• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಆಂಧ್ರದಲ್ಲಿ ಜಗನ್ ಪಕ್ಷಕ್ಕೆ (Jagan’s party)ಶಾಕ್‌: ಬೆಳ್ಳಂಬೆಳಗ್ಗೆ ವೈಎಸ್ಆರ್‌ಸಿಪಿ ಪಕ್ಷದ (YSRCP Party Office) ಕಚೇರಿ ಧ್ವಂಸಗೊಳಿಸಿದ ಸ್ಥಳೀಯಾಡಳಿತ.

ಪ್ರತಿಧ್ವನಿ by ಪ್ರತಿಧ್ವನಿ
June 22, 2024
in Top Story, ಇದೀಗ
0
Share on WhatsAppShare on FacebookShare on Telegram
ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡ ಬಳಿಕ ಜಗನ್‌ ನೇತೃತ್ವದ ವೈಎಸ್‌ಆರ್‌ಸಿಪಿ ಪಕ್ಷಕ್ಕೆ ಆಡಳಿತದಲ್ಲಿರುವ ಟಿಡಿಪಿ ಶಾಕ್ ನೀಡಿದೆ.. ಗುಂಟೂರಿನಲ್ಲಿ ಜಗನ್ ಮೋಹನ್ ರೆಡ್ಡಿ ನೇತೃತ್ವದ ಬಿಎಸ್ಆರ್‌ಸಿಪಿ ಪಕ್ಷದ ಕಚೇರಿಯನ್ನು ಸ್ಥಳೀಯಾಡಳಿತವೂ ಧ್ವಂಸ ಮಾಡಿದೆ.
ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡ ಬಳಿಕ ಜಗನ್‌ ನೇತೃತ್ವದ ವೈಎಸ್‌ಆರ್‌ಸಿಪಿ ಪಕ್ಷಕ್ಕೆ ಆಡಳಿತದಲ್ಲಿರುವ ಟಿಡಿಪಿ ಶಾಕ್ ನೀಡಿದೆ.. ಗುಂಟೂರಿನಲ್ಲಿ ಜಗನ್ ಮೋಹನ್ ರೆಡ್ಡಿ ನೇತೃತ್ವದ ಬಿಎಸ್ಆರ್‌ಸಿಪಿ ಪಕ್ಷದ ಕಚೇರಿಯನ್ನು ಸ್ಥಳೀಯಾಡಳಿತವೂ ಧ್ವಂಸ ಮಾಡಿದೆ. ಅಕ್ರಮವಾಗಿ ಈ ಕಟ್ಟಡವನ್ನು ನಿರ್ಮಿಸಲಾಗಿದೆ ಎಂದು ಮುನ್ಸಿಪಲ್ ಆಡಳಿತವೂ ಆರೋಪಿಸಿದ್ದು, ಇಂದು ಮುಂಜಾನೆ ಈ ಅಕ್ರಮ ಕಟ್ಟಡವನ್ನು ಧ್ವಂಸಗೊಳಿಸಲಾಗಿದೆ. ಮಂಗಳಗಿರಿ ತಡೆಪಲ್ಲಿ ಮುನ್ಸಿಪಲ್ ಕಾರ್ಪೋರೇಷನ್‌ ಇಂದು ಬೆಳ್ಳಂಬೆಳಗ್ಗೆ ಬುಲ್ಡೋಜರ್‌ಗಳನ್ನು ಬಳಸಿ ಕಟ್ಟಡವನ್ನು ನೆಲೆಸಮಗೊಳಿಸಿದೆ.

ಈ ಕಟ್ಟಡವೂ ಅಕ್ರಮವಾಗಿದೆ ಎಂದು ರಾಜಧಾನಿ ಪ್ರದೇಶದ ಅಭಿವೃದ್ಧಿ ಪ್ರಾಧಿಕಾರವೂ(CRDA) ಜಗನ್ ಪಕ್ಷಕ್ಕೆ ನೊಟೀಸ್ ಕಳುಹಿಸಿತ್ತು. ನೊಟೀಸ್ ಹಿನ್ನೆಲೆಯಲ್ಲಿ ಜಗನ್ ನೇತೃತ್ವದ ವೈಎಸ್‌ಆರ್‌ಸಿಪಿ ಪಕ್ಷವೂ ಸಿಆರ್‌ಡಿಎ ಕ್ರಮದ ವಿರುದ್ಧ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು ಇದಾದ ಬಳಿಕ ಯಾವುದೇ ಕಟ್ಟಡ ಧ್ವಂಸ ಕಾರ್ಯ ನಡೆಸದಂತೆ ಹೈಕೋರ್ಟ್ ತಡೆ ನೀಡಿತ್ತು, ಇದನ್ನು ಸಿಆರ್‌ಡಿಎ ಕಮೀಷನರ್‌ಗೂ ವೈಎಸ್‌ಆರ್‌ಸಿಪಿ ಪಕ್ಷದ ವಕೀಲರು ತಿಳಿಸಿದ್ದರು. ಇದಾದ ನಂತರವೂ ಕಟ್ಟಡವನ್ನು ಧ್ವಂಸಗೊಳಿಸಲಾಗಿದೆ ಎಂದು ಪಕ್ಷದ ವಕ್ತಾರರೊಬ್ಬರು ದೂರಿದ್ದಾರೆ.

ಸಿಆರ್‌ಡಿಎ ಹಾಗೂ ಎಂಟಿಎಂಸಿ ಅಧಿಕಾರಿಗಳ ಪ್ರಕಾರ, ವೈಎಸ್‌ಆರ್‌ಸಿಪಿ ಪಕ್ಷದ ಕಚೇರಿಯನ್ನು ನೀರಾವರಿ ಇಲಾಖೆಗೆ ಸೇರಿದ ಜಾಗದಲ್ಲಿ ನಿರ್ಮಿಸಲಾಗಿದೆ. ಬೋಟ್‌ಯಾರ್ಡ್ ಆಗಿ ಬಳಸುತ್ತಿದ್ದ ಈ ಭೂಮಿಯನ್ನು ಜಗನ್ ನೇತೃತ್ವದ ಹಿಂದಿನ ಸರ್ಕಾರವೂ ಅತೀ ಕಡಿಮೆ ಬೆಲೆಗೆ ಭೋಗ್ಯಕ್ಕೆ ಪಡೆದಿತ್ತು ಎಂಬ ಆರೋಪಗಳಿವೆ. ಇದರ ಜೊತೆಗೆ ಸಿಆರ್‌ಡಿಎ ಹಾಗೂ ಎಂಟಿಎಂಸಿ ಅನುಮತಿ ಪಡೆಯದೆಯೇ ಇಲ್ಲಿ ಕಟ್ಟಡ ನಿರ್ಮಿಸಲಾಗಿದೆ ಎಂಬ ಆರೋಪವಿದೆ.
ಆದರೆ ಈಗ ಟಿಡಿಪಿ ನೇತೃತ್ವದ ಸರ್ಕಾರವೂ ಹಠಾತ್ ಆಗಿ ಪಕ್ಷದ ಕಚೇರಿಯನ್ನು ಧ್ವಂಸಗೊಳಿಸಿರುವುದನ್ನು ವೈಎಸ್‌ಆರ್‌ಸಿಪಿ ಪಕ್ಷದ ಅಧ್ಯಕ್ಷ ವೈ. ಎಸ್‌. ಜಗನ್ ಮೋಹನ್ ರೆಡ್ಡಿ ಖಂಡಿಸಿದ್ದಾರೆ. ಈ ಬಗ್ಗೆ ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿರುವ ಜಗನ್ ಮೋಹನ್ ರೆಡ್ಡಿ, ಚಂದ್ರಬಾಬು ನಾಯ್ಡು ಸೇಡಿನ ರಾಜಕಾರಣ ಮಾಡುತ್ತಿದ್ದಾರೆ. ಹೈಕೋರ್ಟ್ ಆದೇಶವನ್ನು ಉಲ್ಲಂಘಿಸಿ ಅವರು ವೈಎಸ್ಆರ್‌ಸಿಪಿಯ ಕೇಂದ್ರ ಕಚೇರಿಯನ್ನು ಬುಲ್ಡೋಜರ್ ಬಳಸಿ ಧ್ವಂಸಗೊಳಿಸಿದ್ದಾರೆ ಎಂದು ದೂರಿದ್ದಾರೆ.

ಈ ಕೃತ್ಯದ ಮೂಲಕ ಚಂದ್ರಬಾಬು ನಾಯ್ಡು ಅವರ ಮುಂದಿನ ಐದು ವರ್ಷಗಳ ಆಡಳಿತ ಹೇಗಿರಬಹುದು ಎಂಬುದನ್ನು ತೋರಿಸುತ್ತಿದ್ದಾರೆ. ಆದರೂ ಬೆದರಿಕೆ ಹಾಗೂ ರಾಜಕೀಯ ಸೇಡಿನಿಂದಾಗಿ ಪಕ್ಷ ಸಂಕಷ್ಟಕ್ಕೀಡಾದರೂ ಜನರ ಪರವಾಗಿ ಹೋರಾಡುತ್ತೇನೆ. ಅಲ್ಲದೇ ದೇಶದ ಎಲ್ಲಾ ಪ್ರಜಾಪ್ರಭುತ್ವ ಶಕ್ತಿಗಳು ಚಂದ್ರಬಾಬು ನಾಯ್ಡು ಅವರ ಈ ಕೃತ್ಯವನ್ನು ಖಂಡಿಸಬೇಕಾಗಿ ನಾನು ಮನವಿ ಮಾಡುತ್ತೇನೆ ಎಂದು ಜಗನ್ ಮೋಹನ್ ರೆಡ್ಡಿ ಹೇಳಿದ್ದಾರೆ.
ADVERTISEMENT
Tags: AndrapradeshpartyofficeTDPysjaganysrcp
Previous Post

ಜೋಧ್‌ಪುರದಲ್ಲಿ ಕೋಮು ಘರ್ಷಣೆ; 51 ಮಂದಿ ಬಂಧನ, ಇಬ್ಬರು ಪೊಲೀಸರಿಗೆ ಗಾಯ

Next Post

ಕೇಂದ್ರ ಸರ್ಕಾರ, ಬೇರೆ ರಾಜ್ಯ ಸರ್ಕಾರಗಳ ಮಾದರಿಯಲ್ಲಿ ನಾವು ಸಲಹೆ ಕೇಳಿದರೆ ತಪ್ಪೇನಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

Related Posts

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್
Top Story

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

by ಪ್ರತಿಧ್ವನಿ
March 4, 2026
0

ಬೆಂಗಳೂರು ದಕ್ಷಿಣ ಜಿಲ್ಲೆಯನ್ನು ನಂ.1 ಮಾಡುವುದು ಶಿವಕುಮಾರ್ ಅವರ ಕನಸು: ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್.. ಮಾಗಡಿ : "ಮಾಗಡಿ ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದರು. ಬೆಂಗಳೂರು ದಕ್ಷಿಣ ಜಿಲ್ಲೆಗೆ...

Read moreDetails
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
Next Post

ಕೇಂದ್ರ ಸರ್ಕಾರ, ಬೇರೆ ರಾಜ್ಯ ಸರ್ಕಾರಗಳ ಮಾದರಿಯಲ್ಲಿ ನಾವು ಸಲಹೆ ಕೇಳಿದರೆ ತಪ್ಪೇನಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada