• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

“ಫಾರೆಸ್ಟ್” ಹಾಡಿಗೆ ಅಭಿಮಾನಿಗಳು ಫಿದಾ

ಪ್ರತಿಧ್ವನಿ by ಪ್ರತಿಧ್ವನಿ
July 21, 2024
in Top Story, ಇತರೆ / Others
0
Share on WhatsAppShare on FacebookShare on Telegram

ಕನ್ನಡದಲ್ಲೀಗ ಕಂಟೆಂಟ್ ಓರಿಯಂಟೆಡ್ ಚಿತ್ರಗಳದೇ ಕಾರುಬಾರು. ಉತ್ತಮ ಕಂಟೆಂಟ್ ಇರುವ ಚಿತ್ರಗಳು ಇತ್ತೀಚಿಗೆ ಯಶಸ್ವಿಯಾಗಿರುವ ಉದಾಹರಣೆಗಳು ಕನ್ನಡದಲ್ಲಿ ಸಾಕಷ್ಟಿದೆ. ಅಂತಹುದೇ ಉತ್ತಮ ಕಂಟೆಂಟ್ ನೊಂದಿಗೆ ಕನ್ನಡಿಗರ ಮುಂದೆ ಬರಲಿದೆ “ಫಾರೆಸ್ಟ್” ಚಿತ್ರ. (Forest” movie.)

ADVERTISEMENT

ಎನ್.ಎಂ.ಕೆ ಸಿನಿಮಾಸ್ ಲಾಂಛನದಲ್ಲಿ ಎನ್ ಎಂ ಕಾಂತರಾಜ್ ನಿರ್ಮಾಣದ, ಚಂದ್ರ ಮೋಹನ್ ನಿರ್ದೇಶನದ ಹಾಗೂ ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್ ಹಾಗೂ ರಂಗಾಯಣ ರಘು ಮುಖ್ಯ ಭೂಮಿಕೆಯಲ್ಲಿ ನಟಿಸಿರುವ “ಫಾರೆಸ್ಟ್” ಚಿತ್ರ (Forest” movie)ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ.

ಇತ್ತೀಚೆಗಷ್ಟೇ ಈ ಚಿತ್ರಕ್ಕಾಗಿ ಪುನೀತ್ ಆರ್ಯ ಅವರು ಬರೆದು ಧರ್ಮವಿಶ್ ಸಂಗೀತ ನೀಡಿರುವ “ಓಡೋ ಓಡೋ” ಹಾಡು ಎನ್ ಎಂ ಕೆ ಸಿನಿಮಾಸ್ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿದೆ. ಖ್ಯಾತ ಗಾಯಕ ಕೈಲಾಶ್ ಖೇರ್ ಹಾಡಿರುವ ಈ ಹಾಡನ್ನು ಈಗಾಗಲೇ ಹನ್ನೊಂದು ಲಕ್ಷಕ್ಕೂ ಅಧಿಕ ಜನರು ವೀಕ್ಷಿಸಿದ್ದಾರೆ. ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.

ಈ ಮಲ್ಟಿಸ್ಟಾರರ್ ಸಿನಿಮಾದ ಚಿತ್ರೀಕರಣ ಮುಕ್ತಾಯವಾಗಿದೆ. ಮಡಿಕೇರಿ, ಎಂ.ಎಂ.ಹಿಲ್ಸ್, ಸಂಪಾಜೆ ಫಾರೆಸ್ಟ್ ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆದಿದೆ. ನಿರ್ದೇಶಕ ಚಂದ್ರಮೋಹನ್ ಅವರು ಸತ್ಯಶೌರ್ಯ ಸಾಗರ್ ಅವರ ಜೊತೆಗೂಡಿ ಕಥೆ, ಚಿತ್ರಕಥೆ ರಚಿಸಿದ್ದಾರೆ.

ಸಂಭಾಷಣೆಯನ್ನು ಸತ್ಯಶೌರ್ಯ ಸಾಗರ್ ಅವರೆ ಬರೆದಿದ್ದಾರೆ. ಚಿತ್ರದಲ್ಲಿ ಎರಡು ಹಾಡುಗಳಿದ್ದು, ಧರ್ಮವಿಶ್ ಸಂಗೀತ ನೀಡಿದ್ದಾರೆ. ಹಿನ್ನೆಲೆ ಸಂಗೀತ ಆನಂದ್ ರಾಜವಿಕ್ರಮ್ ಅವರದು. ರವಿಕುಮಾರ್ ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ, ಅಮರ್ ಕಲಾ ನಿರ್ದೇಶನ ಹಾಗೂ ಡಾ||ರವಿವರ್ಮ ಅವರ ಸಾಹಸ ನಿರ್ದೇಶನ “ಫಾರೆಸ್ಟ್” ಚಿತ್ರಕ್ಕಿದೆ. ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್, ಶರಣ್ಯ ಶೆಟ್ಟಿ, ಅರ್ಚನಾ ಕೊಟ್ಟಿಗೆ, ರಂಗಾಯಣ ರಘು, ಅವಿನಾಶ್, ಪ್ರಕಾಶ್ ತುಮ್ಮಿನಾಡು, ದೀಪಕ್ ರೈ ಪಾಣಂಜೆ, ಸೂರಜ್ ಪಾಪ್ಸ್, ಸುನೀಲ್ ಕುಮಾರ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

Tags: # sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'#[pratidhvanidigital#kabza #sandalwood #newmovie #kannadafilm #upendra #shivarajkumar #sudeep #pratidhvani #pratidhvanidigital #prtidhvaninews
Previous Post

200 ಯೂನಿಟ್‌ ಗಿಂತ ಹೆಚ್ಚಿನ ಯೂನಿಟ್‌ ಬಳಸುವ ಗ್ರಾಹಕರಿಗೆ ರಿಯಾಯ್ತಿ ನಿಲ್ಲಿಸಿದ ರಾಜಾಸ್ಥಾನ ಸರ್ಕಾರ

Next Post

ಲಂಚಕ್ಕೆ ಸಂಬಂದಿಸಿ ಸಬ್‌ ಇನ್ಸ್‌ಪೆಕ್ಟರ್‌ ಸೇರಿ ಮೂವರು ಪೋಲೀಸರನ್ನು ಬಂಧಿಸಿದ ಸಿಬಿಐ

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

‘ಸಿಜೆಪಿ’ ಪೇಜ್ ಹ್ಯಾಕ್‌? ‘ಕಾಕ್ರೋಚ್ ಜನತಾ ಪಕ್ಷ’ ಅಭಿಜಿತ್ ದಿಪ್ಕೆ ಹೇಳಿದ್ದೇನು? 

May 23, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಮುಂಗಾರು ಅಬ್ಬರ: ರಾಜ್ಯಾದ್ಯಂತ ಭಾರೀ ಮಳೆ, ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ

May 23, 2026
Next Post

ಲಂಚಕ್ಕೆ ಸಂಬಂದಿಸಿ ಸಬ್‌ ಇನ್ಸ್‌ಪೆಕ್ಟರ್‌ ಸೇರಿ ಮೂವರು ಪೋಲೀಸರನ್ನು ಬಂಧಿಸಿದ ಸಿಬಿಐ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada