![](https://pratidhvani.com/wp-content/uploads/2024/06/dfsdfsds.avif)
ಕರ್ನಾಟಕದ ನಾಲ್ಕು ಸಾರಿಗೆ ನಿಗಮಗಳ ನಿವೃತ್ತ ನೌಕರರಿಗೆ ಸಾರಿಗೆ ಇಲಾಖೆ ಶುಭ ಸುದ್ದಿ ನೀಡಿದೆ. ಇವರ ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ.
ಸಾರಿಗೆ ನಿಗಮಗಳ ನಿವೃತ್ತಿಯಾಗಿರುವ ನೌಕರರಿಗೆ ರಾಜ್ಯ ಸರ್ಕಾರ ಶುಭ ಸುದ್ದಿ ನೀಡಿದೆ. ಕಾರ್ಮಿಕ ಸಂಘಟನೆಗಳ ಮನವಿಯ ಬೆನ್ನಲ್ಲೇ, ನಿವೃತ್ತಿಯಾದ ನೌಕರರಿಗೂ ವೇತನ ಪರಿಷ್ಕರಿಸಿ ಆದೇಶ ಹೊರಡಿಸಿದೆ. ಪರಿಣಾಮವಾಗಿ 2023ರ ಮಾರ್ಚ್ನಲ್ಲಿ ನಿವೃತ್ತಿಯಾದ ನೌಕರರಿಗೆ ಶೇ 15 ರಷ್ಟು ಹೆಚ್ಚುವರಿ ವೇತನ ಸಿಗಲಿದೆ.
![](https://pratidhvani.com/wp-content/uploads/2024/06/fddfd.webp)
2023 ರ ಮಾರ್ಚ್ನಲ್ಲಿ ನಿವೃತ್ತಿ ಹೊಂದಿದ ಅಧಿಕಾರಿ ಮತ್ತು ನೌಕರರಿಗೆ 2019 ರ ಡಿಸೆಂಬರ್ 31 ರಂದು ಅವರು ಪಡೆಯುತ್ತಿದ್ದ ಮೂಲವೇತನವನ್ನು ಪರಿಗಣಿಸಿ ಶೇ 15 ರಷ್ಟು ಹೆಚ್ಚಿಸಿ ಅದರಂತೆ ವೇತನ ಶ್ರೇಣಿ ಪರಿಷ್ಕರಿಸಲು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ನಾಲ್ಕು ನಿಗಮಗಳಿಗೆ ಬೇಕು 220 ಕೋಟಿ ರೂ.
ನಿವೃತ್ತಿಯಾದ ನೌಕರರಿಗೆ ವೇತನ ಪರಿಷ್ಕರಣೆಯ ಹೆಚ್ಚಿಸಿದ ಹಣ ಕೊಡಲು ನಾಲ್ಕು ಸಾರಿಗೆ ನಿಗಮಗಳಿಗೆ ಅಂದಾಜು 220 ಕೋಟಿ ರೂ. ಅಗತ್ಯವಿದೆ ಎಂದು ಅಂದಾಜಿಸಲಾಗಿದೆ.