ಉತ್ತರ ಕನ್ನಡ (uttara kannada) ಜಿಲ್ಲೆಯಾದ್ಯಂತ ವರುಣನ ಅಬ್ಬರ ಮುಂದುವರೆದಿದ್ದು, ಇಂದು ಜಿಲ್ಲೆಯ ಹತ್ತು ತಾಲೂಕಿನ ಶಾಲಾ ಕಾಲೇಜಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಆದೇಶ ಹೊರಡಿಸಿದ್ದಾರೆ. ಮಳೆಯಿಂದ ಜಿಲ್ಲೆಯಾದ್ಯಂತ ಸಾಕಷ್ಟು ಅವಾಂತರ, ಗುಡ್ಡಕುಸಿತಗಳು (Land sliding) ಸಂಭವಿಸಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಇತ್ತ ದಕ್ಷಿಣ ಕನ್ನಡ (Dakshina kannada) ಜಿಲ್ಲೆಯಲ್ಲೂ ಭಾರೀ ಮಳೆ ಹಿನ್ನೆಲೆ ಇಂದು ರೆಡ್ ಅಲರ್ಟ್ (Red alert) ಘೋಷಿಸಲಾಗಿದೆ. ಜಿಲ್ಲೆಯ ಐದು ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶಿಸಿದ್ದಾರೆ.

ಮತ್ತೊಂದೆಡೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರೀ ಮಳೆ ಸಾಧ್ಯತೆ ಹಿನ್ನೆಲೆ ಮಲೆನಾಡು ಭಾಗದ 5 ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಘೋಷಣೆ ಮಾಡಲಾಗಿದ್ದು, ಚಿಕ್ಕಮಗಳೂರು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ

ಮಾಡಲಾಗಿದೆ. ಕೊಡಗಿನಲ್ಲಿ (Kodagu) ಮುಂದುವರೆದ ಭಾರಿ ಗಾಳಿ ಮಳೆ ಹಿನ್ನಲೆ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇನ್ನೂ ಹಾಸನ ಜಿಲ್ಲೆಯ ಎರಡು ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಹಾಸನ ಮತ್ತು ಸಕಲೇಶಪುರ (hassan & sakaleshapura) ಭಾಗದಲ್ಲಿ ನಿರಂತರಮಳೆಯಿಂದ ಪರಿಸ್ಥಿತಿ ಬಿಗಡಾಯಿಸಿದ್ದು, ಹೆದ್ದಾರಿ ಸಂಚಾರವೂ ಅಸ್ತವ್ಯಸ್ಥವಾಗಿದೆ.





