• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಅಂಕಣ

ಲೋಪವಾಗಿದೆ ಹೊರತು ಆರ್ಥಿಕ ನಷ್ಟವಿಲ್ಲ: ಬಾಬುವಾಲಿ

ಪ್ರತಿಧ್ವನಿ by ಪ್ರತಿಧ್ವನಿ
July 4, 2024
in ಅಂಕಣ, ಇದೀಗ, ಕರ್ನಾಟಕ, ರಾಜಕೀಯ, ವಿಶೇಷ
0
ಲೋಪವಾಗಿದೆ ಹೊರತು ಆರ್ಥಿಕ ನಷ್ಟವಿಲ್ಲ: ಬಾಬುವಾಲಿ
Share on WhatsAppShare on FacebookShare on Telegram

‘ಬೀದರ್‌ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ (ಬಿಡಿಎ) ನಾನು ಅಧ್ಯಕ್ಷನಾಗಿದ್ದ ಅವಧಿಯಲ್ಲಿ ಕಾನೂನಿನ ಪ್ರಕಾರ ಕೆಲವು ಲೋಪದೋಷಗಳಾಗಿವೆ ಹೊರತು ಯಾವುದೇ ರೀತಿಯ ಆರ್ಥಿಕ ನಷ್ಟವಾಗಿಲ್ಲ. ಇದನ್ನು ತನಿಖಾ ತಂಡಗಳೇ ಸ್ಪಷ್ಟಪಡಿಸಿವೆ’ ಎಂದು ಬಿಡಿಎ ಮಾಜಿ ಅಧ್ಯಕ್ಷ ಬಾಬುವಾಲಿ ಸ್ಪಷ್ಟಪಡಿಸಿದ್ದಾರೆ.

ADVERTISEMENT

ಬಾಬುವಾಲಿ ಅವರ ಅವಧಿಯಲ್ಲಿ ಅವ್ಯವಹಾರ ನಡೆದಿದ್ದು, ಅವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಿ, ಬಂಧಿಸಬೇಕು’ ಎಂದು ವಿಧಾನ ಪರಿಷತ್‌ ಮಾಜಿ ಸದಸ್ಯ ಅರವಿಂದಕುಮಾರ ಅರಳಿ ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದ್ದರು. ಅದರ ಬೆನ್ನಲ್ಲೇ ಗುರುವಾರ ಮಾಧ್ಯಮಗಳಿಗೆ ಬಾಬುವಾಲಿ ಪತ್ರಿಕಾ ಹೇಳಿಕೆ ಬಿಡುಗಡೆಗೊಳಿಸಿ ಅರಳಿ ಅವರು ಮಾಡಿರುವ ಆರೋಪಗಳು ಸುಳ್ಳೆಂದು ಸ್ಪಷ್ಟೀಕರಣ ನೀಡಿದ್ದಾರೆ.

‘ಅವ್ಯವಹಾರದ ಆರೋಪಗಳಿಗೆ ಸಂಬಂಧಿಸಿದಂತೆ ಕಲಬುರಗಿ ಪ್ರಾದೇಶಿಕ ಆಯುಕ್ತರು, ನಗರ ಮತ್ತು ಗ್ರಾಮಾಂತರ ಯೋಜನೆ ಇಲಾಖೆ ಹಾಗೂ ಲೋಕಾಯುಕ್ತ ತನಿಖಾ ತಂಡಗಳು ತನಿಖೆ ನಡೆಸಿ ವರದಿ ಸಲ್ಲಿಸಿವೆ. ಅದರ ಪ್ರಕಾರ, ಕಾನೂನಿನ ಲೋಪದೋಷಗಳಾಗಿವೆ ಹೊರತು ಪ್ರಾಧಿಕಾರಕ್ಕೆ ಯಾವುದೇ ಆರ್ಥಿಕ ನಷ್ಟವಾಗಿದೆ ಎಂದು ತಿಳಿಸಿಲ್ಲ. ನಾನು ಅಧ್ಯಕ್ಷನಿದ್ದಾಗ ಯಾವುದೇ ಹಣದ ಅವ್ಯವಹಾರವಾಗಲಿ ಅಥವಾ ಯಾವುದೇ ಕಾನೂನು ಬಾಹಿರ ಚಟುವಟಿಕೆ ನಡೆದಿಲ್ಲ. ನಾನು ಅದರಲ್ಲಿ ಭಾಗಿಯಾಗಿಲ್ಲ’ ಎಂದು ತಿಳಿಸಿದ್ದಾರೆ.

ಅರವಿಂದಕುಮಾರ ಅರಳಿ ಅವರು ನನ್ನ ವಿರುದ್ಧ ವೈಯಕ್ತಿಕ ದ್ವೇಷ ಸಾಧಿಸುತ್ತಿದ್ದಾರೆ. ಇವರು ಕಾಂಗ್ರೆಸ್ ಪಕ್ಷದವರಾಗಿದ್ದು, ಕಾಂಗ್ರೆಸ್ ಸರ್ಕಾರದಲ್ಲಿ ಅಧಿಕಾರ ದುರುಪಯೋಗ ಪಡಿಸಿಕೊಂಡು ಅಧಿಕಾರಿಗಳ ಮೇಲೆ ಒತ್ತಡ ಹೇರಿ, ನನ್ನೊಂದಿಗೆ ವೈಯಕ್ತಿಕ ದ್ವೇಷ ಮಾಡುತ್ತಿದ್ದಾರೆ. ಕ್ರಿಮಿನಲ್ ಮೊಕದ್ದಮೆ ಹೂಡುವಂತೆ ಒತ್ತಡ ಹೇರುತ್ತಿದ್ದಾರೆ. ನಾನು ಬೀದರ್‌ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷನಾಗಿ ಅಧಿಕಾರ ಸ್ವೀಕರಿಸಿದ ಸಮಯದಲ್ಲಿ ₹3 ಕೋಟಿ ಹಣವಿತ್ತು. ನನ್ನ ಅಧಿಕಾರದ ಅವಧಿ ಕೊನೆಗೊಂಡ ಸಂದರ್ಭದಲ್ಲಿ ಪ್ರಾಧಿಕಾರದ ಖಾತೆಯಲ್ಲಿ ₹‌‌23 ಕೋಟಿ ಹಣವಿತ್ತು’ ಎಂದು ನೆನಪಿಸಿದ್ದಾರೆ.

‌’ಬೀದರ್‌ ನಗರಾಭಿವೃದ್ಧಿ ಪ್ರಾಧಿಕಾರದ ಎಲ್ಲ ತೀರ್ಮಾನಗಳನ್ನು ಸಭೆಯಲ್ಲಿ ಚರ್ಚಿಸಿ ತೆಗೆದುಕೊಳ್ಳಲಾಗಿದೆ. ಅಂದಿನ ಸಭೆಯ ಸದಸ್ಯರಾಗಿದ್ದ ಹಾಲಿ ಪೌರಾಡಳಿತ ಸಚಿವ ರಹೀಂ ಖಾನ್, ಮಾಜಿ ಸಭಾಪತಿ ರಘುನಾಥರಾವ್‌ ಮಲ್ಕಾಪುರೆ, ಸ್ವತಃ ಅರವಿಂದಕುಮಾರ ಅರಳಿ ಅವರು ಎಲ್ಲ ಕಡತಗಳಿಗೆ ಸಹಿ ಹಾಕಿದ್ದಾರೆ’ ಎಂದು ತಿಳಿಸಿದ್ದಾರೆ.

‘ಸೈಟ್‌ ಕೊಡಲು ನಿರಾಕರಿಸಿದ್ದಕ್ಕೆ ದ್ವೇಷ’

‘ವಿಧಾನ ಪರಿಷತ್‌ ಮಾಜಿ ಸದಸ್ಯ ಅರವಿಂದಕುಮಾರ ಅರಳಿ ಅವರು ಉದ್ಯಾನಕ್ಕೆ ಸೇರಿದ ಜಾಗದಲ್ಲಿ ಒಂದು ಸೈಟ್ ಕೊಡುವಂತೆ ನನಗೆ ಕೇಳಿದ್ದರು. ಉದ್ಯಾನಕ್ಕೆ ಸೇರಿದ ಜಾಗದಲ್ಲಿ ಸೈಟ್ ನೀಡುವುದು ಅಕ್ರಮವಾಗುತ್ತದೆ. ಅದನ್ನು ಕೊಡಲು ಬರುವುದಿಲ್ಲ ಎಂದು ನಾನು ಹೇಳಿರುವುದಕ್ಕೆ ನನ್ನ ವಿರುದ್ಧ ವೈಯಕ್ತಿಕ ದ್ವೇಷ ಸಾಧಿಸುತ್ತಿದ್ದಾರೆ. ಇದು ಎಲ್ಲರಿಗೂ ಗೊತ್ತಿರುವ ವಿಷಯ’ ಎಂದು ಬಾಬುವಾಲಿ ಆರೋಪಿಸಿದ್ದಾರೆ. ‘ನಾನು ಯಾವುದೇ ರೀತಿಯ ಕಾನೂನು ಹೋರಾಟಕ್ಕೆ ಸಿದ್ದನಿದ್ದೇನೆ. ಅರಳಿ ಕಿರುಕುಳ ಕೊಡುವ ಕ್ರಿಮಿನಲ್ ಮನೋಭಾವ ಹೊಂದಿರುವ ವ್ಯಕ್ತಿ. ಎಲ್ಲ ಅಧಿಕಾರಿಗಳಿಗೆ ಕಿರುಕುಳ ನೀಡುವುದೇ ಒಂದು ಅಭ್ಯಾಸವಾಗಿದೆ. ವಿಶೇಷವಾಗಿ ನನ್ನ ಅಧಿಕಾರದ ಅವಧಿಯಲ್ಲಿ ಅಧಿಕಾರಿಗಳಿಗೆ ಕಿರುಕುಳ ನೀಡಿದ್ದಾರೆ. ಇವರು ಮಾಡಿರುವ ಅಕ್ರಮಗಳನ್ನು ಶೀಘ್ರದಲ್ಲೇ ಬಯಲಿಗೆಳೆಯುತ್ತೇನೆ’ ಎಂದು ಹೇಳಿದ್ದಾರೆ.

Tags: BabuvaliBidar DistrictBidar Press ClubBJPCongress Partyಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಜುಲೈ 7ರಂದು ಜೈ ಜಗನ್ನಾಥ ರಥಯಾತ್ರೆ

Next Post

ಆಸ್ಪತ್ರೆಯಿಂದ ಬಿಜೆಪಿ ಭೀಷ್ಮ LK ಆಡ್ವಾಣಿ ಡಿಸ್ಚಾರ್ಜ್..

Related Posts

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ
ಕರ್ನಾಟಕ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

by ಪ್ರತಿಧ್ವನಿ
April 11, 2026
0

ಕುಂದಾಪುರ: ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಶಿಕ್ಷಕರ ಜೊತೆಗೂಡಿ ಎಐ (Artificial Intelligence)...

Read moreDetails
ಹೆಣ್ಣು ದನಿಗೆ ದನಿಯಾಗುವ ಸಾಹಿತ್ಯ ಹೂರಣ-ನಾ ದಿವಾಕರ ಲೇಖನ

ಹೆಣ್ಣು ದನಿಗೆ ದನಿಯಾಗುವ ಸಾಹಿತ್ಯ ಹೂರಣ-ನಾ ದಿವಾಕರ ಲೇಖನ

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
Next Post
ಆಸ್ಪತ್ರೆಯಿಂದ ಬಿಜೆಪಿ ಭೀಷ್ಮ LK ಆಡ್ವಾಣಿ ಡಿಸ್ಚಾರ್ಜ್..

ಆಸ್ಪತ್ರೆಯಿಂದ ಬಿಜೆಪಿ ಭೀಷ್ಮ LK ಆಡ್ವಾಣಿ ಡಿಸ್ಚಾರ್ಜ್..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada