
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಜಿ.ಟಿ.ದೇವೇಗೌಡ ಒತ್ತಾಯಿಸಿದರು.
“ಮುಡಾ ಹಗರಣದಲ್ಲಿ ಸಿಎಂ ಕುಟುಂಬದ ಹೆಸರು ಕೇಳಿ ಬಂದಿದ್ದು, ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿ. ಮುಡಾ ಹಗರಣದಲ್ಲಿ ದೊಡ್ಡ ದೊಡ್ಡ ಕೈಗಳಿವೆ.

ಆದ್ದರಿಂದ ತನಿಖೆಯನ್ನು ಸಿಬಿಐಗೆ ನೀಡಲಿ” ಎಂದು ಜೆಡಿಎಸ್ ಶಾಸಕ ಹಾಗೂ ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷ ಜಿ.ಟಿ.ದೇವೇಗೌಡ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ.ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜಿಟಿಡಿ, “ಜುಲೈ 15ರಿಂದ ವಿಧಾನಸಭೆ ಅಧಿವೇಶನ ಆರಂಭವಾಗುತ್ತದೆ. ಅಲ್ಲಿ ಸರ್ಕಾರಗಳ ವಿರುದ್ಧ ಹೋರಾಟ ಹೇಗಿರುತ್ತದೆ ಎಂಬುದನ್ನು ಕಾದು ನೋಡಿ. ಮುಡಾದಲ್ಲಿ ನಾನಾಗಲಿ, ಎಂಎಲ್ಸಿ ಮಂಜೇಗೌಡ ಅಥವಾ ಸಿಎಂ ಆಗಲೀ ಯಾರೇ ತಪ್ಪು ಮಾಡಿದ್ದರೂ ತಪ್ಪೇ” ಎಂದರು.
ನನ್ನ ಬಳಿ ನೂರಲ್ಲ, ಒಂದೇ ಒಂದು ಸೈಟ್ ಸಹ ಇಲ್ಲ. ನನ್ನ ಹೆಸರಿನಲ್ಲಿ ಯಾವುದೇ ಹೋಟೆಲ್, ಆಸ್ತಿ, ಪೆಟ್ರೋಲ್ ಬಂಕ್ ಇಲ್ಲ. ನಾನೊಬ್ಬ ರೈತನ ಮಗ. ಸ್ವಾಭಿಮಾನ, ಮಾರ್ಯದೆ ಎಲ್ಲವನ್ನೂ ಉಳಿಸಿಕೊಂಡು ಪ್ರಾಮಾಣಿಕ ರಾಜಕಾರಣ ಮಾಡುತ್ತಿದ್ದೇನೆ” ಎಂದು ಹೇಳಿದರು.










