ನವದೆಹಲಿ: ನರೇಂದ್ರ ಮೋದಿ ಇಂದು ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅವರೊಂದಿಗೆ ಇಂದು ಕೆಲವು ಸಚಿವರು ಕೂಡ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ರಾಷ್ಟ್ರಪತಿ ಭವನದಲ್ಲಿ (Rashtrapati Bhavan) ಸತತ 3ನೇ ಅವಧಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣವಚನ (Prime Minister Narendra Modi Swearing in Ceremony) ಸ್ವೀಕರಿಸಲಿದ್ದಾರೆ. ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿರುವ ಜಗತ್ ಪ್ರಕಾಶ್ ನಡ್ಡಾ (ಜೆಪಿ ನಡ್ಡಾ) ಕೂಡ ಸರ್ಕಾರದಲ್ಲಿ (Narendra Modi 3.0 Cabinet) ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.
ಗುಜರಾತ್ ಸಂಸದ ಸಿ.ಆರ್. ಪಾಟೀಲ್ , ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರ ಹೆಸರು ಕೂಡ ಕೇಳಿಬರುತ್ತಿದೆ. ಹರಿಯಾಣದ ಮಾಜಿ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್, ತೆಲಂಗಾಣ ನಾಯಕ ಬಂಡಿ ಸಂಜಯ್ ಕುಮಾರ್, ಕಿಶನ್ ಕುಮಾರ್ ರೆಡ್ಡಿ, ಪಂಜಾಬ್ ಬಿಜೆಪಿ ನಾಯಕ ರವನೀತ್ ಬಿಟ್ಟು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ರಾಜಸ್ಥಾನದಿಂದ ಗಜೇಂದ್ರ ಸಿಂಗ್ ಶೇಖಾವತ್, ಜೆಡಿಯು ನಾಯಕ ಲಾಲನ್ ಸಿಂಗ್, ರಾಮನಾಥ್ ಠಾಕೂರ್, ಗಿರಿರಾಜ್ ಸಿಂಗ್ ಮತ್ತು ನಿತ್ಯಾನಂದ ರೈ ಸಚಿವರಾಗುವ ಸಾಧ್ಯತೆ ಇದೆ. ಅಲ್ಲದೇ, ಎಚ್‌ಎಎಂ ಮುಖ್ಯಸ್ಥ ಜಿತನ್ ರಾಮ್ ಮಾಂಝಿ, ಎಲ್‌ಜೆಪಿ ನಾಯಕ ಚಿರಾಗ್ ಪಾಸ್ವಾನ್, ಜಿತಿನ್ ಪ್ರಸಾದ್ ಮತ್ತು ಲಕ್ಷ್ಮೀಕಾಂತ್ ಬಾಜ್‌ಪೈ ಕಿರಣ್ ರಿಜಿಜು ಸಂಪುಟ ಸೇರುವ ಸಾಧ್ಯತೆ ದಟ್ಟವಾಗಿದೆ.
ಅಲ್ಲದೇ, ಪ್ರಮುಖ ನಾಯಕರಾದ ಅಮಿತ್ ಶಾ, ರಾಜನಾಥ್ ಸಿಂಗ್, ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಶಿವರಾಜ್ ಸಿಂಗ್ ಚೌಹಾಣ್ ಕೂಡ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ.