ಇಂದು ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ ಈ ಸಂದರ್ಭದಲ್ಲಿ ಕೆಲ ಸಂಸದರು ಕೂಡ ಕೇಂದ್ರ ಸಚಿವರಾಗಿ ಪದಗ್ರಹಣ ಮಾಡಲಿದ್ದಾರೆ ಆ ಪೈಕಿ ರಾಜ್ಯದಿಂದ ಯಾವೆಲ್ಲ ಸಂಸದರು ಸಚಿವರಾಗಲಿದ್ದಾರೆ ಎಂಬ ಕುತೂಹಲ ಹೆಚ್ಚಾಗಿದೆ.

ರಾಜ್ಯದಿಂದ ಕೇಂದ್ರಕ್ಕೆ ಸಚಿವರಾಗಿ ಆಯ್ಕೆ ಆಗಬಹುದಾದ ಸಂಭಾವ್ಯ ಸದಸ್ಯರ ಹೆಸರುಗಳು ಚಾಲ್ತಿಯಲ್ಲಿದ್ದು ಈ ಪೈಕಿ ಇಬ್ಬರು ಸಂಸದರಿಗೆ ಸಚಿವ ಸ್ಥಾನ ಖಾತ್ರಿ ಎನ್ನಲಾಗುತ್ತಿದೆ ಈಗಾಗಲೇ ಕೇಂದ್ರ ಸಚಿವರಾಗಿ ಕಾರ್ಯನಿರ್ವಹಿಸಿರುವ ಪ್ರಹ್ಲಾದ್ ಜೋಶಿ ಮತ್ತು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಕೇಂದ್ರದಲ್ಲಿ ಸಚಿವರಾಗೋದು ಕನ್ಫರ್ಮ್ ಎನ್ನಲಾಗುತ್ತಿದೆ.

ಇನ್ನುಳಿದಂತೆ ಬಿವೈ ರಾಘವೇಂದ್ರ ವಿ ಸೋಮಣ್ಣ ಹಾಗೂ ಇನ್ನೂ ಹಲವು ಸಂಸದರು ಕೇಂದ್ರದಲ್ಲಿ ಸಚಿವರಾಗುವ ಆಕಾಂಕ್ಷೆ ಹೊಂದಿದ್ದು ಉಳಿದ ಯಾರಿಗೆಲ್ಲ ಅವಕಾಶ ಸಿಗಲಿದೆ ಎಂಬುದನ್ನು ಕಾದು ನೋಡಬೇಕಿದೆ.












