• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

10 ದಿನಗಳ ‘ಯೋಗೋತ್ಸವ’ ಕಾರ್ಯಕ್ರಮಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ

ಪ್ರತಿಧ್ವನಿ by ಪ್ರತಿಧ್ವನಿ
June 11, 2024
in ರಾಜಕೀಯ
0
10 ದಿನಗಳ ‘ಯೋಗೋತ್ಸವ’ ಕಾರ್ಯಕ್ರಮಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ
Share on WhatsAppShare on FacebookShare on Telegram

10 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನ ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಆಯುಷ್ ಇಲಾಖೆ ಇಂದಿನಿಂದ 10 ದಿನಗಳ ಯೋಗೋತ್ಸವ ಕಾರ್ಯಕ್ರಮವನ್ನ ಹಮ್ಮಿಕೊಂಡಿದೆ. ಬೆಂಗಳೂರಿನಲ್ಲಿ ಇಂದು ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಯೋಗ ದಿನಾಚರಣೆ ಕೇವಲ ಒಂದು ದಿನಕ್ಕೆ ಸೀಮಿತವಾಗದೇ ಜನರು ಪ್ರತಿನಿತ್ಯ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಆಗಬೇಕು ಎಂದರು.

ADVERTISEMENT

ಈ ನಿಟ್ಟಿನಲ್ಲಿ ಆಯುಷ್ ಇಲಾಖೆ 10 ದಿನಗಳ ಯೋಗೋತ್ಸವ ಕಾರ್ಯಕ್ರಮವನ್ನ ಪ್ರಾರಂಭಿಸಿದೆ. ಅಂಗನವಾಡಿ ಹಾಗೂ ಶಾಲಾ ಮಕ್ಕಳಿಗೆ 10 ದಿನಗಳಲ್ಲಿ ಯೋಗವನ್ನ ಹೇಳಿಕೊಡಲಾಗುತ್ತದೆ. ಅಲ್ಲದೇ ಆಯುರ್ವೇದ ಚಿಕಿತ್ಸಾ ಪದ್ದತಿಗಳ ಮಾಹಿತಿಯನ್ನ ಸಾರ್ವಜನಿಕರಿಗೆ ತಲುಪಿಸುವ ಕೆಲಸ ಆಗಲಿದೆ. ಉತ್ತಮ ಆರೋಗ್ಯ ಕಾಪಾಡಿಕೊಳ್ಳುವಲ್ಲಿ ಯೋಗ ಹಾಗೂ ಆಯುರ್ವೇದದ ಮಹತ್ವ ನಮ್ಮ ಸಾಮಾನ್ಯ ಜನರಿಗೆ ತಲುಪಿಸುವುದು ಮುಖ್ಯವಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಅಭಿಪ್ರಾಯ ವ್ಯಕ್ತಪಡಿಸಿದರು.‌

ಯೋಗೋತ್ಸವದ ಅಂಗವಾಗಿ ವಿವಿಧ ಸಂಘ-ಸಂಸ್ಥೆಗಳು/ಇಲಾಖೆಗಳು ಆಯುಷ್ಇಲಾಖೆ ಸಹಕಾರದೊಂದಿಗೆ ಜೂನ್ 11 ರಿಂದ 20 ರವರೆಗೆ ಹತ್ತು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲು ನಿರ್ಧರಿಸಿವೆ. ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಸಂಸ್ಥೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮತ್ತು ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳು /ಸಂಘ ಸಂಸ್ಥೆ ಯೋಗೋತ್ಸವದಲ್ಲಿ ಭಾಗವಹಿಸುತ್ತಿದ್ದು, ಈ 04 ಸಂಸ್ಥೆಗಳಲ್ಲಿ ಸುಮಾರು 4 ಲಕ್ಷ ಮಂದಿ ರಾಜ್ಯಾದ್ಯಂತ ಯೋಗ ಪ್ರದರ್ಶನವನ್ನು ಮಾಡುವುದರ ಮೂಲಕ ಯೋಗೋತ್ಸವನ್ನು ಆಚರಿಸಲಿದ್ದಾರೆ. ಅಲ್ಲದೆ ಈ ಕಾರ್ಯಕ್ರಮದಲ್ಲಿ ಆಯುಷ್ ಇಲಾಖೆಯಿಂದ ಆರೋಗ್ಯಕರ ಜೀವನ ಶೈಲಿಯ ಕುರಿತು ಮಾಹಿತಿ ಹಾಗೂ ಆಯುಷ್ ಆರೋಗ್ಯ ತಪಾಸಣಾ ಶಿಬಿರಗಳನ್ನು ಏರ್ಪಡಿಸಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಬೆಂಗಳೂರಿನಲ್ಲಿನ ಬೆಂಗಳೂರು ಅಪಾರ್ಟ್‌ಮೆಂಟ್ ಅಸೋಸಿಯೇಷನ್, ಪ್ರಜಾಪಿತ ಬ್ರಹ್ಮಕುಮಾರಿ ಸಂಸ್ಥೆ, ಜೈನ್ ಯುನಿರ್ವಸಿಟಿ, ಲೂಲು ಮಾಲ್ ಹಾಗೂ ಮಾಲ್ ಆಫ್ ಏಷ್ಯಾ, ಸ್ಥಳಗಳಲ್ಲಿ ಯೋಗ ತರಬೇತಿ, ಆಯುಷ್ ವೈದ್ಯ ಪದ್ಧತಿಗಳ ಕುರಿತು ಅರಿವು ಹಾಗೂ ಆಯುಷ್ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯುಷ್ ಇಲಾಖಾ ವತಿಯಿಂದ ನಡೆಸಲಾಗುತ್ತಿದೆ.

ಈ ಕಾರ್ಯಕ್ರಮಗಳಿಗೆ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ಯೋಗ ಗಂಗೋತ್ರಿ ಟ್ರಸ್ಟ್, ಶ್ರೀ ಪತಂಜಲಿ ಯೋಗಾಶ್ರಮ ಟ್ರಸ್ಟ್, ಸಂಯಮ ಟ್ರಸ್ಟ್ ಹಾಗೂ ಇನ್ನಿತರ ಖಾಸಗಿ ಯೋಗ ಸಂಸ್ಥೆಗಳು ಅಗತ್ಯ ಸಹಕಾರವನ್ನು ನೀಡಲಿದ್ದು, ಮಾನಸಿಕ ಆರೋಗ್ಯ ಹಾಗೂ ದೈಹಿಕ ಆರೋಗ್ಯದ ಕುರಿತು ಸಾರ್ವಜನಿಕರಿಗೆ ಮಾಹಿತಿ ದೊರೆಯಲಿದೆ.‌

ಇದೇ ಸಂದರ್ಭದಲ್ಲಿ ಆಯುರ್ವೇದ ಶಬ್ದಕೋಶ, ಯೋಗೋತ್ಸವ ಪೋಸ್ಟರ್, ಯೋಗೋತ್ಸವ ವೆಬ್‌ಸೈಟ್ ಗೆ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು
ಕಾರ್ಯಕ್ರಮದಲ್ಲಿ ಆಯುಷ್ ಇಲಾಖೆಯ ಆಯುಕ್ತರಾದ ಶ್ರೀನಿವಾಸುಲು, ಟ್ರಾನ್ಸ್‌ ಡಿಸಿಪ್ಲಿನರಿ ವಿಶ್ವವಿದ್ಯಾಲಯದ ಉಪಕುಲಪತಿ ದರ್ಶನ್ ಶಂಕರ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

Tags: Dinesh GunduraoYogotsava
Previous Post

ಇಹಲೋಕ ತ್ಯಜಿಸಿದ ಖ್ಯಾತ ಸರೋದ್ ವಾದಕ ಪಂ. ರಾಜೀವ್ ತಾರಾನಾಥ್

Next Post

ಮಶೀನ್ ಟೂಲ್ ವಲಯದ ಉತ್ಕರ್ಷಕ್ಕೆ ಒತ್ತು, ವಿಷನ್ ಗ್ರೂಪ್ ಚೊಚ್ಚಲ ಸಭೆ ನಡೆಸಿದ ಕೈಗಾರಿಕಾ ಸಚಿವರು

Related Posts

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-
Top Story

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

by ಪ್ರತಿಧ್ವನಿ
April 21, 2026
0

ವಿಶೇಷ ಲೇಖನ : ನಾ. ದಿವಾಕರ್‌.. (ಡಾ ಬಾಬು ಜಗಜೀವನ್ರಾಮ್ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣ ಕೇಂದ್ರ ಹಾಗೂ ಪರಿಶಿಷ್ಟ ಜಾತಿ/ಪಂಗಡ ವಿಶೇಷ ಘಟಕ ಮೈಸೂರು ವಿಶ್ವವಿದ್ಯಾನಿಲಯ...

Read moreDetails
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

April 21, 2026
Next Post
ಮಶೀನ್ ಟೂಲ್ ವಲಯದ ಉತ್ಕರ್ಷಕ್ಕೆ ಒತ್ತು, ವಿಷನ್ ಗ್ರೂಪ್ ಚೊಚ್ಚಲ ಸಭೆ ನಡೆಸಿದ ಕೈಗಾರಿಕಾ ಸಚಿವರು

ಮಶೀನ್ ಟೂಲ್ ವಲಯದ ಉತ್ಕರ್ಷಕ್ಕೆ ಒತ್ತು, ವಿಷನ್ ಗ್ರೂಪ್ ಚೊಚ್ಚಲ ಸಭೆ ನಡೆಸಿದ ಕೈಗಾರಿಕಾ ಸಚಿವರು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada