
ಮಾಜಿ ಸಿಎಂ ಯಡಿಯೂರಪ್ಪ (BS Yediyurappa) ಅವರ ಆಪ್ತ ಕಾ.ಪು ಸಿದ್ದಲಿಂಗಸ್ವಾಮಿ (Kapu Siddalingaswamy) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಹಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಿದ್ದಲಿಂಗಸ್ವಾಮಿ ಇಂದು ಮುಂಜಾನೆ ಚಿಕಿತ್ಸೆ ಫಲಿಸದೆ ಮೃತಪಟ್ಟರು.
ಇತ್ತೀಚೆಗೆ ಯಡಿಯೂರಪ್ಪ ಹಾಗೂ ನೂತನ ಸಂಸದ ವಿ.ಸೋಮಣ್ಣ ಮೈಸೂರಿಗೆ ಬಂದು ಅವರ ಆರೋಗ್ಯ ವಿಚಾರಿಸಿದ್ದರು. ವರುಣ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸಿ ಸೋತಿದ್ದರು. ಅವರು 2008ರಲ್ಲಿ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದಾಗ ಅವರ ವೈಯಕ್ತಿಕ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸಿದ್ದರು. ರಾಜ್ಯ ಪ್ರವಾಸೋದ್ಯಮ ನಿಗಮದ ಅಧ್ಯಕ್ಷರಾಗಿಯೂ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದಾರೆ. ಇಂದು ಸಂಜೆ 4 ಗಂಟೆಗೆ ಸ್ವಗ್ರಾಮ ಕಾರ್ಯದಲ್ಲಿ ಅಂತಿಮ ವಿಧಿ ವಿಧಾನ ನಡೆಯಲಿವೆ.