ಸುಮಲತಾ ಅಂಬರೀಶ್ಗೆ ಖುಲಾಯಿಸಿದ ಲಕ್
ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರವನ್ನು ತ್ಯಾಗ ಮಾಡಿದ ಪ್ರತಿಫಲವಾಗಿ, ಹಾಲಿ ಸಂಸದೆ ಸುಮಲತಾ ಅಂಬರೀಶ್ಗೆ ಬಿಜೆಪಿ ಹೈಕಮಾಂಡ್ ನಾಯಕರು ಭರ್ಜರಿ ಗಿಫ್ಟ್ ಕೊಡುವ ಮುನ್ಸೂಚನೆ ಸಿಕ್ಕಿದೆ. ಸುಮಲತಾ ಅಂಬರೀಶ್ಗೆ ವಿಧಾನಪರಿಷತ್ನ ಸದಸ್ಯರನ್ನಾಗಿಸಲು ಬಿಜೆಪಿ ಹೈಕಮಾಂಡ್ ನಾಯಕರು ನಿರ್ಧರಿಸಿದ್ದು, ಜೂನ್ 13 ರಂದು ನಡೆಯಲಿರುವ ವಿಧಾನಸಭೆಯಿಂದ ವಿಧಾನಪರಿಷತ್ಗೆ ಆಯ್ಕೆಯಾಗಬೇಕಾದ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ರನ್ನು ಬಿಜೆಪಿ ಅಭ್ಯರ್ಥಿಯಾಗಿಸಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.
ಇನ್ನು ಜೂನ್ 13 ರಂದು ನಡೆಯಲಿರುವ ವಿಧಾನಸಭೆಯಿಂದ ವಿಧಾನಪರಿಷತ್ನ ಚುನಾವಣೆಯಲ್ಲಿ ಒಟ್ಟು 11 ಸ್ಥಾನಗಳಿದ್ದು, ಅದರಲ್ಲಿ ಸಂಖ್ಯಾ ಬಲಾಬಲದ ಮೇಲೆ ಕಾಂಗ್ರೆಸ್ಗೆ 7 ಸ್ಯಾನ, ಬಿಜೆಪಿಗೆ 3 ಸ್ಥಾನ ಹಾಗೂ ಜೆಡಿಎಸ್ಗೆ 1 ಸ್ಥಾನ ಲಭಿಸಲಿದ್ದು, ಇದರ ಪೈಕಿ 3 ಬಿಜೆಪಿ ಅಭ್ಯರ್ಥಿಗಳ ಪೈಕಿ ಸುಮಲತಾ ಅಂಬರೀಶ್ ಮಹಿಳಾ ಖೋಟಾದಡಿಯಲ್ಲಿ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿದೆ.
ಇನ್ನು ಮಹಿಳಾ ಖೋಟಾ ಮತ್ತು ಪಕ್ಷಕ್ಕಾಗಿ ಕ್ಷೇತ್ರ ತ್ಯಾಗ ಮಾಡಿದ ಮಾನದಂಡದ ಆಧಾರದಲ್ಲಿ ಈ ಕಾರ್ಯಕ್ಕೆ ಬಿಜೆಪಿ ಹೈಕಮಾಂಡ್ ನಾಯಕರು ಮುಂದಾಗಿದ್ದಾರೆ ಎನ್ನಲಾಗಿದ್ದು, ಸಂಜೆಯ ವೇಳೆಗೆ ಅಧಿಕೃತವಾಗಿ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಲಿದೆ ಎನ್ನಲಾಗಿದೆ.