• Home
  • About Us
  • ಕರ್ನಾಟಕ
Saturday, January 17, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಅಂಕಣ

‘ಆಟೋಮೋಟಿವ್ ಸ್ಕಿಲ್ ಲ್ಯಾಬ್ಸ್’ ಉಪಕ್ರಮದ ಮೂಲಕ 4000 ವಿದ್ಯಾರ್ಥಿಗಳಿಗೆ ಆಟೋಮೋಟಿವ್ ಕೌಶಲ್ಯಗಳನ್ನು ಒದಗಿಸಿ ಭವಿಷ್ಯಕ್ಕೆ ಸಿದ್ಧಗೊಳಿಸಲಿರುವ ಟಾಟಾ ಮೋಟಾರ್ಸ್

ಪ್ರತಿಧ್ವನಿ by ಪ್ರತಿಧ್ವನಿ
July 15, 2024
in ಅಂಕಣ, ವಿಶೇಷ
0
‘ಆಟೋಮೋಟಿವ್ ಸ್ಕಿಲ್ ಲ್ಯಾಬ್ಸ್’ ಉಪಕ್ರಮದ ಮೂಲಕ 4000 ವಿದ್ಯಾರ್ಥಿಗಳಿಗೆ ಆಟೋಮೋಟಿವ್ ಕೌಶಲ್ಯಗಳನ್ನು ಒದಗಿಸಿ ಭವಿಷ್ಯಕ್ಕೆ ಸಿದ್ಧಗೊಳಿಸಲಿರುವ ಟಾಟಾ ಮೋಟಾರ್ಸ್
Share on WhatsAppShare on FacebookShare on Telegram

ಕಡೆಗಣಿಸಲ್ಪಟ್ಟ ಸಮುದಾಯಗಳ ಯುವಜನತೆಯನ್ನು ಆಟೋಮೋಟಿವ್ ಕ್ಷೇತ್ರದಲ್ಲಿ ಉದ್ಯೋಗ ಗಳಿಸುವಂತೆ ಮಾಡಲು ಸಬಲಗೊಳಿಸುವ ಉಪಕ್ರಮ. 30% ಹುಡುಗಿಯರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವುದು ವಿಶೇಷ.

ADVERTISEMENT

ಬೆಂಗಳೂರು, -ಜುಲೈ 15, 2024: ಯುವ ಪ್ರತಿಭೆಗಳನ್ನು ಬೆಳೆಸುವ ಮತ್ತು ಆಟೋಮೋಟಿವ್ ಉದ್ಯಮಕ್ಕೆ ಬೇಕಾಗುವ ನುರಿತ ಉದ್ಯೋಗಿಗಳನ್ನು ಸಿದ್ಧಗೊಳಿಸುವ ನಿಟ್ಟಿನಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ನವೋದಯ ವಿದ್ಯಾಲಯ ಸಮಿತಿ (ಎನ್‌ವಿಎಸ್) ಸಹಯೋಗದ ಮೂಲಕ ಜವಾಹರ್ ನವೋದಯ ವಿದ್ಯಾಲಯಗಳಲ್ಲಿ (ಜೆಎನ್‌ವಿ) ‘ಆಟೋಮೋಟಿವ್ ಸ್ಕಿಲ್ ಲ್ಯಾಬ್ಸ್’ ಸ್ಥಾಪಿಸಿದೆ. ಇಲ್ಲಿಯವರೆಗೂ ಮಹಾರಾಷ್ಟ್ರ, ಕರ್ನಾಟಕ, ಗುಜರಾತ್, ಜಾರ್ಖಂಡ್, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ ಮತ್ತು ಉತ್ತರಾಖಂಡದ ಆಯ್ದ ಜೆಎನ್‌ವಿಗಳಲ್ಲಿ ಅಗತ್ಯ ಉಪಕರಣಗಳಿಂದ ಸುಸಜ್ಜಿತಗೊಂಡ 25 ಲ್ಯಾಬ್‌ಗಳನ್ನು ಸ್ಥಾಪಿಸಲಾಗಿದೆ. ಈ ವಿಶಿಷ್ಟವಾದ ಔದ್ಯಮಿಕ- ಶೈಕ್ಷಣಿಕ ಜಂಟಿ ಉಪಕ್ರಮದ ಮೂಲಕ ವರ್ಷದಲ್ಲಿ ಸುಮಾರು 4000 ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಆಟೋಮೋಟಿವ್ ಕೌಶಲ್ಯಗಳನ್ನು ಕಲಿಸುವ ಮೂಲಕ ಆಟೋಮೋಟಿವ್ ಕ್ಷೇತ್ರಕ್ಕೆ ಬೇಕಾದ ಉದ್ಯೋಗಿಗಳನ್ನಾಗಿ ಸಜ್ಜುಗೊಳಿಸಲಾಗುತ್ತದೆ. ಅಷ್ಟು ಮಂದಿಯಲ್ಲಿ 30% ಮಂದಿ ಹುಡುಗಿಯರಾಗಿರುತ್ತಾರೆ ಅನ್ನುವುದು ವಿಶೇಷ.

‘ರಾಷ್ಟ್ರೀಯ ಶಿಕ್ಷಣ ನೀತಿ 2020’ರಲ್ಲಿ ಪರಿಕಲ್ಪಿಸಲಾದ ವೃತ್ತಿಪರ ಕೋರ್ಸ್‌ಗಳ ಸಾಲಿನಲ್ಲಿ ನಿಲ್ಲುವ ಟಾಟಾ ಮೋಟಾರ್ಸ್‌ನ ‘ಆಟೋಮೋಟಿವ್ ಸ್ಕಿಲ್ ಲ್ಯಾಬ್ಸ್,’ 9 ರಿಂದ 12 ನೇ ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಶಾಲೆಯ ಆವರಣದಲ್ಲಿಯೇ ಅವರಿಗೆ ಅಗತ್ಯವಾಗಿ ಬೇಕಾಗುವ ವಿಷಯ ಜ್ಞಾನ, ಪ್ರಾಯೋಗಿಕ ಕೌಶಲ್ಯಗಳನ್ನು ಕಲಿಯುವುದರ ಕಡೆಗೆ ಮತ್ತು ಅವರಿಗೆ ಉತ್ತಮವಾದ ಔದ್ಯಮಿಕ ಕ್ಷೇತ್ರದ ಅರಿವು ನೀಡುವ ಕಡೆಗೆ ಗಮನ ಕೇಂದ್ರೀಕರಿಸುತ್ತದೆ. ಜೊತೆಗೆ ವಿದ್ಯಾರ್ಥಿಗಳು ಟಾಟಾ ಮೋಟಾರ್ಸ್‌ನ ಘಟಕಗಳಿಗೆ ಭೇಟಿ ನೀಡಬಹುದು. ಸರ್ವೀಸ್ ಮತ್ತು ಡೀಲರ್‌ಶಿಪ್ ವೃತ್ತಿಪರರ ಜೊತೆ ಸಂವಹನ ನಡೆಸಬಹುದು. ಎಲ್ಲಕ್ಕಿಂತ ಹೆಚ್ಚಾಗಿ ಉದ್ಯಮ ತಜ್ಞರ ಉಪನ್ಯಾಸ ಕಾರ್ಯಕ್ರದಲ್ಲಿ ಭಾಗಿಯಾಗಿ ಹೆಚ್ಚು ಜ್ಞಾನ ಪಡೆಯುವ ಮತ್ತು ಉತ್ತಮ ಅನುಭವ ಹೊಂದುವ ಅವಕಾಶ ಪಡೆಯಲಿದ್ದಾರೆ. ಅಷ್ಟು ಮಾತ್ರವಲ್ಲದೆ ಈ ಲ್ಯಾಬ್‌ಗಳಲ್ಲಿ ಬೋಧನೆ ಮಾಡುವ ಬೋಧಕರು ಕಂಪನಿಯ ಪ್ಲಾಂಟ್ ಗಳಿರುವ ಸ್ಥಳಗಳಲ್ಲಿ ಅಗತ್ಯ ತರಬೇತಿಯನ್ನು ಪಡೆಯುತ್ತಾರೆ. ಪುಣೆಯ ಸ್ಕಿಲ್ ಲ್ಯಾಬ್ ನಲ್ಲಿ ವಿದ್ಯಾರ್ಥಿಗಳು ರಚಿಸಿರುವ ಇ-ರಿಕ್ಷಾ ಈ ವಿಶಿಷ್ಟವಾದ ಕಲಿಕಾ ಉಪಕ್ರಮದ ಯಶಸ್ಸಿಗೆ ಒಂದು ಶ್ರೇಷ್ಠ ಪುರಾವೆಯಾಗಿದೆ.

ಈ ಕಲಿಕಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಬಳಿಕ ವಿದ್ಯಾರ್ಥಿಗಳು ಟಾಟಾ ಮೋಟಾರ್ಸ್ ಮತ್ತು ಎನ್‌ವಿಎಸ್ ನಿಂದ ಜಂಟಿ ಪ್ರಮಾಣಪತ್ರ ಸ್ವೀಕರಿಸುತ್ತಾರೆ. ತಮ್ಮ ಶಿಕ್ಷಣದ ಬಳಿಕ ವಿದ್ಯಾರ್ಥಿಗಳು ಡಿಪ್ಲೊಮಾ ಇನ್ ಮ್ಯಾನುಫ್ಯಾಕ್ಚರಿಂಗ್ ಟೆಕ್ನಾಲಜಿಗೆ ಸೇರಿಕೊಳ್ಳಬಹುದು. ಸೇರಿಕೊಳ್ಳುವವರಿಗೆ ಪೂರ್ತಿ ಸ್ಟೈಫಂಡ್ ನೀಡಲಾಗುತ್ತದೆ ಮತ್ತು ಟಾಟಾ ಮೋಟಾರ್ಸ್‌ನ ಉತ್ಪಾದನಾ ಘಟಕಗಳಲ್ಲಿ ಉದ್ಯೋಗ ತರಬೇತಿಯನ್ನೂ ಪಡೆಯಬಹುದಾಗಿದೆ. ಜೊತೆಗೆ ಟಾಟಾ ಮೋಟಾರ್ಸ್‌ನಲ್ಲಿ ಮುಂದುವರಿಯಲು ಆಸಕ್ತಿಯುಳ್ಳವರು ಆಯ್ದ ಇಂಜಿನಿಯರಿಂಗ್ ಸಂಸ್ಥೆಗಳ ಸಹಯೋಗದೊಂದಿಗೆ ನಡೆಸುವ 3.5 ವರ್ಷಗಳ ವಿಶೇಷ ಶಿಕ್ಷಣ ಕಾರ್ಯಕ್ರಮವಾದ ಬಿಟೆಕ್ ಇನ್ ಇಂಜಿನಿಯರಿಂಗ್‌ ಪದವಿಗೆ ಸೇರಿಕೊಳ್ಳಬಹುದು. ಹಾಗೆ ಮಾಡಿದರೆ ಐದು ವರ್ಷಗಳ ನಂತರ ಟಾಟಾ ಮೋಟಾರ್ಸ್ ನಲ್ಲಿ ಪರ್ಮನೆಂಟ್ ಉದ್ಯೋಗಕ್ಕೆ ಸೇರಿಕೊಳ್ಳಬಹುದು.

ಆಟೋಮೋಟಿವ್ ಉದ್ಯಮಕ್ಕೆ ಬೇಕಾಗಿರುವ ಕೌಶಲ್ಯಗಳ ಅಂತರವನ್ನು ಕಡಿಮೆಗೊಳಿಸಲು ಯುವಕರನ್ನು ಸಿದ್ಧಗೊಳಿಸುವ ಬದ್ಧತೆಯ ಕುರಿತಾಗಿ ಮಾತನಾಡಿದ ಟಾಟಾ ಮೋಟಾರ್ಸ್‌ನ ಸಿಎಸ್‌ಆರ್ ಮುಖ್ಯಸ್ಥ ವಿನೋದ್ ಕುಲಕರ್ಣಿ, “ನಮ್ಮ ಆಟೋಮೋಟಿವ್ ಸ್ಕಿಲ್ ಲ್ಯಾಬ್‌ಗಳು ನಿರ್ಲಕ್ಷ್ಯಕ್ಕೆ ಒಳಗಾದ ಸಮುದಾಯಗಳ ಯುವಜನತೆಗೆ ಬೆಳೆಯುತ್ತಿರುವ ಆಟೋಮೋಟಿವ್‌ ಕ್ಷೇತ್ರದ ಉದ್ಯೋಗ ಗಳಿಸಲು ಬೇಕಾಗುವ ಸೂಕ್ತವಾದ ಕೌಶಲ್ಯಗಳನ್ನು ಕಲಿಸಿ ಅವರನ್ನು ಸಶಕ್ತಗೊಳಿಸುತ್ತವೆ. ಈ ಲ್ಯಾಬ್ ಗಳು 9 ರಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ಪಡೆಯಲು ಮತ್ತು ಉದ್ಯೋಗಾವಕಾಶಗಳನ್ನು ಹೊಂದಲು ದಾರಿಗಳನ್ನು ಸೃಷ್ಟಿಸುತ್ತದೆ. ‘ಸ್ಕಿಲ್ ಇಂಡಿಯಾ ಮಿಷನ್’ಗೆ ಕೊಡುಗೆ ನೀಡುವ ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ನವೀನ ಚಿಂತನೆ, ಉದ್ಯಮಶೀಲತಾ ಮನೋಭಾವ, ವಿಶ್ಲೇಷಣಾತ್ಮಕ ಮನಸ್ಥಿತಿ ಮತ್ತು ವಿಮರ್ಶಾತ್ಮಕ ಸಂವಹನ ಇತ್ಯಾದಿ ಕೌಶಲಗಳನ್ನು ಬೆಳೆಸುತ್ತದೆ. ಈ ಉಪಕ್ರಮಕ್ಕೆ ವಿದ್ಯಾರ್ಥಿಯರು ಕೂಡ ಉತ್ತಮವಾಗಿ ಸ್ಪಂದಿಸಿದ್ದು, ಆ ಮೂಲಕ ವಿಕಸಿತ ಭಾರತ @2047 ಪರಿಕಲ್ಪನೆಗೆ ಪೂರಕವಾಗಿ ಭವಿಷ್ಯದ ನಾಯಕರನ್ನು ಸಜ್ಜುಗೊಳಿಸುವ ನಮ್ಮ ಬದ್ಧತೆಗೆ ಬಲ ದೊರೆತಿದೆ” ಎಂದು ಹೇಳಿದರು.

2023ರಲ್ಲಿ ಆಟೋಮೋಟಿವ್ ಸ್ಕಿಲ್ ಡೆವಲಪ್‌ಮೆಂಟ್ ಕೌನ್ಸಿಲ್ (ಎಎಸ್‌ಡಿಸಿ) ಆಯೋಜಿಸಿದ್ದ ರಾಷ್ಟ್ರೀಯ ಆಟೋಮೊಬೈಲ್ ಒಲಿಂಪಿಯಾಡ್‌ನಲ್ಲಿ ಈ ಉಪಕ್ರಮದ ಭಾಗಲಾಗಿದ್ದ 1,600ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಅದರಲ್ಲಿ 17 ವಿದ್ಯಾರ್ಥಿಗಳು ಸ್ಪರ್ಧೆಯ ಎರಡನೇ ಹಂತವನ್ನು ಯಶಸ್ವಿಯಾಗಿ ತಲುಪಿದ್ದರು.

Tags: Automotive SectorSilk LlabsStudentsTata MotorsTata Nexon
Previous Post

ನೈಸ್ ರಸ್ತೆಯಲ್ಲಿ ಭೀಕರ ಅಪಘಾತ ! ಸ್ಥಳದಲ್ಲೇ ಮೂವರು ಸಾವು ! 

Next Post

ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸದೆ ಕೇಂದ್ರದಿಂದ ಮಲತಾಯಿ ಧೋರಣೆ: ಸಚಿವ ಶರಣಪ್ರಕಾಶ್ ಪಾಟೀಲ್

Related Posts

ವೈವಿಧ್ಯಮಯ ವಿಷಯಗಳ ಭಂಡಾರ -ʼ ಗೊನೆ ʼ
Top Story

ವೈವಿಧ್ಯಮಯ ವಿಷಯಗಳ ಭಂಡಾರ -ʼ ಗೊನೆ ʼ

by ನಾ ದಿವಾಕರ
January 17, 2026
0

how to get image of different repository? , creating a repository, how to clone github repository, how to create a...

Read moreDetails
ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

January 16, 2026
ವಿಶ್ವಸಂಸ್ಥೆಯಲ್ಲಿ ಕನ್ನಡತಿಯ ಸಾಧನೆ : ಸೇನಾಧಿಕಾರಿ ಸ್ವಾತಿ ಕಾರ್ಯಕ್ಕೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಶ್ಲಾಘನೆ..

ವಿಶ್ವಸಂಸ್ಥೆಯಲ್ಲಿ ಕನ್ನಡತಿಯ ಸಾಧನೆ : ಸೇನಾಧಿಕಾರಿ ಸ್ವಾತಿ ಕಾರ್ಯಕ್ಕೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಶ್ಲಾಘನೆ..

January 15, 2026
ಅಮೆರಿಕ ಮಣಿಸೋಕೆ ಸಿದ್ಧವಾದ ಭಾರತದ ಯುವ ಪಡೆ : ವೈಭವ್‌ ಮೇಲೆ ಹೆಚ್ಚಿದ ನಿರೀಕ್ಷೆ

ಅಮೆರಿಕ ಮಣಿಸೋಕೆ ಸಿದ್ಧವಾದ ಭಾರತದ ಯುವ ಪಡೆ : ವೈಭವ್‌ ಮೇಲೆ ಹೆಚ್ಚಿದ ನಿರೀಕ್ಷೆ

January 15, 2026
ಪೌರಾಯುಕ್ತೆ ವಿರುದ್ಧ ನಾಲಿಗೆ ಹರಿಬಿಟ್ಟ ಕೈ ಮುಖಂಡನಿಗೆ ಸಂಕಷ್ಟ : ಎಸ್ಕೇಪ್ ಆದ ರಾಜೀವ್‌ ಗೌಡ…

ಪೌರಾಯುಕ್ತೆ ವಿರುದ್ಧ ನಾಲಿಗೆ ಹರಿಬಿಟ್ಟ ಕೈ ಮುಖಂಡನಿಗೆ ಸಂಕಷ್ಟ : ಎಸ್ಕೇಪ್ ಆದ ರಾಜೀವ್‌ ಗೌಡ…

January 15, 2026
Next Post
ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸದೆ ಕೇಂದ್ರದಿಂದ ಮಲತಾಯಿ ಧೋರಣೆ: ಸಚಿವ ಶರಣಪ್ರಕಾಶ್ ಪಾಟೀಲ್

ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸದೆ ಕೇಂದ್ರದಿಂದ ಮಲತಾಯಿ ಧೋರಣೆ: ಸಚಿವ ಶರಣಪ್ರಕಾಶ್ ಪಾಟೀಲ್

Recent News

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?
Top Story

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada