• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಭಾನುವಾರ 3ಕ್ಕೆ ಶರಣಾಗುತ್ತೇನೆ; ನನ್ನ ಕುಟುಂಬ ನೋಡಿಕೊಳ್ಳಿ

ಪ್ರತಿಧ್ವನಿ by ಪ್ರತಿಧ್ವನಿ
May 31, 2024
in ದೇಶ
0
ಭಾನುವಾರ 3ಕ್ಕೆ ಶರಣಾಗುತ್ತೇನೆ; ನನ್ನ ಕುಟುಂಬ ನೋಡಿಕೊಳ್ಳಿ
Share on WhatsAppShare on FacebookShare on Telegram

ನವದೆಹಲಿ: ಜಾಮೀನಿನ ಮೇಲೆ ಹೊರಗೆ ಬಂದಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ಜೂನ್ 2 ರಂದು ಮತ್ತೆ ಜೈಲಿಗೆ ಹೋಗಲಿದ್ದಾರೆ. ಈ ಸಂದರ್ಭದಲ್ಲಿ ಜನರಲ್ಲಿ ಭಾವನಾತ್ಮಕವಾಗಿ ಮನವಿ ಮಾಡಿದ್ದಾರೆ.

ADVERTISEMENT

ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನ ಪೋಷಕರಿಗೆ ವಯಸ್ಸಾಗಿದೆ. ನನ್ನ ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಜೈಲಿನಲ್ಲಿ ಕೂಡ ನಾನು ಚಿಂತಿತನಾಗಿರುತ್ತೇನೆ. ಹೀಗಾಗಿ ನನ್ನ ಹೆತ್ತವರನ್ನು ಚೆನ್ನಾಗಿ ನೋಡಿಕೊಳ್ಳಿ ಎಂದು ಜನರಲ್ಲಿ ಮನವಿ ಮಾಡಿದ್ದಾರೆ.

ನನ್ನ ಪತ್ನಿ ಸುನೀತಾ ತುಂಬಾ ಧೈರ್ಯವಂತೆ. ಕಷ್ಟದ ಸಮಯದಲ್ಲಿ ನನಗೆ ಬೆಂಬಲವಾಗಿ ನಿಂತಿದ್ದಾಳೆ. ನನ್ನ ಜೀವನದಲ್ಲಿ ಕಷ್ಟದ ಸಮಯ ಬಂದಾಗ, ನೀವೆಲ್ಲರೂ ನನಗೆ ಬೆಂಬಲ ನೀಡಿದ್ದೀರಿ. ನನ್ನ ಪ್ರಾಣ ಹೋದರೂ ಸರ್ವಾಧಿಕಾರದ ವಿರುದ್ಧ ಹೋರಾಡುತ್ತೇನೆ. ದುಃಖಿಸಬೇಡಿ, ನಾನು ಇಂದು ಜೀವಂತವಾಗಿದ್ದೇನೆ. ನಿಮ್ಮೆಲ್ಲರ ಆಶೀರ್ವಾದವು ನನ್ನನ್ನು ರಕ್ಷಿಸುತ್ತದೆ ಎಂದು ಹೇಳಿದ್ದಾರೆ.

ನಾನು ಜೈಲಿನಲ್ಲಿದ್ದರೂ ದೆಹಲಿಯ ಜನರಿಗೋಸ್ಕರ ನನ್ನ ಸೇವೆ ನಿಲ್ಲಲ್ಲ ಎಂದು ಭರವಸೆ ನೀಡಲು ಬಯಸುತ್ತೇನೆ ಎಂದ ಅವರು, ಮತ್ತೆ ಶರಣಾಗಲು ನಾನು ಭಾನುವಾರ ಮಧ್ಯಾಹ್ನ 3 ಗಂಟೆಗೆ ಮನೆಯಿಂದ ಹೊರಡುತ್ತೇನೆ. ಈ ಬಾರಿ ಅವರು ನನ್ನನ್ನು ಹೆಚ್ಚು ಹಿಂಸಿಸುವ ಸಾಧ್ಯತೆಯಿದೆ. ಆದರೆ ಇದಕ್ಕೆ ನಾನು ತಲೆಕೆಡಿಸಲ್ಲ ಎಂದು ಹೇಳಿದ್ದಾರೆ. ಸುಪ್ರೀಂಕೋರ್ಟ್ ನನಗೆ ಪ್ರಚಾರಕ್ಕೆ 21 ದಿನಗಳ ಕಾಲಾವಕಾಶ ನೀಡಿತ್ತು. ನಾಳೆಗೆ 21 ದಿನಗಳು ಪೂರ್ಣಗೊಳ್ಳುತ್ತಿವೆ. ಭಾನುವಾರ ನಾನು ಶರಣಾಗಬೇಕಾಗಿದ್ದು, ಮತ್ತೆ ತಿಹಾರ್ ಜೈಲಿಗೆ ಹೋಗುತ್ತೇನೆ ಎಂದು ಹೇಳಿದ್ದಾರೆ.

ಜೈಲಿನಲ್ಲಿ ನನ್ನನ್ನು ಹಲವು ರೀತಿಯಲ್ಲಿ ಬಗ್ಗಿಸಲು ಪ್ರಯತ್ನಿಸಿದರೂ, ಯಶಸ್ವಿಯಾಗಲಿಲ್ಲ. ನನ್ನನ್ನು ಹಲವು ರೀತಿಯಲ್ಲಿ ಹಿಂಸಿಸುತ್ತಿದ್ದರು. ನಾನು 20 ವರ್ಷಗಳಿಂದ ಮಧುಮೇಹ ರೋಗಿಯಾಗಿದ್ದೇನೆ. ಕಳೆದ 10 ವರ್ಷಗಳಿಂದ ನಾನು ಪ್ರತಿದಿನ ಇನ್ಸುಲಿನ್ ತೆಗೆದುಕೊಳ್ಳುತ್ತಿದ್ದೇನೆ. ಆದರೆ ಜೈಲಿನಲ್ಲಿ ಅವರು ಹಲವಾರು ದಿನಗಳವರೆಗೆ ಇನ್ಸುಲಿನ್ ನಿಲ್ಲಿಸಿದ್ದರು. ನನ್ನ ಶಗರ್‌ ಲೆವೆಲ್ 300 ತಲುಪಿತು. 50 ದಿನಗಳ ಕಾಲ ಜೈಲಿನಲ್ಲಿದ್ದೆ. ಈ 50 ದಿನಗಳಲ್ಲಿ ನಾನು 6 ಕೆ.ಜಿ ತೂಕವನ್ನು ಕಳೆದುಕೊಂಡೆ. ಜೈಲಿಗೆ ಹೋದಾಗ 70 ಕೆಜಿ ಇದ್ದ ನನ್ನ ತೂಕ ಇಂದು 64 ಕೆ.ಜಿ ಆಗಿದೆ ಎಂದು ಹೇಳಿದ್ದಾರೆ.

Tags: Aravind KejrivalCourtjail
Previous Post

ಗೋಡೆಯ ಮೇಲಿರುವ ಕಲೆಗಳನ್ನ ಶಮನ ಮಾಡುವುದಕ್ಕೆ ಈ ಸಿಂಪಲ್ ಹ್ಯಾಕ್ ನ ಟ್ರೈ ಮಾಡಿ.!

Next Post

ಪ್ರಜ್ವಲ್ ರೇವಣ್ಣ ವಿರುದ್ಧ ಮಹಿಳೆಯರ ದೊಡ್ಡ ಮಟ್ಟದ ಪ್ರತಿಭಟನೆ..!

Related Posts

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ
ದೇಶ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

by ಪ್ರತಿಧ್ವನಿ
April 10, 2026
0

ಪಟ್ನಾ, ಏ.10: ಪ್ರಧಾನಮಂತ್ರಿ  ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವ ಸಂಚು ರೂಪಿಸಿದ್ದ ಆರೋಪದಡಿ ಬಿಹಾರ ಪೊಲೀಸರು ಮೂವರು ಯುವಕರನ್ನು ಬಂಧಿಸಿದ್ದಾರೆ. ಈ ಘಟನೆ ದೇಶದಾದ್ಯಂತ ಆತಂಕ...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

April 6, 2026
ಟೆರಿಟೋರಿಯಲ್ ಆರ್ಮಿಯಲ್ಲಿ ಉದ್ಯೋಗ:ಯುವಕರಿಗೆ ಸುವರ್ಣಾವಕಾಶ

 ಮೊಹಮ್ಮದ್ ಇಕ್ಬಾಲ್ ‘ಪಲಾಯನಗೈದ ಆರ್ಥಿಕ ಅಪರಾಧಿ’ ಎಂದು ನ್ಯಾಯಾಲಯ ಘೋಷಣೆ

April 1, 2026
Next Post

ಪ್ರಜ್ವಲ್ ರೇವಣ್ಣ ವಿರುದ್ಧ ಮಹಿಳೆಯರ ದೊಡ್ಡ ಮಟ್ಟದ ಪ್ರತಿಭಟನೆ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada