ಇಂದಿನಿಂದ ರಾಜ್ಯ ವಿಧಾನ ಮಂಡಲ ಮುಂಗಾರು ಅಧಿವೇಶನ (Karnataka Assembly Monsoon Session 2024) ಆರಂಭಗೊಳ್ಳಲಿದೆ. ಇಂದಿನಿಂದ ಜುಲೈ 26ರ (July 26) ತನಕ ವಿಧಾನಸಭಾ ಅಧಿವೇಶನ ನಡೆಯಲಿದ್ದು, ಸರ್ಕಾರದ ವಿರುದ್ಧ ಜಂಟಿಯಾಗಿ ಹೋರಾಟ ಮಾಡಲು ಬಿಜೆಪಿ ಮತ್ತು ಜೆಡಿಎಸ್(BJP & JDS Party) ಪಕ್ಷಗಳು ತಯಾರಾಗಿದೆ. ಸರ್ಕಾರದ ವಿವಾದಾತ್ಮಕ ನಡೆಗಳು, ಹಗರಣ ಆರೋಪಗಳ ವಿರುದ್ಧ ವಿಪಕ್ಷಗಳ ಹೋರಾಟವನ್ನು ಸಿದ್ದರಾಮಯ್ಯ(Siddaramaiah) ನೇತೃತ್ವದ ಸರ್ಕಾರ ಯಾವ ರೀತಿ ಎದುರಿಸಲಿದೆ ಅನ್ನೋದು ಕುತೂಹಲ ಹೆಚ್ಚಿಸಿದೆ.
ಈಗಾಗಲೇ ವಾಲ್ಮೀಕಿ ನಿಗಮದಲ್ಲಿ ನೂರಾರು ಕೋಟಿ ರೂಪಾಯಿ ಹಗರಣ, ಮುಡಾ ಹಗರಣ(Muda Scam), ಗ್ಯಾರಂಟಿ ಯೋಜನೆಗಳ(Guarantee Scheme) ಅಸಮರ್ಪಕ ನಿರ್ವಹಣೆ ಸೇರಿದಂತೆ ಹತ್ತಾರು ಪ್ರಮುಖ ವಿಷಯಗಳನ್ನು ಇಟ್ಟುಕೊಂಡು ಸರ್ಕಾರದ ವಿರುದ್ಧ ಮುಗಿಬೀಳಲು ಬಿಜೆಪಿ ಮತ್ತು ಜೆಡಿಎಸ್ ಸಿದ್ಧತೆ ನಡೆಸಿದ್ದು, ವಿಪಕ್ಷಗಳನ್ನು ಎದುರಿಸಲು ರಾಜ್ಯ ಸರ್ಕಾರ ತಲೆಕೆಡಿಸಿಕೊಂಡಿರುವ ಸಮಯದಲ್ಲೇ, ಇದೀಗ ಸರ್ಕಾರಕ್ಕೆ ಮತ್ತೊಂದು ತಲೆ ನೋವು ಶುರುವಾಗಿದೆ.