
ಮಾಜಿ ಸಚಿವ ಬಿ.ಸಿ ಪಾಟೀಲ್ ಅಳಿಯ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. 41 ವರ್ಷದ ಪ್ರತಾಪ್ ಕುಮಾರ್ ಕೆ.ಜಿ ವಿಷ ಸೇವಿಸಿ ಆತ್ಯಹತ್ಯೆಗೆ ಶರಣಾಗಿರುವ ದುರ್ದೈವಿ. ದಾವಣಗೆರೆ ಜಿಲ್ಲೆ ಹೊನ್ನಾಳಿ ಅರಣ್ಯ ಪ್ರದೇಶದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.ಹೊನ್ನಾಳಿಯ ಅರಣ್ಯ ಪ್ರದೇಶದ ರಸ್ತೆ ಬದಿಯಲ್ಲಿ ಕಾರು ನಿಲ್ಲಿಸಿ, ಕಾಡಿನ ನಡುವೆ ಹೋಗಿದ್ದ ಪ್ರತಾಪ್ ಕುಮಾರ್ ವಿಷ ಸೇವಿಸಿ ಪ್ರತಾಪ್ ಆತ್ಮಹತ್ಯೆಗೆ ಯತ್ನ ಮಾಡಿದ್ದು, ಕೂಡಲೇ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ ಬಳಿಕ ಶಿವಮೊಗ್ಗಕ್ಕೆ ಶಿಫ್ಟ್ ಮಾಡಲಾಗಿತ್ತು.
ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವ ಪ್ರಯತ್ನ ಮಾಡಿದ್ದು, ಚಿಕಿತ್ಸೆ ಫಲಿಸದೆ ಪ್ರತಾಪ್ ಕುಮಾರ್ ಸಾವನ್ನಪ್ಪಿದ್ದಾರೆ. ಮಾಜಿ ಸಚಿವ ಬಿ.ಸಿ ಪಾಟೀಲ್ ಅವರ ಮಗಳು ಸೌಮ್ಯಾ ಪಾಟೀಲ್ ಗಂಡನಾಗಿದ್ದು, ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹೊನ್ನಾಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಅಳಿಯನ ಆತ್ಮಹತ್ಯೆ ಸುದ್ದಿ ತಿಳಿದು ಮಾಜಿ ಸಚಿವ ಬಿ ಸಿ ಪಾಟೀಲ್ ಅಳಿಯನನ್ನು ನೋಡಲು ಮಗಳ ಸಮೇತ ಶಿವಮೊಗ್ಗಕ್ಕೆ ದೌಡಾಯಿಸಿದ್ದಾರೆ. ಹಿರೇಕೇರೂರು ಸ್ವಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಆತ್ಮಹತ್ಯೆ ಗೆ ನಿಖರ ಕಾರಣ ಏನು ಅನ್ನೋದು ಪೊಲೀಸ್ರ ತನಿಖೆ ಬಳಿಕ ಗೊತ್ತಾಗಬೇಕಿದೆ.