ರಾಜ್ಯದ ಕರಾವಳಿ, ದಕ್ಷಿಣ ಹಾಗೂ ಉತ್ತರ ಒಳನಾಡಿನ ಬಹುತೇಕ ಕಡೆ ಇಂದು ಕೂಡ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ,ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ನ್ನು ಹವಾಮಾನ ಇಲಾಖೆ ಘೋಷಿಸಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಇಂದು ಕೂಡ ಮಳೆಯಾಗುವ ಸಾಧ್ಯತೆ ಇದೆ. ಈಗಾಗಲೇ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದ್ದು, ಇಂದು ಕೂಡ ಮಳೆರಾಯ ಆರ್ಭಟ ನಡೆಸಲಿದ್ದಾನೆ. ಹೀಗಾಗಿ ಜನರು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.