
ನಾಗರಹೊಳೆ ಅರಣ್ಯದಲ್ಲಿ ಐದು ವರ್ಷದ ಗಂಡು ಹುಲಿಯ ಮೃತ ದೇಹ ಪತ್ತೆಯಾಗಿದೆ.ಅರಣ್ಯ ಇಲಾಖೆ ಸಿಬ್ಬಂದಿಗಳು ಗಸ್ತು ತಿರುಗುವ ವೇಳೆ ಪತ್ತೆಯಾಗಿರುವ ಹುಲಿಯ ಮೃತದೇಹ ಕಂಡು ಅಧಿಕಾರಿಗಳು ಶಾಕ್ ಆಗಿದ್ದಾರೆ.ನಾಗರಹೊಳೆ ಅರಣ್ಯ ಪ್ರದೇಶದ ಹುಣಸೂರು ವನ್ಯಜೀವಿ ವಲಯದ ವ್ಯಾಪ್ತಿಯ ಗೋವಿಂದೇಗೌಡ ಕಂಡಿ ಬಳಿ ಮೃತದೇಹ ಪತ್ತೆಯಾಗಿದೆ.ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಎರಡು ಹುಲಿಗಳ ನಡುವೆ ಕಾದಾಟ ನಡೆದು ಸಾವನಪ್ಪಿರುವ ಶಂಕೆ ವ್ಯಕ್ತವಾಗಿದೆ.ಸದ್ಯ ಹುಲಿಯ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ಅದನ್ನ ಸುಟ್ಟುಹಾಕಿದ್ದಾರೆ.ಎನ್.ಟಿ.ಸಿ.ಎ ಮಾರ್ಗಸೂಚಿಯಂತೆ ಮರಣೋತ್ತರ ಪರೀಕ್ಷೆ ನಡೆಸಿರುವ ಅರಣ್ಯಾಧಿಕಾರಿಗಳು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.