ವಾಲ್ಮೀಕಿ ನಿಗಮದ 187 ಕೋಟಿ ಹಗರಣ ಕೇಸ್‌ಗೆ ಸಂಬಂಧ ಪಟ್ಟಂತೆ ಬೆಂಗಳೂರು (Bangalore) ಸೇರಿ 10ಕ್ಕೂ ಹೆಚ್ಚು ಕಡೆ ಹಲವೆಡೆ ಇಡಿ (ED) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಾಜಿ ಸಚಿವ ನಾಗೇಂದ್ರ (mla nagendra) ಅವರ ಬೆಂಗಳೂರಿನ ಡಾಲರ್ಸ್ ಕಾಲೋನಿ (dollars colony) ಮನೆ ಸೇರಿದಂತೆ ಬಳ್ಳಾರಿ ಮನೆ ಮೇಲೂ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ವಾಲ್ಮೀಕಿ ನಿಗಮ ಅವ್ಯವಹಾರ ಸಂಬಂಧ ಇ.ಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿತ್ತು. ಬೆಳಗ್ಗೆ 7 ಗಂಟೆಗೆ ಬಳ್ಳಾರಿಯ ನೆಹರು ಕಾಲೋನಿಯಲ್ಲಿರೋ (Neharu colony) ಮನೆ ಮೇಲೆ ಎಂಟು ಅಧಿಕಾರಿಗಳು ದಾಳಿ ಮಾಡಿದ್ರು.
ಈ ಮನೆಯಲ್ಲಿ ಯಾರು ಇಲ್ಲದ ಕಾರಣ ಮನೆಯಲ್ಲಿರೋ ಸಿಬ್ಬಂದಿ ಮೂಲಕ ಅಧಿಕಾರಿಗಳು ಮಾಹಿತಿ ಪಡೆಯುತ್ತಿದ್ದಾರೆ. ಇತ್ತ ಬೆಂಗಳೂರಿನಲ್ಲೂ ಅಧಿಕಾರಿಗಳು ಪರಿಶೀಲನೆ ಮುಂದುವರೆಸಿದ್ದಾರೆ. ಬೆಳಗ್ಗೆ 6 ಗಂಟೆಯಿಂದ ನಿರಂತರ ವಿಚಾರಣೆ ಮುಂದುವರೆದಿದೆ.