ಕಬಾಬ್ (Kabab) ತಯಾರಿಕೆಯಲ್ಲಿ ಕೃತಕ ಬಣ್ಣಗಳ (Artifiial color) ಬಳಕೆ ಮಾಡಲಾಗುತ್ತಿರುವುದು ಪ್ರಯೋಗಾಲಯಗಳ ಮೂಲಕ ನಡೆಸಲಾದ ಪರೀಕ್ಷೆಯಿಂದ ದೃಢಪಟ್ಟಿದೆ. ಈ ಕೃತಕ ಬಣ್ಣಗಳು ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕಬಾಬ್ ತಯಾರಿಕೆ ವೇಳೆ ಕೃತಕ ಬಣ್ಣ ಬಳಕೆಯನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ.

ನಿಷೇಧದ ಆದೇಶ ಉಲ್ಲಂಘನೆಯ ಪ್ರಕರಣಗಳು ಕಂಡುಬಂದಲ್ಲಿ ಅಂತಹವರ ವಿರುದ್ಧ 7ವರ್ಷಗಳಿಂದ ಜೀವಾವಧಿವರೆಗೆ (7 years jail) ಜೈಲುಶಿಕ್ಷೆ ಹಾಗು 10 ಲಕ್ಷದವರೆಗೆ (10 lakhs fine) ದಂಡ ವಿಧಿಸಲು ಅವಕಾಶವಿದೆ. ರಾಜ್ಯದ ಎಲ್ಲಾ ಕಬಾಬ್ ತಯಾರಿಸುವ ಮತ್ತು ಮಾರಾಟ ಮಾಡುವ ಆಹಾರ ಉದ್ದಿಮೆದಾರರು ಈ ಆದೇಶವನ್ನು ತತಕ್ಷಣದಿಂದಲೇ ಪಾಲಿಸಲು ಸೂಚಿಸಲಾಗಿದೆ.