• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕಾರ್ಮಿಕ ಇಲಾಖೆಯಿಂದ ಸಿನಿ ಕಾರ್ಮಿಕರಿಗೆ ಭರ್ಜರಿ ಗಿಫ್ಟ್ ಕೊಟ್ಟ ಸಚಿವ ಲಾಡ್ ! 

ಪ್ರತಿಧ್ವನಿ by ಪ್ರತಿಧ್ವನಿ
July 16, 2024
in Top Story, ಇದೀಗ, ಕರ್ನಾಟಕ, ರಾಜಕೀಯ, ಸಿನಿಮಾ
0
ಕಾರ್ಮಿಕ ಇಲಾಖೆಯಿಂದ ಸಿನಿ ಕಾರ್ಮಿಕರಿಗೆ ಭರ್ಜರಿ ಗಿಫ್ಟ್ ಕೊಟ್ಟ ಸಚಿವ ಲಾಡ್ ! 
Share on WhatsAppShare on FacebookShare on Telegram

ಸಿನಿಮಾ (Cinema) ಮತ್ತು ಸಾಂಸ್ಕೃತಿಕ (Cultural) ಕ್ಷೇತ್ರದಲ್ಲಿ ಕೆಲಸ ಮಾಡುವ ಕಾರ್ಮಿಕರ ಕಲ್ಯಾಣಕ್ಕಾಗಿ ಕರ್ನಾಟಕ ಸಿನಿಮಾ ಮತ್ತು ಸಾಂಸ್ಕೃತಿಕ ಕಾರ್ಯಕರ್ತಕರ (ಕಲ್ಯಾಣ) ವಿಧೇಯಕ, 2024 ನ್ನು ರೂಪಿಸಿ ಜಾರಿಗೆ ತರಲು ಸಂಪುಟ ಸಭೆಯಲ್ಲಿ (Cabinet meeting) ಅನುಮೋದನೆ ಪಡೆಯಲಾಗಿದ್ದು, ವಿಧಾನ ಮಂಡಲದಲ್ಲಿ ಸಹ ಅಂಗೀಕಾರ ಪಡೆಯಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ (Minister Santosh lad) ತಿಳಿಸಿದರು.

ADVERTISEMENT

ಈ ವಿಧೇಯಕದಿಂದ ಈ ಕ್ಷೇತ್ರದಲ್ಲಿ ಕೆಲಸ ಮಾಡುವ ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಿದ ಶ್ರೇಯ ಸರ್ಕಾರಕ್ಕೆ ಸಿಗಲಿದೆ.

ಮಾನ್ಯ ಕಾರ್ಮಿಕ ಹಾಗೂ ಧಾರವಾಡ(Dharwad) ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ಈ ವಿಧೇಯಕ ಜಾರಿಯಾಗುವುದಲ್ಲಿ ಮಹತ್ವದ ಪಾತ್ರ ವಹಿಸಿದ್ದು, ಇಲಾಖೆಯ ಮೂಲಕ ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಈ ವಿಧೇಯಕ ಜಾರಿಯಿಂದ ಅಸಂಖ್ಯಾತ ಕಾರ್ಮಿಕರ ಬಾಳಿಗೆ ಭದ್ರತೆ ದೊರೆಯಲಿದೆ .

ಕಳೆದ ಹಲವು ವರ್ಷಗಳಿಂದ ಈ ಯೋಜನೆ ಜಾರಿಗೆ ಸಾಕಷ್ಟು ಪ್ರಯತ್ನಗಳು ನಡೆದಿದ್ದವು. ಆದರೆ ಅವು ಸಾಕಾರಗೊಂಡಿರಲಿಲ್ಲ, ಇದೀಗ ಸಚಿವ ಸಂತೋಷ್‌ ಲಾಡ್‌ ಅವರು ಈ ನಿಟ್ಟಿನಲ್ಲಿ ದಿಟ್ಟ ಹೆಜ್ಜೆ ಇರಿಸಿದ್ದಾರೆ.

ಕಳೆದ ಸರ್ಕಾರದ ಅವಧಿಯಲ್ಲೂ ಸಾಕಷ್ಟು ಪ್ರಯತ್ನಗಳು ನಡೆದಿದ್ದವು. ಆದರೆ ಅವುಗಳು ಕಾರ್ಯರೂಪಕ್ಕೆ ಬಂದಿರಲಿಲ್ಲ. ಈ ಬಾರಿ ಸಂತೋಷ್‌ ಲಾಡ್‌ ಅವರ ಅವಿರತ ಪ್ರಯತ್ನದ ಫಲವಾಗಿ ಈಗ ಕಾಲ ಕೂಡಿ ಬಂದಿದೆ. ಮನರಂಜನಾ ಕ್ಷೇತ್ರದ ಕಾರ್ಮಿಕರು ಸರಿಯಾದ ಉದ್ಯೋಗ ಭದ್ರತೆ ಇಲ್ಲದೆ ಯಾವುದೇ ಸೌಲಭ್ಯ ಇಲ್ಲದೇ ಅನಿಶ್ಚಿತತೆಯಲ್ಲಿ ಇರುವವರಿಗೆ ವರದಾನವಾಗಲಿದೆ. 

ಸಂತೋಷ್‌ ಲಾಡ್‌ ಅವರು ಕಾರ್ಮಿಕ ಸಚಿವರಾದಾಗಿನಿಂದ ಇಂತಹ ಹಲವಾರು ಹೊಸ ಕ್ರಮಗಳನ್ನು ಜಾರಿಗೊಳಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಗಿಗ್‌ ಕಾರ್ಮಿಕರಿಗಾಗಿಯೂ ಅವರು ಹೊಸ ಯೋಜನೆ ಜಾರಿ ಮಾಡಿದ್ದಾರೆ. 

ವಿಧೇಯಕದ ಪ್ರಮುಖ ಅಂಶಗಳು

 ಸಿನಿಮಾ ಮತ್ತು ಸಾಂಸ್ಕೃತಿಕ ರಂಗಗಳಲ್ಲಿ ದುಡಿಯುತ್ತಿರುವ ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಿ ಸಾಮಾಜಿಕ ಭದ್ರತಾ ಸೌಲಭ್ಯಗಳಾದ ಜೀವವಿಮೆ, ಅಪಘಾತ ಪರಿಹಾರ, ಹೆರಿಗೆ ಭತ್ಯೆ, ಶವಸಂಸ್ಕಾರ  ವೆಚ್ಚ, ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಮುಂತಾದ ಸೌಲಭ್ಯಗಳನ್ನು ಹಂತ ಹಂತವಾಗಿ ಒದಗಿಸಲಾಗುವುದು. 

ಸಿನಿಮಾ ಹಾಗೂ ಸಂಬಂಧಿತ ಕ್ಷೇತ್ರಗಳ ಪ್ರದರ್ಶನದ ಟಿಕೆಟ್ ಗಳ ಮೇಲೆ ಶೇ.2 ರಷ್ಟು ಮೀರದಂತೆ ಆದರೆ ಶೇ 1 ಕ್ಕೆ ಕಡಿಮೆಯಿಲ್ಲದಷ್ಟು ಸುಂಕ ವಿಧಿಸುವ ಮೂಲಕ ಹಾಗೂ ಸಂಬಂಧಿತ ಸಂಸ್ಥೆಗಳಿಂದ ವಂತಿಗೆ ಸಂಗ್ರಹಿಸುವ ಮೂಲಕ ಸಿನಿಮಾ ಹಾಗೂ ಸಾಂಸ್ಕೃತಿಕ ಕಾರ್ಯಕರ್ತರ ಕಲ್ಯಾಣ ನಿಧಿ ಸ್ಥಾಪಿಸಿ ಆವಶ್ಯಕವಿರುವ ನಿಧಿ ಸಂಗ್ರಹಣೆಗೆ ಉದ್ದೇಶಿಸಲಾಗಿದೆ. 

ನಿಧಿ ಸಂಗ್ರಹಣೆ, ನಿರ್ವಹಣೆ ಹಾಗೂ ಫಲಾನುಭವಿಗಳಿಗೆ ಸಾಮಾಜಿಕ ಭದ್ರತಾ ಸೌಲಭ್ಯಗಳ ವಿತರಣೆಗೆ ಪ್ರತ್ಯೇಕವಾದ Karnataka Cine and Cultural Activities Welfare Board  ಅನ್ನು ರಚಿಸಲು ಉದ್ದೇಶಿಸಲಾಗಿದೆ.

ಸಿನಿಮಾ ಮತ್ತು ಇತರೆ ಸಾಂಸ್ಕೃತಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡ ತಂತ್ರಜ್ಞರು, ಕಾರ್ಮಿಕರಿಗೆ ನಿಯಮಿತವಾಗಿ ಕೆಲಸವಿರುವುದಿಲ್ಲ. ಅವರು ಅವಶ್ಯಕತೆ ಇರುವ ಅವಧಿಯಲ್ಲಿ ಮಾತ್ರವೇ ಕೆಲಸದಲ್ಲಿ ತೊಡಗಿರುತ್ತಾರೆ. ಕೆಲವು ಅವಧಿ ಅವರು ನಿರುದ್ಯೋಗಿಯಾಗಿರುತ್ತಾರೆ. 

ಈ ಯೋಜನೆಯ ಜಾರಿಗೆ ರಾಜ್ಯ ಸರ್ಕಾರದ ಅನುದಾನವನ್ನು ಅವಲಂಬಿಸುವ ಬದಲು ಪ್ರತ್ಯೇಕ ಸಂಪನ್ಮೂಲವನ್ನು ಕ್ರೋಢೀಕರಿಸಲಾಗುವುದು. 

Tags: ಕಾಂಗ್ರೆಸ್ ಸರ್ಕಾರಕಾರ್ಮಿಕ ಸಚಿವ ಸಂತೋಷ್ ಲಾಡ್ಸಚಿವ ಸಂತೋಷ್ ಲಾಡ್ಸಂತೋಷ್ ಲಾಡ್ ಕಾರ್ಯಕ್ಕೆ ಶ್ಲಾಘನೆಸಿನಿ ಕಾರ್ಮಿಕರಿಗೆ ಗಿಫ್ಟ್
Previous Post

ಕರ್ನಾಟಕ ಸಿನಿಮಾ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕಲ್ಯಾಣ) ವಿಧೇಯಕ 2024

Next Post

ಮೇಕೆದಾಟು ಯೋಜನೆಗೆ ತಮಿಳುನಾಡು ಸಹಕಾರ ನೀಡಲು ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post

ಮೇಕೆದಾಟು ಯೋಜನೆಗೆ ತಮಿಳುನಾಡು ಸಹಕಾರ ನೀಡಲು ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada