ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಭಾರತೀನಗರ (ಕೆ.ಎಂ. ದೊಡ್ಡಿ)ಯಲ್ಲಿ ಇವಿ ಚಾರ್ಜಿಂಗ್ ಸ್ಟೇಷನ್ ಲೋಕಾರ್ಪಣೆಗೊಳ್ಳುತ್ತಿದೆ.
ಈ ಲೋಕಾರ್ಪಣೆ ಕಾರ್ಯಕ್ರಮವು ಜೂನ್ 12ರಂದು ಬುಧವಾರ ಬೆಳಿಗ್ಗೆ 11.30ಕ್ಕೆ ನಡೆಯಲಿದೆ. ಜನ್ಯ ಎಂಟರ್ ಪ್ರೈಸಸ್ ವತಿಯಿಂದ ಇವಿ ಚಾರ್ಜಿಂಗ್ ಸ್ಟೇಷನ್ ಆರಂಭವಾಗುತ್ತಿದೆ. ಕಾರ್ಯಕ್ರಮಕ್ಕೆ ಶ್ರೀರಂಗಪಟ್ಟಣ ಶಾಸಕ ರಮೇಶಬಾಬು ಬಂಡಿಸಿದ್ದೇಗೌಡ, ವಿಧಾನ ಪರಿಷತ್ ಸದಸ್ಯ ಮದು ಜಿ. ಮಾದೇಗೌಡ, ಕಾಂಗ್ರೆಸ್ ಯುವ ಮುಖಂಡ ಆಶಯ್ ಜಿ. ಮಧು ಆಗಮಿಸಲಿದ್ದಾರೆ ಎಂದು ಮಾಲೀಕ ಪ್ರಮೋದ್ ಡಿ.ಪಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಬೇಕೆಂದು ಮನವಿ ಮಾಡಿದ್ದಾರೆ.