• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅಕ್ರಮ ಹಣದ ವರ್ಗಾವಣೆಗೆ ಸಿಎಂ ಸಿದ್ದರಾಮಯ್ಯ ನೇರ ಹೊಣೆ

ಪ್ರತಿಧ್ವನಿ by ಪ್ರತಿಧ್ವನಿ
June 3, 2024
in ಕರ್ನಾಟಕ, ರಾಜಕೀಯ
0
ಸರ್ಕಾರಕ್ಕೆ ವರ್ಷದ ಸಂಭ್ರಮ.. ಸರ್ಕಾರದ ಕಾಲೆಳೆದ ವಿಪಕ್ಷಗಳು..
Share on WhatsAppShare on FacebookShare on Telegram

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅಕ್ರಮ ಹಣದ ವರ್ಗಾವಣೆಗೆ ಹಣಕಾಸು ಖಾತೆ ಹೊಂದಿರುವ ಸಿಎಂ ಸಿದ್ದರಾಮಯ್ಯ ಅವರೇ ನೇರ ಹೊಣೆ ಹೊರಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ADVERTISEMENT

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲವನ್ನೂ ಸಚಿವ ನಾಗೇಂದ್ರ ತಲೆಗೆ ಕಟ್ಟುವ ಷಡ್ಯಂತ್ರ ನಡೆಯುತ್ತಿದೆ. ಇಡೀ ಅಕ್ರಮದಲ್ಲಿ ಸರ್ಕಾರದ ಇಡೀ ಸಂಪುಟವೇ ಭಾಗಿಯಾಗಿರುವ ಅನುಮಾನವಿದೆ. ಹೀಗಾಗಿ ಎಲ್ಲಾ ನಿಗಮ ಮಂಡಳಿಗಳಲ್ಲಿ ಇರುವ ಹಣದ ಬಗ್ಗೆ ಜನರ ಮುಂದೆ ಲೆಕ್ಕ ಇಡಬೇಕು ಎಂದು ಒತ್ತಾಯ ಮಾಡಿದರು.

ನಿಗಮದ ಹಣ ಹಲವಾರು ನಕಲಿ ಖಾತೆಗಳಿಗೆ ವರ್ಗಾವಣೆ ಆಗಿದೆ. ಈ ಕುರಿತು ದಾಖಲೆಗಳೇ ಬಹಿರಂಗ ಆಗಿವೆ. ಕೇವಲ ತೆಲಂಗಾಣಕ್ಕೆ ಮಾತ್ರ ಈ ಹಣ ಏಕೆ ಹೋಯಿತು? ಯಾರು ವರ್ಗಾವಣೆ ಮಾಡಿಸಿದರು? ಇಲ್ಲಿ ಯೂನಿಯನ್ ಬ್ಯಾಂಕ್ ಖಾತೆಯಿಂದ ಹಣ ವರ್ಗಾವಣೆ ಅದ ಕೆಲ ಹೊತ್ತಿನಲ್ಲಿ ನಕಲಿ ಬ್ಯಾಂಕ್ ಖಾತೆಗಳಿಂದ ರಾಕೆಟ್ ವೇಗದಲ್ಲಿ ಅಷ್ಟೂ ದೊಡ್ಡ ಮೊತ್ತ ಹಣವನ್ನು ಡ್ರಾ ಮಾಡಲಾಗಿದೆ. ಇದು ಬಹುದೊಡ್ಡ ಅಕ್ರಮ. ಸಿಎಂ ಸೇರಿದಂತೆ ಇಡೀ ಸಂಪುಟವೇ ಶಾಮೀಲಾಗಿದೆ ಎಂದು ಅವರು ನೇರ ಆರೋಪ ಮಾಡಿದರು.

ಕೇವಲ ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಮಾತ್ರ ಹಣ ವರ್ಗಾವಣೆ ಆಗಿರಲು ಸಾಧ್ಯವಿಲ್ಲ. ಬೇರೆ ಬೇರೆ ಇಲಾಖೆಗಳ ನಿಗಮ ಮಂಡಳಿಗಳ ಖಾತೆಗಳಿಂದ ಹಣ ವರ್ಗ ಆಗಿರುವ ಸಾಧ್ಯತೆ ಇದೆ. ತೆಲಂಗಾಣ ಚುನಾವಣೆಗೆ ರಾಜ್ಯದಿಂದ ಯಾರೆಲ್ಲ ಉಸ್ತುವಾರಿಗಳು ಇದ್ದರು? ಅದನ್ನೆಲ್ಲ ಗಮನಿಸಬೇಕು ಎಂದು ಕುಮಾರಸ್ವಾಮಿ ಹೇಳಿದರು.

ಈ ಹಗರಣಕ್ಕೆ ಸಂಬಂಧಿಸಿ 14 ಬ್ಯಾಂಕ್ ಖಾತೆಗಳನ್ನು ತೆರೆಯಲಾಗಿದೆ. ಆ ಖಾತೆಗಳನ್ನು ತೆರೆದವರು ಯಾರು? ಯಾವೆಲ್ಲ ಕಾಣದ ಕೈಗಳು ಇವುಗಳ ಹಿಂದೆ ಇವೆ? ಎಲ್ಲಾ ಹೊರಗೆ ಬರಬೇಕು ಅಲ್ಲವೇ? ಈ ಸರ್ಕಾರಕ್ಕೆ ನಾಚಿಕೆ ಮಾನ ಮರ್ಯಾದೆ ಎನ್ನುವುದು ಇದೆಯಾ? ಎಲ್ಲಾ ನಿಗಮ ಮಂಡಳಿಗಳ ಹಣದ ವ್ಯವಹಾರದ ಬಗ್ಗೆ ತನಿಖೆ ನಡೆದರೆ ಇನ್ನೆಷ್ಟು ಅಕ್ರಮಗಳು ಹೊರಗೆ ಬರುತ್ತವೋ ಗೊತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕಳವಳ ವ್ಯಕ್ತಪಡಿಸಿದರು.

ಹಣಕಾಸಿನ ಖಾತೆ ಹೊಂದಿರುವ ಸಿಎಂ ಸಿದ್ದರಾಮಯ್ಯ ಅವರೇ ಇದಕ್ಕೆಲ್ಲ ನೇರ ಜವಾಬ್ದಾರಿ ಹೊರಬೇಕು. ಹಗರಣದ ತನಿಖೆ ಬಗ್ಗೆ ಆಮೆ ವೇಗ! ಆದರೆ ಹಣ ವರ್ಗಾವಣೆ ಮಾಡಿಕೊಳ್ಳಲು ರಾಕೆಟ್ ವೇಗ!! ಇದು ಇವರ ಕಾರ್ಯವೈಖರಿ ಎಂದು ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದರು.

ಇಷ್ಟು ಮೊತ್ತದ ಹಣವನ್ನು ಯಾರ ನಿರ್ದೇಶನದ ಮೇರೆಗೆ ಮಾಡಿದ್ದರು. ನಿಗಮ ಆಡಳಿತ ಮಂಡಳಿ ಸಭೆಯಲ್ಲಿ ಇದೆಲ್ಲಾ ಚರ್ಚೆ ನಡೆದು ನಿರ್ಧಾರ ತೆಗೆದುಕೊಳ್ಳಬೇಕಿತ್ತು. ಜನರ ತೆರಿಗೆ ಹಣ, ಅವರ ಬೆವರಿನ ಹಣ. ಜನರ ದುಡ್ಡನ್ನು ಇಷ್ಟು ಸ್ವೇಚ್ಚಾಚಾರವಾಗಿ ಬಳಕೆ ಮಾಡಿಕೊಂಡಿದ್ದಾರೆ. ನಿಮಗೆ ಯಾವ ನೈತಿಕತೆ ಇದೆ ಸಿದ್ದರಾಮಯ್ಯನವರೇ? ಬಡವರ ದುಡ್ಡನ್ನೇ ಕೊಳ್ಳೆ ಹೊಡೆಯೋದು, ಅವರನ್ನು ಉದ್ಧಾರ ಮಾಡುತ್ತಿದ್ದೇವೆ ಎಂದು ನಾಟಕ ಆಡೋದು. ಇದು ಯಾವ ಸೀಮೆ ಅಭಿವೃದ್ಧಿ? ಎಂದು ಅವರು ಖಾರವಾಗಿ ಪ್ರಶ್ನೆ ಮಾಡಿದರು.
ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಬಹಳ ಮಾತಾನಾಡುತ್ತಾರೆ. ಪ್ರತಿಯೊಂದಕ್ಕೂ ಮುಂದೆ ಬಂದು ಹೇಳಿಕೆ ಕೊಡುತ್ತಾರೆ. ಇದಕ್ಕೂ ಅವರು ಉತ್ತರ ಕೊಡಲಿ. ಯಾರಪ್ಪನ ಮನೆಯ ದುಡ್ಡು ಇದು? ಕೇಂದ್ರ ಸರ್ಕಾರ ದುಡ್ಡು ಕೊಡುತ್ತಿಲ್ಲ ಎಂದು ಹೇಳುತ್ತೀರಿ, ಇನ್ನೊಂದು ಕಡೆ ಇರುವ ಹಣವನ್ನು ಹೀಗೆ ಲೂಟಿ ಮಾಡುತ್ತೀರಿ!! ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

KRDL ಖರ್ಗೆ ಅವರ ಇಲಾಖೆಗೆ ಸೇರಿದ್ದು. ಅಲ್ಲಿಯೂ ಒಬ್ಬ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅದರ ಬಗ್ಗೆ ಪ್ರಿಯಾಂಕ್ ಮಾತಾಡ್ತಾರಾ? ಎಂದು ಅವರು ಪ್ರಶ್ನಿಸಿದರು.
ದೆಹಲಿ ಕಾಂಗ್ರೆಸ್ ಹೈಕಮಾಂಡ್ ಮೂಗಿನ ನೇರದಲ್ಲೇ ಈ ಅಕ್ರಮ ಹಣದ ವರ್ಗಾವಣೆ ನಡೆದಿದೆ. ಹೈಕಮಾಂಡ್ ಸೂಚನೆ ಮೇರೆಗೆ ಹಣ ವರ್ಗಾವಣೆ ಆಗಿದೆ. 200 ಪರ್ಸೆಂಟ್ ಕಾಂಗ್ರೆಸ್‌ನ ಹೈಕಮಾಂಡ್ ಗಮನಕ್ಕೆ ಬಂದೇ ಇದೆಲ್ಲಾ ನಡೆದಿದೆ. ವಿವಿಧ ರಾಜ್ಯಗಳ ಚುನಾವಣೆಗೆ ಕಾಂಗ್ರೆಸ್ ಪಕ್ಷ ರಾಜ್ಯದಿಂದಲೇ ಹಣ ಪೂರೈಕೆ ಮಾಡಿದೆ ಎನ್ನುವುದಕ್ಕೆ ಇದೇ ಸಾಕ್ಷ್ಯ ಎಂದು ಅವರು ಕಾಂಗ್ರೆಸ್ ಹೈ ಕಮಾಂಡ್ ಮೇಲೆಯೇ ನೇರ ಆರೋಪ ಮಾಡಿದರು.

ಈಗ ಎಸ್ ಐಟಿ ರಚನೆ ಮಾಡಿ ಯಾರ ಮೇಲೆ ಕ್ರಮ ಕೈಗೊಳ್ಳುತ್ತಾರೆ ಇವರು? ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ ಮರಣಪತ್ರದಲ್ಲಿ ಸಚಿವ ನಾಗೇಂದ್ರ ಹೆಸರನ್ನೂ ಬರೆದಿಲ್ಲ. 36 ಜನ ಸಚಿವರಿದ್ದಾರೆ, ನಾವು ಯಾರೂ ಅಂತ ಅಂದುಕೊಳ್ಳಬೇಕು ಹಲವಾರು ನಿಗಮ ಮಂಡಳಿಗಳಲ್ಲಿ ಹೀಗೆ ಆಗುತ್ತಿದೆ. ಎಲ್ಲವೂ ತನಿಖೆ ಆಗಬೇಕು ಎಂದು ಅವರು ಒತ್ತಾಯ ಮಾಡಿದರು.
ಹಗರಣದಲ್ಲಿ ಯೂನಿಯನ್ ಬ್ಯಾಂಕ್ ಇರುವುದರಿಂದ ಸಿಬಿಐ ತನಿಖೆ ಆಗಿಯೇ ಆಗುತ್ತದೆ. ಆದರೆ, ರಾಜ್ಯ ಸರ್ಕಾರ ತರಾತುರಿಯಲ್ಲಿ ಎಸ್ ಐಟಿ ರಚನೆ ಮಾಡಿದೆ. ಎಸ್ ಐಟಿ ಆದರೆ ದಾಖಲೆ ನಾಶ ಮಾಡಬಹುದು, ಕಡತಗಳನ್ನು ಸುಟ್ಟು ಹಾಕಬಹುದು. ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ ಚಂದ್ರಶೇಖರ್ ಅವರ ಮನೆಯಿಂದ ಪೆನೆ ಡ್ರೈವ್ ತೆಗೆದುಕೊಂಡು ತೆಗೆದುಕೊಂಡು ಬಂದರಲ್ಲ, ಆ ಪೆನ್ ಡ್ರೈವ್ ಎಲ್ಲಿದೆ ಈಗ? ಯಾಕೋ.. ಈ ಬಾರಿ ಪೆನ್ ಡ್ರೈ ಹೆಚ್ಚು ಸದ್ದು ಮಾಡುತ್ತಿದೆ ಎಂದು ಸರ್ಕಾರಕ್ಕೆ ಟಾಂಗ್ ಕೊಟ್ಟರು ಮಾಜಿ ಮುಖ್ಯಮಂತ್ರಿ.

Tags: CMkumaraswamysiddaramaiah
Previous Post

ಸಚಿವ ನಾಗೇಂದ್ರ ರಾಜಿನಾಮೆ ಕೇಳಿಲ್ಲ:ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ಡಿಸಿಎಂ ಇವತ್ತು ಯಾಕೆ ಸಿಟಿ ರೌಂಡ್ಸ್ ಮಾಡಲಿಲ್ಲ?; ಹೆಚ್.ಡಿ.ಕುಮಾರಸ್ವಾಮಿ ತೀಕ್ಷ್ಣ ಪ್ರಶ್ನೆ

Related Posts

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ
ರಾಜಕೀಯ

ಬಂಗಾಳದಲ್ಲಿ ಆಡಳಿತ ವಿರೋಧಿ ಅಲೆ: ಟಿಎಂಸಿಗೆ ಸವಾಲು, ಬಿಜೆಪಿ ಮುನ್ನಡೆ? 

by ಪ್ರತಿಧ್ವನಿ
April 28, 2026
0

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಚಟುವಟಿಕೆಗಳು ಜೋರಾಗಿದ್ದು, ಆಡಳಿತ ವಿರೋಧಿ ಅಲೆ ಹೊಸ ಚರ್ಚೆಗೆ ಕಾರಣವಾಗಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ All India Trinamool Congress ಸರ್ಕಾರದ...

Read moreDetails
ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

April 28, 2026
ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

April 28, 2026
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

April 28, 2026
Next Post
ತಾನು ಅಕ್ರಮ ಮಾಡಿ, ಬೇರೆಯವರ ಮೂತಿಗೆ ಒರೆಸುವುದು ಕುಮಾರಸ್ವಾಮಿ ಜಾಯಮಾನ: ಡಿಸಿಎಂ ಡಿ.ಕೆ. ಶಿವಕುಮಾರ್

ಡಿಸಿಎಂ ಇವತ್ತು ಯಾಕೆ ಸಿಟಿ ರೌಂಡ್ಸ್ ಮಾಡಲಿಲ್ಲ?; ಹೆಚ್.ಡಿ.ಕುಮಾರಸ್ವಾಮಿ ತೀಕ್ಷ್ಣ ಪ್ರಶ್ನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada