ರೇಣುಕಾಸ್ವಾಮಿ (Renukaswamy) ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅರೆಸ್ಟ್ ಆಗಿದ್ದಾರೆ. ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಹಿಡಿಶಾಪ ಹಾಕುತ್ತಿದ್ದಾರೆ.
ಪ್ರಕರಣದಲ್ಲಿ ದರ್ಶನ್ ಹೆಸರು ಕೇಳಿ ಬಂದ ಹಿನ್ನಲೆಯಲ್ಲಿ ಪೋಷಕರು ಹಿಡಿ ಶಾಪ ಹಾಕುತ್ತಿದ್ದಾರೆ. ಕೊಲೆಯಾದ ರೇಣುಕಾಸ್ವಾಮಿ ಪೋಷಕರು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗೆ ಆಗಮಿಸಿದ್ದು, ಮೆಸೆಜ್ ಮಾಡಿದ್ದರೆ ಕಾನೂನು ಕ್ರಮ ಕೈಗೊಳ್ಳಬಹುದಿತ್ತು. ಆದರೆ, ಕೊಲೆ ಮಾಡುವ ನಿರ್ಧಾರಕ್ಕೆ ಯಾಕೆ ಬಂದರು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಅವರು ಪವಿತ್ರಾ ಗೌಡ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಪೋಸ್ಟ್ ಮಾಡಿದ್ದರು. ಈ ಪೋಸ್ಟ್ ಮಾಡಿದ ನಂತರ ರೇಣುಕಾಸ್ವಾಮಿರನ್ನು ಜೂನ್ 9ರಂದು ಹತ್ಯೆ ಮಾಡಲಾಗಿತ್ತು. ಕೊಲೆ ಮಾಡಿದ ಅರೋಪಿಗಳೊಂದಿಗೆ ದರ್ಶನ್ ಜೊತೆ ನಿರಂತರ ಸಂಪರ್ಕದಲ್ಲಿದ್ದರು ಎನ್ನಲಾಗಿದೆ. ಆರೋಪಿಗಳು ದರ್ಶನ್ ಸೂಚನೆಯಂತೆ ಕೊಲೆ ಮಾಡಿದ್ದೇವೆ. ಕೊಲೆಗೆ ದರ್ಶನ್ ಸುಪಾರಿ ನೀಡಿದ್ದರು ಎಂದು ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾರೆ ಎಂಬ ಆರೋಪ ಕೂಡ ಕೇಳಿ ಬಂದಿದೆ.
ಹೀಗಾಗಿ ಪೊಲೀಸರು ನಟ ದರ್ಶನ್ ಮತ್ತು ಪವಿತ್ರಾ ಗೌಡ ಇಬ್ಬರನ್ನೂ ಬಂಧಿಸಿದ್ದಾರೆ. ಈ ಕುರಿತು ತನಿಖೆ ನಡೆಯುತ್ತಿದೆ.