
ಟೀಂ ಇಂಡಿಯಾಗೆ ಕೊನೆಗೂ ಹೊಸ ಕೋಚ್ ಆಯ್ಕೆಯಾಗಿದೆ. ನಿರೀಕ್ಷೆಯಂತೆ ಗೌತಮ್ ಗಂಭೀರ್ ಅವರು ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಆಯ್ಕೆಯಾಗಿದ್ದಾರೆ. ಈ ಬಗ್ಗೆ ಸ್ವತಃ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಈ ಬಗ್ಗೆ ಅಧಿಕೃತ ಮಾಹಿತಿ ನೀಡಿದ್ದಾರೆ.ಭಾರತ ತಂಡದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ (Gautam Gambhir) ಆಯ್ಕೆಯಾಗಿದ್ದಾರೆ. ಸ್ವತಃ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡಿದ್ದು, ನೂತನ ಕೋಚ್ ಗೌತಮ್ ಗಂಭೀರ್ ಅವರಿಗೆ ಸ್ವಾಗತ ಎಂದು ಬರೆದುಕೊಂಡಿದ್ದಾರೆ. ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ರಾಹುಲ್ ದ್ರಾವಿಡ್ ಅವರ ಕಾರ್ಯಾವಧಿ ಮುಗಿದಿದ್ದು, ಇದೀಗ ನೂತನ ಕೋಚ್ ಆಗಿ ಟೀಮ್ ಇಂಡಿಯಾದ ಮಾಜಿ ಎಡಗೈ ದಾಂಡಿಗ ಗೌತಮ್ ಗಂಭೀರ ಆಯ್ಕೆಯಾಗಿದ್ದಾರೆ.











