ್ಲೇ ನಮಾಜ್ ಮಾಡಿದವರ ವಿರುದ್ಧ ಕದ್ರಿ ಪೊಲೀಸರು (Police) ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಐಪಿಸಿ ಕಲಂ 341, 283, 143 ಜೊತೆಗೆ 149ರಡಿ ಸುಮೋಟೊ ಪ್ರಕರಣ ದಾಖಲಾಗಿದೆ. ಕಂಕನಾಡಿಯ ಮಸೀದಿ ಎದುರು ಯುವಕರ ತಂಡ ನಮಾಜ್ ಮಾಡಿತ್ತು. ಸಾರ್ವಜನಿಕ ಸ್ಥಳದಲ್ಲಿ ಓಡಾಡಲು ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆ ಆಗಿತ್ತು. ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಈ ಘಟನೆ ಬಗ್ಗೆ ಹಿಂದು ಸಂಘಟನೆಗಳು ಹಾಗೂ ಬಿಜೆಪಿ ನಾಯಕರು ಕಿಡಿಕಾರಿದ್ದರು. ಅಲ್ಲದೇ ಇಂತಹ ಘಟನೆ ಮರುಕಳಿಸಿದರೆ ಸಾಮೂಹಿಕ ಹನುಮಾನ್ ಚಾಲೀಸಾ (Hanuman chalisa) ಪಠಣ ಮಾಡುವುದಾಗಿ ವಿಶ್ವ ಹಿಂದೂ ಪರಿಷತ್ ಎಚ್ಚರಿಕೆ ನೀಡಿದ್ದರು. ಇದರ ಬೆನ್ನಲ್ಲೇ ಪೊಲೀಸು ಪ್ರಕರಣ ದಾಖಲಿಸಿಕೊಂಡಿದ್ದಾರೆ.