• Home
  • About Us
  • ಕರ್ನಾಟಕ
Monday, November 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬಿ.ಕೆ. ಹರಿಪ್ರಸಾದ್ ಮಾಧ್ಯಮಗೋಷ್ಠಿ..!

ಪ್ರತಿಧ್ವನಿ by ಪ್ರತಿಧ್ವನಿ
July 4, 2024
in Top Story, ಕರ್ನಾಟಕ, ರಾಜಕೀಯ, ವಿಶೇಷ, ಶೋಧ
0
ಬಿ.ಕೆ. ಹರಿಪ್ರಸಾದ್ ಮಾಧ್ಯಮಗೋಷ್ಠಿ..!
Share on WhatsAppShare on FacebookShare on Telegram

18ನೇ ಲೋಕಸಭೆ ಚುನಾವಣೆ ಬಳಿಕ ಸಂಸತ್ ಅಧಿವೇಶನ ಕರೆಯುವಾಗ ರಾಷ್ಟ್ರಪತಿಗಳು ಉಭಯ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡುವುದು ಸಂಪ್ರದಾಯ.

ADVERTISEMENT

75 ವರ್ಷಗಳಲ್ಲಿ ನೆಹರೂ ಅವರಿಂದ ಹಿಡಿದು ಮೋದಿ ಅವರು ಈ ಸಂಪ್ರದಾಯ ಪಾಲಿಸಿಕೊಂಡು ಬಂದಿದ್ದರು. ರಾಷ್ಟ್ರಪತಿಗಳ ಭಾಶದ ಮೂಲಕ ದೇಶಕ್ಕೆ ಉತ್ತಮ ಸಂದೇಶ ರವಾನಿಸುವ ಪ್ರಕ್ರಿಯೆ ಇದಾಗಿದೆ.

ಆದರೆ ಮೋದಿ ಅವರು ರಾಷ್ಟ್ರಪತಿಗಳಿಂದ ಹೇಳಿಸಿರುವ ಭಾಷಣ ನೋಡಿದರೆ ದೇಶ ಹಾಗೂ ಸಂವಿಧಾನದ ಬಗ್ಗೆ ಮೋದಿ ಅವರಿಗೆ ಎಷ್ಟು ಗೌರವವಿದೆ ಎಂಬುದು ತಿಳಿಯುತ್ತದೆ.

ತುರ್ತುಪರಿಸ್ಥಿತಿಗೆ 50 ವರ್ಷಗಳಾಗಿದ್ದು ಈ ಸಂದರ್ಭದಲ್ಲಿ ಅಸಂವಿಧಾನಿಕ ಪದಗಳನ್ನು ಬಳಸಲಾಗಿದೆ. ದೇಶದಲ್ಲಿ ತುರ್ತುಪರಿಸ್ಥಿತಿ ಹೇರಲು ಸಂವಿಧಾನದ ಆರ್ಟಿಕಲ್ 352ನಲ್ಲಿ ಅವಕಾಶವಿದೆ. ದೇಶದ ಮೇಲೆ ಬಾಹ್ಯ ದಾಳಿ ಹಾಗೂ ಆಂತರಿಕ ಗದ್ದಲ ಇದ್ದಾಗ ತುರ್ತುಪರಿಸ್ಥಿತಿ ಹೇರಬಹುದು ಎಂದು ಸಂವಿಧಾನದಲ್ಲಿ ಸ್ಪಷ್ಟವಾಗಿ ತಿಳಿಸಿದೆ.

ದೇಶದಲ್ಲಿ ರಾಷ್ಟ್ರ ವಿರೋಧಿ ಶಕ್ತಿಗಳನ್ನು ಹತ್ತಿಕ್ಕಿ, ದೇಶದ ಪರಿಸ್ಥಿತಿ ನಿಭಾಯಿಸಲು ಶ್ರೀಮತಿ ಇಂದಿರಾ ಗಾಂಧಿ ಅವರು ಸಂವಿಧಾನ ಬದ್ಧವಾಗಿ ತುರ್ತುಪರಿಸ್ಥಿತಿ ಹೇರಿದರು.

ಕಾಂಗ್ರೆಸ್ ಸರ್ಕಾರ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಯಾವುದೇ ರಾಜ್ಯದ ಮುಖ್ಯಮಂತ್ರಿಗಳನ್ನು ಬಂಧನ ಮಾಡಿರಲಿಲ್ಲ. ಸಮಾಜಘಾತುಕ ಶಕ್ತಿಗಳು ಹಾಗು ಸರ್ಕಾರ ಬುಡಮೇಲು ಮಾಡುವ ಪ್ರಯತ್ನಕ್ಕೆ ಮುಂದಾದವರನ್ನು ಮಾತ್ರ ನಿಯಂತ್ರಣ ಮಾಡಲಾಗಿತ್ತು. ಸಂವಿಧಾನಕ್ಕೆ ಅಡಚಣೆ ಮಾಡುವ ಕೆಲಸ ಆಗಿರಲಿಲ್ಲ.

ಆಗಿನ ಹೋರಾಟಗಾರರು ಇಂದಿರಾ ಗಾಂಧಿ ಅವರ ಸರ್ಕಾರದ ವಿರುದ್ಧ ಹೋರಾಟ ಮಾಡದೇ, ದೇಶದ ಸೇನೆ ಹಾಗೂ ಸಶಸ್ತ್ರ ಪಡೆಗಳು ದಂಗೆ ಮಾಡುವಂತೆ ಕರೆ ನೀಡುತ್ತಾರೆ. ಆಗ ಬೇರೆ ದಾರಿಯಿಲ್ಲದೆ ಇಂದಿರಾ ಗಾಂಧಿ ಅವರು ತುರ್ತು ಪರಿಸ್ಥಿತಿ ಹೇರಿ ಪರಿಸ್ಥಿತಿ ನಿಯಂತ್ರಿಸಿದರು. ತುರ್ತು ಪರಿಸ್ಥಿತಿ ಹೇರಿದ ಇಂದಿರಾ ಗಾಂಧಿ ಅವರೇ ತುರ್ತುಪರಿಸ್ಥಿತಿ ಹಿಂಪಡೆದರು.

ಇಂದಿರಾ ಗಾಂಧಿ ಅವರು ಎಂದಿಗೂ ತಮ್ಮ ಎದುರಾಳಿಗಳ ಮನೆ ಮುಂದೆ ಬುಲ್ಡೋಜರ್ ಕಳುಹಿಸಲಿಲ್ಲ. ಐಎಎಸ್ ಅಧಿಕಾರಿಗಳನ್ನು ಬಂಧಿಸಿರಲಿಲ್ಲ. ನಕಲಿ ಎನ್ ಕೌಂಟರ್ ಮಾಡಲಿಲ್ಲ.

ಮೋದಿ ಅವರು ತಮ್ಮ ಭಾಷಣದಲ್ಲಿ ವಿವೇಕಾನಂದ ಹಾಗೂ ಸಾರ್ವರ್ಕರ್ ವಿಚಾರ ಹೇಳಿದರು.

ಕಾಂಗ್ರೆಸ್ ಪಕ್ಷ ಯಾವುದೇ ರೀತಿ ಅಸಂವಿಧಾನಿಕ ಕ್ರಮ ಕೈಗೊಂಡಿಲ್ಲ. ತುರ್ತು ಪರಿಸ್ಥಿತಿ ನಂತರವೂ ಜನ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ನೀಡಿ ಗೆಲ್ಲಿಸಿದ್ದರು.

ಸಂವಿಧಾನ ಬದಲಾವಣೆ ಮಾಡಬೇಕು ಎಂದು 2015ರ ಬಿಹಾರ ಚುನಾವಣೆ ಸಮಯದಲ್ಲಿ ಮೋಹನ್ ಭಾಗವತ್ ಅವರು ಮೀಸಲಾತಿ ವಿರುದ್ಧ ಹೇಳಿಕೆ ನೀಡಿದ್ದರು. ವಾಜಪೇಯಿ ಅವರು ಪ್ರಧಾನಮಂತ್ರಿಯಾಗಿದ್ದ ಸಂದರ್ಭದಲ್ಲಿ ಮೀಸಲಾತಿ ತೆಗೆಯಲು ಪುನರ್ಪರಿಶೀಲನೆ ಮಾಡಲು ಮುಂದಾಗಿದ್ದಾಗ ರಾಷ್ಟ್ರಪತಿಗಳ ಕೆ.ಆರ್ ನಾರಾಯಣ ಅವರು ಇದಕ್ಕೆ ಅವಕಾಶ ನೀಡಲಿಲ್ಲ. ಸಂವಿಧಾನ ತಿದ್ದುಪಡಿಗೂ ಸಂವಿಧಾನ ಬದಲಾವಣೆಗೂ ಬಹಳ ವ್ಯತ್ಯಾಸವಿದೆ.

ಲೋಕಸಭೆ ಚುನಾವಣೆಯಲ್ಲಿ ರಾಮಮಂದಿರ ನಿರ್ಮಾಣದ ಹೊರತಾಗಿಯೂ ಉತ್ತರಪ್ರದೇಶದಲ್ಲಿ ಬಿಜೆಪಿ ಹಿನ್ನಡೆ ಅನುಭವಿಸಿದ ನಂತರ ಬಿಜೆಪಿ ನಾಯಕರು ಬುದ್ಧಿಭ್ರಮಣೆಗೆ ಒಳಗಾಗಿದ್ದಾರೆ. ಅವರ ಭಾಷಣಗಳೇ ಇದಕ್ಕೆ ಸಾಕ್ಷಿ.

ರಾಹುಲ್ ಗಾಂಧಿ ಸಾಂವಿಧಾನಿಕವಾಗಿ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದು, ಅವರ ಬಗ್ಗೆ ಪ್ರಧಾನಿ ಮೋದಿ ಅವರು ಮಾತನಾಡುತ್ತಿರುವುದು ನೋಡಿದರೆ ಬುದ್ಧಿಭ್ರಮಣೆ ಯಾಗಿರುವುದಕ್ಕೆ ಸಾಕ್ಷಿ.

ರಾಹುಲ್ ಗಾಂಧಿ ಅವರು ಮೋದಿ ಅವರ ಬಗ್ಗೆ ತಪ್ಪಾಗಿ ಮಾತನಾಡಿದ್ದಾರೆ ಅವರನ್ನೇ ನೇರವಾಗಿ ಪ್ರಶ್ನೆ ಮಾಡಬಹುದಾಗಿತ್ತು. ಆದರೆ ಬಾಲಕ ಬುದ್ಧಿ, ಬಚ್ಚಾ ಎಂಬ ಪದ ಬಳಕೆ ಮಾಡಿದ್ದಾರೆ. ಆಮೂಲಕ ದೇಶದ ಮಕ್ಕಳ ಬಗ್ಗೆ ಅವಹೇಳನ ಮಾಡಿದ್ದಾರೆ. ದೇಶದಲ್ಲಿ ಇವರಿಗಿಂತ ಹಾಗೂ ಇವರ ಮಂತ್ರಿಗಳಿಗಿಂತ ಹೆಚ್ಚು ಬುದ್ಧಿವಂತಿಕೆ ಇರುವ ಮಕ್ಕಳು ಇದ್ದಾರೆ.

ಮೋದಿ ಅವರು ತಮ್ಮ ಭಾಷಣದಲ್ಲಿ ದೇಶಕ್ಕಾಗಿ ಏನು ಮಾಡುತ್ತೇವೆ ಎಂದು ಮಾತನಾಡಲೇ ಇಲ್ಲ. ದೇಶದಲ್ಲಿ 24 ಲಕ್ಷ ವಿದ್ಯಾರ್ಥಿಗಳು ನೀಟ್ ಪರೀಕ್ಷೆಯ ಆಕ್ರಮಣದಿಂದ ವಂಚನೆಗೆ ಒಳಗಾಗಿದ್ದಾರೆ. ಅವರ ಬಗ್ಗೆ ಮಾತಾಡಲಿಲ್ಲ. ಮಣಿಪುರ ಗಲಭೆ ಸಂತ್ರಸ್ತರ ಬಗ್ಗೆ ಮಾತನಾಡಲಿಲ್ಲ. ದೇಶದ ಗಡಿಯನ್ನು ಚೀನಾ ಸೇನೆ ಅತಿಕ್ರಮಣ ಮಾಡಿರುವ ಬಗ್ಗೆ ಮಾತಾಡಲಿಲ್ಲ.

ಮೋದಿ ಅವರು ತಮ್ಮ ಭಾಷಣದಲ್ಲಿ ಕೇವಲ ರಾಹುಲ್ ಗಾಂಧಿ ಅವರನ್ನು ಟೀಕೆ ಮಾಡುವುದರಲ್ಲೇ ನಿರತರಾದರು. ನನ್ನ ರಾಜಕೀಯ ಇತಿಹಾಸದಲ್ಲಿ ಇಷ್ಟು ಕೀಳುಮಟ್ಟದ ಭಾಷಣ ಮಾಡಿದ ಮತ್ತೊಬ್ಬ ಪ್ರಧಾನಿ ಇಲ್ಲ.

ಮೋದಿ ಅವರು ತಮ್ಮ ಭಾಷಣದಲ್ಲಿ ವಿವೇಕಾನಂದ ಹಾಗೂ ಸಾರ್ವರ್ಕರ್ ಅವರ ಬಗ್ಗೆ ಮಾತನಾಡಿದರು. ವಿವೇಕಾನಂದ ಅವರು ಚಿಕಾಗೋ ಭಾಷಣದಲ್ಲಿ ಪ್ರಪಂಚದ ಶೋಷಿತ, ತುಳಿತಕ್ಕೆ ಒಳಗಾದ ಎಲ್ಲಾ ಜಾತಿ, ಧರ್ಮದವರಿಗೆ ಆಶ್ರಯ ನೀಡಿರುವ ಭಾರತ ದೇಶದ ಬಗ್ಗೆ ನನಗೆ ಹೆಮ್ಮೆ ಇದೆ ಎಂದು ಹೇಳಿದ್ದರು. ಹೀಗಾಗಿ ಮೋದಿ ಹಾಗೂ ಬಿಜೆಪಿ ಅವರಿಗೆ ವಿವೇಕಾನಂದರ ಹೆಸರು ಹೇಳುವ ಯೋಗ್ಯತೆ ಇಲ್ಲ. ಇನ್ನು ಸಾರ್ವರ್ಕರ್ ಅವರು ಯಾವುದೇ ಧರ್ಮದ ಮೇಲೆ ನಂಬಿಕೆ ಇಲ್ಲದ ನಾಸ್ತಿಕರು. ಇವರಿಬ್ಬರ ಹೆಸರು ಹೇಳಿ ಮೋದಿ ಅವರು ಭಾಷಣ ಮಾಡಿದ್ದಾರೆ.

ಮೋದಿ ಅವರು ನಮ್ಮ ಪಕ್ಷದ ಅನೇಕ ನಾಯಕರ ಬಗ್ಗೆ ಕೀಳಾಗಿ ಮಾತನಾಡಿ ಪ್ರಧಾನಮಂತ್ರಿ ಹುದ್ದೆಗೆ ಕಳಂಕ ತಂದಿದ್ದಾರೆ. ಮೋದಿ ಅವರು ತಮ್ಮ ಭಾಷಣದಲ್ಲಿ ಕಾಂಗ್ರೆಸ್ 543 ಸ್ಥಾನಗಳಲ್ಲಿ ಕೇವಲ 99 ಸ್ಥಾನ ಪಡೆದಿದ್ದಾರೆ ಎಂದು ಹೇಳಿದ್ದಾರೆ. ಬಿಜೆಪಿ ಅವರು ಕೂಡ 543 ಸ್ಥಾನಗಳಲ್ಲಿ 242 ಸ್ಥಾನ ಪಡೆದಿದ್ದಾರೆ. ಬೇರೆಯವರ ಹೆಗಲ ಮೇಲೆ ಕೂತು ಸರ್ಕಾರ ಮಾಡಬೇಕಿದೆ.

ಬಿಜೆಪಿಯ ಪಿತೃ ಸಂಸ್ಥೆ ಆರ್ ಎಸ್ ಎಸ್ ನಾಯಕರು ತುರ್ತುಪರಿಸ್ಥಿತಿ ಬೆಂಬಲ ಘೋಷಣೆ ಮಾಡಿದ್ದರು. ಆದರೂ ಬಿಜೆಪಿಯವರು ಆರ್ ಎಸ್ ಎಸ್ ವಿರುದ್ಧವಾಗಿ ಹೋಗುತ್ತಿದ್ದಾರೆ.

ತುರ್ತು ಪರಿಸ್ಥಿತಿಯ ನಂತರ ದೇಶದ ಜನ 1980, 1984, 1991, 2004, 2009ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಬೀದರ್: ಕೃಷಿ ಇಲಾಖೆ ಯೋಜನೆ ದುರ್ಬಳಕೆ ತಡೆಯಲು ಆಗ್ರಹಿಸಿ ಪ್ರತಿಭಟನೆ

Next Post

ಮಣ್ಣುಕುಸಿತ ಪ್ರಕರಣ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಸಂತಾಪ

Related Posts

Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
0

ಬಿಹಾರ ಚುನಾವಣೆ ಪ್ರಚಾರದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಬಿಹಾರ ಚುನಾವಣಾ ಪ್ರಚಾರಕ್ಕೆ ಕರೆ ಬಂದರೆ ಅಗತ್ಯವಾಗಿ ತೆರಳುತ್ತೇನೆ. ಈ ಬಾರಿ ಚುನಾವಣೆಯಲ್ಲಿ ಪ್ರತಿಪಕ್ಷಗಳ ಮೈತ್ರಿಕೂಟ ಜಯ...

Read moreDetails

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

November 3, 2025
ಬಿಹಾರ ವಿಧಾನಸಭೆ ಚುನಾವಣೆ: ತೇಜಸ್ವಿ ಯಾದವ್ ಗೆಲುವಿಗೆ ದಾರಿ ಮಾಡಿಕೊಡುತ್ತಾ ಎನ್‌ಡಿಎ..?

ಬಿಹಾರ ವಿಧಾನಸಭೆ ಚುನಾವಣೆ: ತೇಜಸ್ವಿ ಯಾದವ್ ಗೆಲುವಿಗೆ ದಾರಿ ಮಾಡಿಕೊಡುತ್ತಾ ಎನ್‌ಡಿಎ..?

November 3, 2025
ರೇಣುಕಾಸ್ವಾಮಿ ಹತ್ಯೆ ಕೇಸ್: ಆರೋಪಿಗಳ ವಿರುದ್ಧ ದೋಷಾರೋಪಣೆ ನಿಗಧಿ

ರೇಣುಕಾಸ್ವಾಮಿ ಹತ್ಯೆ ಕೇಸ್: ಆರೋಪಿಗಳ ವಿರುದ್ಧ ದೋಷಾರೋಪಣೆ ನಿಗಧಿ

November 3, 2025
Next Post
ಮಣ್ಣುಕುಸಿತ ಪ್ರಕರಣ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಸಂತಾಪ

ಮಣ್ಣುಕುಸಿತ ಪ್ರಕರಣ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಸಂತಾಪ

Recent News

Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
ಬಿಹಾರ ವಿಧಾನಸಭೆ ಚುನಾವಣೆ: ತೇಜಸ್ವಿ ಯಾದವ್ ಗೆಲುವಿಗೆ ದಾರಿ ಮಾಡಿಕೊಡುತ್ತಾ ಎನ್‌ಡಿಎ..?
Top Story

ಬಿಹಾರ ವಿಧಾನಸಭೆ ಚುನಾವಣೆ: ತೇಜಸ್ವಿ ಯಾದವ್ ಗೆಲುವಿಗೆ ದಾರಿ ಮಾಡಿಕೊಡುತ್ತಾ ಎನ್‌ಡಿಎ..?

by ಪ್ರತಿಧ್ವನಿ
November 3, 2025
ರೇಣುಕಾಸ್ವಾಮಿ ಹತ್ಯೆ ಕೇಸ್: ಆರೋಪಿಗಳ ವಿರುದ್ಧ ದೋಷಾರೋಪಣೆ ನಿಗಧಿ
Top Story

ರೇಣುಕಾಸ್ವಾಮಿ ಹತ್ಯೆ ಕೇಸ್: ಆರೋಪಿಗಳ ವಿರುದ್ಧ ದೋಷಾರೋಪಣೆ ನಿಗಧಿ

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

November 3, 2025

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada