• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 3, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸ್ವಾತಂತ್ರ ಸೇನಾನಿಗಳಾದ ಕಿತ್ತೂರು ಚನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಬ್ರಿಟಿಷರಿಗೆ ಸಿಂಹಸ್ವಪ್ನವಾಗಿದ್ದರು: ಸಿಎಂ

ಪ್ರತಿಧ್ವನಿ by ಪ್ರತಿಧ್ವನಿ
June 16, 2024
in ಕರ್ನಾಟಕ, ರಾಜಕೀಯ
0
ಸ್ವಾತಂತ್ರ ಸೇನಾನಿಗಳಾದ ಕಿತ್ತೂರು ಚನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಬ್ರಿಟಿಷರಿಗೆ ಸಿಂಹಸ್ವಪ್ನವಾಗಿದ್ದರು: ಸಿಎಂ
Share on WhatsAppShare on FacebookShare on Telegram

ವಿಜಯಪುರ ಜೂ 16: ಅಂತರ್ಜಾತಿ, ಅಂತರ್ ಧರ್ಮೀಯ ಮದುವೆಗಳಿಂದ ಜಾತಿ ವ್ಯವಸ್ಥೆ ಅಳಿಸಲು ಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ನುಡಿದರು.

ADVERTISEMENT

ಸ್ವಾತಂತ್ರ ಸೇನಾನಿ ಹಾಗೂ ಕರ್ನಾಟಕ ಏಕೀಕರಣಕ್ಕಾಗಿ ಹೋರಾಡಿದ ಮಾಧವಾನಂದ ಪ್ರಭುಗಳ 44ನೇ ಪುಣ್ಯತಿಥಿ ಸಪ್ತಾಹದ ಅಂಗವಾಗಿ ನೂತನವಾಗಿ ನಿರ್ಮಿಸಿರುವ ಮಾಧವಾನಂದ ಪ್ರಭುಗಳ ದೇವಸ್ಥಾನವನ್ನು ಲೋಕಾರ್ಪಣೆಗೊಳಿಸಿ ಬಳಿಕ ಕಳಸಾರೋಹಣದಲ್ಲಿ ಪಾಲ್ಗೊಂಡು ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಾಧವಾನಂದ ಸ್ವಾಮಿಗಳು ಬಹುತ್ವದ ಪರವಾಗಿದ್ದರು. ಈ ಕಾರಣಕ್ಕೆ ಇವರನ್ನು ಸ್ಮರಿಸಬೇಕಾಗಿದೆ ಎಂದರು. ಪಾಳೇಗಾರಿಕೆ ಸಮಾಜಕ್ಕೆ, ಜನರ ಸ್ವಾತಂತ್ರ್ಯಕ್ಕೆ ಕಂಟಕ. ಹೀಗಾಗಿ ಬಲಾಡ್ಯರ ಕೈಯಲ್ಲಿ ಅಧಿಕಾರ ಇರಬಾರದು ಎಂದು ಮಹಾತ್ಮಗಾಂಧಿಯವರು ಹೇಳಿದ್ದರು ಎಂದು ವಿವರಿಸಿದರು. ಸ್ವಾತಂತ್ರ ಸೇನಾನಿಗಳಾದ ಕಿತ್ತೂರು ಚನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಬ್ರಿಟಿಷರಿಗೆ ಸಿಂಹಸ್ವಪ್ನವಾಗಿದ್ದರು.

ಭಾರತದೊಳಗಿದ್ದ ವರ್ಣ ವ್ಯವಸ್ಥೆ ಮತ್ತು ಜಾತಿ ವ್ಯವಸ್ಥೆ ಹಾಗೂ ಭಾರತದಲ್ಲಿನ 560 ಸಂಸ್ಥಾನಗಳಲ್ಲಿ ಇದ್ದ ಒಳ ಮುನಿಸನ್ನು ಬ್ರಿಟೀಷರು ಬಳಸಿಕೊಂಡು ಭಾರತವನ್ನು ಆಳಿದರು. ಜಾತಿ ವ್ಯವಸ್ಥೆ ಕಾರಣಕ್ಕೆ ಭಾರತದ ಶೂದ್ರರು ಕೇವಲ ಉತ್ಪಾದನೆ ಮಾಡಬೇಕಿತ್ತು. ಆದರೆ ತಾವು ಉತ್ಪಾದಿಸಿದ್ದನ್ನು ಅನುಭವಿಸುವ ಹಕ್ಕು ಮತ್ತು ಸ್ವಾತಂತ್ರ್ಯ ಇರಲಿಲ್ಲ. ಈ ಅಸಮಾನತೆ ವಿರುದ್ಧ ಶ್ರೀ ಮಾಧವಾನಂದ ಸ್ವಾಮೀಜಿಯವರು ಧ್ವನಿ ಎತ್ತಿ ಸ್ವಾತಂತ್ರ್ಯ ಹೋರಾಟದಲ್ಲಿ ತೊಡಗಿಸಿಕೊಂಡು ಜನರ ಮುಕ್ತಿಗಾಗಿ ಶ್ರಮಿಸಿದರು ಎಂದು ಮೆಚ್ಚುಗೆ ಸೂಚಿಸಿದರು.

ಬಸವಾದಿ ಶರಣರು 12ನೇ ಶತಮಾನದಲ್ಲಿ ಹೇಳಿದ್ದನ್ನು ಮಾಧವಾನಂದ ಪ್ರಭುಗಳು 20 ನೇ ಶತಮಾನದಲ್ಲಿ ಸಾರಿದರು ಎಂದು ವಿವರಿಸಿದರು. ಸಮರ್ಥ ಸದ್ಗುರು ರೇವಣಸಿದ್ದೇಶ್ವರ ಮಹಾರಾಜರು, ಮ.ನಿ.ಪ್ರ ಡಾ.ಮಹಾಂತಪ್ರಭು ಮಹಾಸ್ವಾಮಿಗಳು ವಿರಕ್ತಮಠ, ಶೇಗುಣಶಿ. ಅವಧೂತ ಸಿದ್ದ ಮಹಾರಾಜ್ , ಅರಕೇರಿ ಗುಡ್ಡ, ಸೋಮಲಿಂಗೇಶ್ವರ ಸ್ವಾಮಿಗಳು, ಮಖಣಾಪುರ, ಸಂಗನಬಸವೇಶ್ವರ ಸ್ವಾಮೀಜಿ, ಬಸವನಬಾಗೇವಾಡಿ ಇವರ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರಾದ ಎಂ.ಬಿ.ಪಾಟೀಲ್, ಶಿವಾನಂದ ಪಾಟೀಲ್, ಆರ್.ಬಿ.ತಿಮ್ಮಾಪುರ ಹಾಗೂ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಎಚ್.ಎಂ.ರೇವಣ್ಣ, ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್ ಸೇರಿ ಜಿಲ್ಲೆಯ ಶಾಸಕರುಗಳು ಮತ್ತು ಜನಪ್ರತಿನಿಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ವೇದಿಕೆ ಕಾರ್ಯಕ್ರಮಕ್ಕೂ ಮೊದಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಜಯಪುರ ಜಿಲ್ಲೆಯ ಚಡವಣ ತಾಲ್ಲೂಕಿನ ಇಂಚಗೇರಿಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ, ರಾಣಿ ಚನ್ನಮ್ಮ ಅವರ ಪ್ರತಿಮೆಗಳನ್ನು ಲೋಕಾರ್ಪಣೆಗೊಳಿಸಿ ಪುಷ್ಪಾರ್ಚನೆ ಮಾಡಿದ ಬಳಿಕ ಸ್ವಾತಂತ್ರ್ಯ ಸೇನಾನಿ ಹಾಗೂ ನಿಜರಾಜಯೋಗಿ ಸಮರ್ಥ ಸದ್ಗುರು ಶ್ರೀ ಮಾಧವಾನಂದ ಪ್ರಭುಗಳ ಪ್ರತಿಮೆಗೆ ಮಾಲಾರ್ಪಣೆ, ಪುಷ್ಪಾರ್ಚನೆ ಮಾಡಿ ಮಾಧವಾನಂದ ಪ್ರಭುಗಳ 44ನೇ ಪುಣ್ಯತಿಥಿ ಸಪ್ತಾಹದ ಅಂಗವಾಗಿ ನೂತನವಾಗಿ ನಿರ್ಮಿಸಿರುವ ಮಾಧವಾನಂದ ಪ್ರಭುಗಳ ದೇವಸ್ಥಾನವನ್ನು ಲೋಕಾರ್ಪಣೆಗೊಳಿಸಿದರು.

Tags: #CMSiddaramaiahKitturu ChannammaSangalli Rayanna
Previous Post

ಸೆಲೆಬ್ರಿಟಿಗಳು ಅಂದ್ರೆ ದೇವರು ಅಂತ ಭಾವಿಸಬೇಡಿ; ಕಿಚ್ಚ ಸುದೀಪ್ ಸಲಹೆ

Next Post

ರಮೇಶ್ ಅರವಿಂದ್ ಹಾಗೂ ಡಾಲಿ ಧನಂಜಯ ಅವರಿಂದ “ವಿ‌ ಸಿನಿಮಾಸ್” ಅನಾವರಣ ..

Related Posts

ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ..
Top Story

ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ..

by ಪ್ರತಿಧ್ವನಿ
May 2, 2026
0

ಬೆಂಗಳೂರು : ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ನಗರದ ಓಕಳೀಪುರಂನಲ್ಲಿ ರೇಷ್ಮೆ ಮತ್ತು ಖನಿಜ ಭವನ...

Read moreDetails
ಜೀವಾವಧಿ ಶಿಕ್ಷೆ ಹಿನ್ನೆಲೆ ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅಮಾನ್ಯ – ಧಾರವಾಡ ಕ್ಷೇತ್ರ ಖಾಲಿ

ಜೀವಾವಧಿ ಶಿಕ್ಷೆ ಹಿನ್ನೆಲೆ ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅಮಾನ್ಯ – ಧಾರವಾಡ ಕ್ಷೇತ್ರ ಖಾಲಿ

May 2, 2026
ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

May 2, 2026
ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

May 2, 2026
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಮೊದಲ ದಿನವೇ ಕೆಡಿ ಭರ್ಜರಿ ಓಪನಿಂಗ್:  ಮೊದಲ‌ ದಿನದ ಕಲೆಕ್ಷನ್ ಎಷ್ಟು ?

May 1, 2026
Next Post
ರಮೇಶ್ ಅರವಿಂದ್ ಹಾಗೂ ಡಾಲಿ ಧನಂಜಯ ಅವರಿಂದ “ವಿ‌ ಸಿನಿಮಾಸ್” ಅನಾವರಣ ..

ರಮೇಶ್ ಅರವಿಂದ್ ಹಾಗೂ ಡಾಲಿ ಧನಂಜಯ ಅವರಿಂದ "ವಿ‌ ಸಿನಿಮಾಸ್" ಅನಾವರಣ ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada