ಜಮ್ಮು: ಗೂಲ್ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ದೇಶ ವಿರೋಧಿ, ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಭೀಮದಾಸ ನಿವಾಸಿ ಗುಲಾಂ ನಬಿ ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕ್ರಮವು ಸಮುದಾಯದ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಅವರ ದೃಢ ಸಂಕಲ್ಪವನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ಹೇಳಿದರು.
ರಾಂಬನ್ ಜಿಲ್ಲಾ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅವರ ನಿರ್ದೇಶನದ ಮೇರೆಗೆ ನಬಿ ಕುರಿತ ಆರೋಪ ಸಿದ್ಧಪಡಿಸಲಾಗಿದೆ ಮತ್ತು ಅನುಮೋದನೆಗಾಗಿ ರಾಂಬನ್ ಜಿಲ್ಲಾ ಮ್ಯಾಜಿಸ್ಟ್ರೇಟ್ ರಾಂಬನ್ ಅವರಿಗೆ ರವಾನಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಸಾರ್ವಜನಿಕ ಸುರಕ್ಷತಾ ಕಾಯಿದೆ (PSA) 1978 ರ ಸೆಕ್ಷನ್ 8 ರ ಅಡಿಯಲ್ಲಿ ಅಗತ್ಯ ಮಂಜೂರಾತಿಯನ್ನು ಪಡೆದ ನಂತರ, ಗುಲಾಂ ನಬಿಯನ್ನು ಸಾರ್ವಜನಿಕ ಸುರಕ್ಷತಾ ಕಾಯ್ದೆ ಅಡಿಯಲ್ಲಿ ಬಂಧಿಸಿ ಜಿಲ್ಲಾ ಕಾರಾಗೃಹದಲ್ಲಿ ಇರಿಸಲಾಯಿತು. ಬಂಧಿತನು ಪಾಕಿಸ್ಥಾನದಿಂದ ಒಳನುಸುಳುವ ಭಯೋತ್ಪಾದಕರಿಗೆ ನೆರವು ನೀಡುತಿದ್ದ ಎಂದು ಆರೋಪಿಸಲಾಗಿದೆ.