ಬೆಂಗಳೂರು: ಸಿಬಿಐ ಪೊಲೀಸರೆಂದು (Fake CBI Officer ) ಸುಳ್ಳು ಹೇಳಿ ವಿದ್ಯಾರ್ಥಿಗಳಿಂದ ಹಣ ವಸೂಲಿ ಮಾಡಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ.
ಕೇರಳ ಮೂಲದ ನಾಲ್ವರು ಆರೋಪಿಗಳನ್ನು ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದಾರೆ. ಮೂವರು ವಿದ್ಯಾರ್ಥಿಗಳಿದ್ದ ಮನೆಗೆ ಸಿಬಿಐ ಅಧಿಕಾರಿಗೆಳೆಂದು ದಾಳಿ ಮಾಡಿದ್ದರು. ಈ ಸಂದರ್ಭದಲ್ಲಿ ತಾವೇ ತಂದಿದ್ದ ಗಾಂಜಾವನ್ನು ವಿದ್ಯಾರ್ಥಿಗಳ ಕೈಯಲ್ಲಿ ಇಟ್ಟು ವಿಡಿಯೋ ಮಾಡಿಕೊಂಡು ಬ್ಲ್ಯಾಕ್ ಮೇಲ್ ಮಾಡಿದ್ದರು. ಅಲ್ಲದೇ, ಪಿಸ್ತೂಲ್, ಐಡಿ ಕಾರ್ಡ್, ಲಾಟಿಯಿಂದ ಹಲ್ಲೆ ಮಾಡಿದ್ದರು.
ದುಷ್ಕರ್ಮಿಗಳ ನಡೆಯಿಂದ ಅನುಮಾನಗೊಂಡ ವಿದ್ಯಾರ್ಥಿಗಳು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನನ್ವಯ ತನಿಖೆ ನಡೆಸಿದ ಸೋಲದೇವನಹಳ್ಳಿ ಪೊಲೀಸರು ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬ್ಲ್ಯಾಕ್ ಮೇಲ್ ಸಂದರ್ಭದಲ್ಲಿ ಆರೋಪಿಗಳು 3 ಲಕ್ಷ ರೂ. ಬೇಡಿಕೆ ಇಟ್ಟಿದ್ದರು. ಹಣ ಕೊಡದಿದ್ದಲ್ಲಿ ಗಾಂಜಾ ಕೈಯಲ್ಲಿರುವ ವಿಡಿಯೋ ರಿಲೀಸ್ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಅಲ್ಲದೇ, ವಿದ್ಯಾರ್ಥಿಗಳಿಂದ 90 ಸಾವಿರ ರೂ. ಹಣ ವರ್ಗಾವಣೆ ಮಾಡಿಕೊಂಡಿದ್ದರು ಎಂದು ತನಿಖೆಯಿಂದ ತಿಳಿದು ಬಂದಿದೆ.