• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೇಂದ್ರ ಬಜೆಟ್​ ಬಗ್ಗೆ ಕರ್ನಾಟಕ ಬಿಜೆಪಿ ನಾಯಕರು ಏನಂದ್ರು..?

ಪ್ರತಿಧ್ವನಿ by ಪ್ರತಿಧ್ವನಿ
July 23, 2024
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ
0
ಕೇಂದ್ರ ಬಜೆಟ್​ ಬಗ್ಗೆ ಕರ್ನಾಟಕ ಬಿಜೆಪಿ ನಾಯಕರು ಏನಂದ್ರು..?
Share on WhatsAppShare on FacebookShare on Telegram

ಬಜೆಟ್​​ನಲ್ಲಿ ಬಿಹಾರ ಮತ್ತು ಆಂಧ್ರಕ್ಕೆ ಹೆಚ್ಚಿನ ಆದ್ಯತೆ ಕೊಟ್ಟಿದ್ದಾರೆ. ಆದರೆ ಬೇರೆ ರಾಜ್ಯಗಳನ್ನೂ ಕಡೆಗಣಿಸಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ (R Ashoka) ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾವುದೇ ತಾರತಮ್ಯ ಮಾಡದೆ ಬಜೆಟ್​ನಲ್ಲಿ ಆದ್ಯತೆ ನೀಡಿದ್ದಾರೆ. ಉದ್ಯೋಗ ಸೃಷ್ಟಿ, ಕೃಷಿಗೆ ಕೇಂದ್ರ ಬಜೆಟ್​ನಲ್ಲಿ ಒತ್ತು ಕೊಟ್ಟಿದ್ದಾರೆ. ದೇಶದ ರೈತರ ಪರ ಮತ್ತು ಉದ್ಯೋಗ ಸೃಷ್ಟಿಗೆ ಹೆಚ್ಚಿನ ನೀಡಲಾಗಿದೆ. ಕೃಷಿ ಕ್ಷೇತ್ರಕ್ಕೆ 1.52 ಲಕ್ಷ ಕೋಟಿ ರೂ. ಮೀಸಲು ಇಡಲಾಗಿದೆ ಎಂದು ತಿಳಿಸಿದ್ದಾರೆ.

ADVERTISEMENT

ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯನ್ನು ಐದು ವರ್ಷಕ್ಕೆ ವಿಸ್ತರಣೆ ಮಾಡಲಾಗಿದೆ. ಆ ಮೂಲಕ ಬಡವರಿಗೆ ಅನುಕೂಲ ಆಗಲಿದೆ. ತೆರಿಗೆ ಪಾವತಿ ಮಿತಿಯನ್ನು ಏರಿಕೆ ಮಾಡಲಾಗಿದೆ. ಇದು ಮಧ್ಯಮ ವರ್ಗದವರಿಗೆ ಅನುಕೂಲ. ಒಂದು ಕೋಟಿ ಮನೆಗಳಿಗೆ ಉಚಿತ ಸೋಲಾರ್ ವಿದ್ಯುತ್ ಕೊಡಲಾಗುತ್ತಿದೆ. ಕೈಗಾರಿಕಾ ತೆರಿಗೆ ಕಡಿಮೆ ಮಾಡಲಾಗಿದೆ. ಉದ್ಯೋಗ ಸೃಷ್ಟಿಗೆ, ಕೃಷಿ ವಲಯಕ್ಕೆ ಹೆಚ್ಚು ಆದ್ಯತೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಬೇರೆ ಬೇರೆ ಯೋಜನೆಗಳ ಮೂಲಕ ಕರ್ನಾಟಕಕ್ಕೆ ಲಾಭವಾಗಲಿದೆ: ಬಸವರಾಜ ಬೊಮ್ಮಾಯಿ 

ದೆಹಲಿಯಲ್ಲಿ ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ಕರ್ನಾಟಕಕ್ಕೆ ರೈಲು, ರಸ್ತೆ ನಿರ್ಮಾಣಕ್ಕೆ ಅನುದಾನ ಸಿಗಲಿದೆ. ಕೈಗಾರಿಕಾ ಕಾರಿಡಾರ್ ನಿರ್ಮಾಣದಿಂದ ಕರ್ನಾಟಕಕ್ಕೂ ಅನುಕೂಲವಾಗಲಿದೆ. ನಮ್ಮ ಸರ್ಕಾರ ಸಾಮಾಜಿಕ ನ್ಯಾಯವನ್ನು ನೀಡಿದೆ. ಬಡತನ ನಿರ್ಮೂಲನೆ, ಮನೆ ನಿರ್ಮಾಣಕ್ಕೆ ಒತ್ತು ನೀಡಲಾಗಿದೆ. ಬೇರೆ ಬೇರೆ ಯೋಜನೆಗಳ ಮೂಲಕ ಕರ್ನಾಟಕಕ್ಕೆ ಲಾಭವಾಗಲಿದೆ ಎಂದಿದ್ದಾರೆ.

ವಿಕಸಿತ ಭಾರತದ ಅಭಿವೃದ್ಧಿ ಪರ ಬಜೆಟ್​ ಮಂಡಿಸಲಾಗಿದೆ. ಕಳೆದ 10 ವರ್ಷಗಳಲ್ಲಿ ಭಾರತದ ಆರ್ಥಿಕತೆ ಬಹಳ ಸದೃಢವಾಗಿದೆ. ಮಧ್ಯಂತರ ಬಜೆಟ್​ ಮುಂದುವರಿಸಲಾಗಿದೆ. ಉತ್ಪಾದನೆ, ಕೃಷಿ, ಸೇವಾ ವಲಯಕ್ಕೆ ಹೆಚ್ಚು ಆದ್ಯತೆ ನೀಡಲಾಗಿದೆ. ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಿ, ಸಾವಿರಾರು ಕೋಟಿ ಹಣ ಹೂಡಿಕೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ದೆಹಲಿಯಲ್ಲಿ ಶಿವಮೊಗ್ಗ ಸಂಸದ ಬಿವೈ ರಾಘವೇಂದ್ರ ಹೇಳಿಕೆ ನೀಡಿದ್ದು, ಕೇಂದ್ರ ಬಜೆಟ್​​ನಲ್ಲಿ ಕೃಷಿ, ಗ್ರಾಮೀಣ ರಸ್ತೆಗಳ ಅಭಿವೃದ್ಧಿ, ಉದ್ಯೋಗ, ಕೌಶಲ್ಯಾಭಿವೃದ್ಧಿ ಹೆಚ್ಚಿಸಲು ಆದ್ಯತೆ ನೀಡಲಾಗಿದೆ. ಮೂಲಸೌಕರ್ಯ ಕ್ಷೇತ್ರ ಅಭಿವೃದ್ಧಿಯಿಂದ ಉದ್ಯೋಗ ಸೃಷ್ಟಿ ಆಗುತ್ತೆ. ಬಿಹಾರ, ಆಂಧ್ರದಂತೆ ಎಲ್ಲ ರಾಜ್ಯಗಳಿಗೂ ಆದ್ಯತೆ ನೀಡಲಾಗುತ್ತದೆ ಎಂದು ಹೇಳಿದ್ದಾರೆ.

ಕರ್ನಾಟಕಕ್ಕೆ ವೈಯಕ್ತಿಕ ಘೋಷಣೆ ಇಲ್ಲ: ಗೋವಿಂದ ಕಾರಜೋಳ

ಬಿಜೆಪಿ ಸಂಸದ ಗೋವಿಂದ ಕಾರಜೋಳ ಕೂಡ ಪ್ರತಿಕ್ರಿಯಿಸಿದ್ದು, ಕರ್ನಾಟಕದ ವಿಚಾರವಾಗಿ ವೈಯಕ್ತಿಕ ಘೋಷಣೆ ಇರುವುದಿಲ್ಲ. ಎಲ್ಲಾ ರಾಜ್ಯಗಳನ್ನು ಗಮನದಲ್ಲಿಟ್ಟುಕೊಂಡು ಯೋಜನೆ ಘೋಷಣೆ ಮಾಡಲಾಗಿದೆ. ಕೇಂದ್ರ ಬಜೆಟ್​ನಲ್ಲಿ ರೈಲ್ವೆ, ನೀರಾವರಿ ಯೋಜನೆಗೆ ಹೆಚ್ಚು ಆದ್ಯತೆ ನೀಡಲಾಗಿದೆ. ಬಡವರ ಮಕ್ಕಳಿಗೆ ಉನ್ನತ ಶಿಕ್ಷಣಕ್ಕೆ ಸಾಲ ಸೌಲಭ್ಯ ನೀಡಲಾಗುತ್ತಿದೆ ಎಂದಿದ್ದಾರೆ.

ಇದು ಬಡವರು, ಮಹಿಳೆಯರು, ರೈತರ ಪರ ಬಜೆಟ್: ಸಿ.ಟಿ.ರವಿ

ವಿಧಾನಸೌಧದಲ್ಲಿ ಪರಿಷತ್​ ಬಿಜೆಪಿ ಸದಸ್ಯ ಸಿ.ಟಿ.ರವಿ ಪ್ರತಿಕ್ರಿಯಿಸಿದ್ದು, ಬಜೆಟ್​ನಲ್ಲಿ ಉದ್ಯೋಗ ಸೃಷ್ಟಿಗೆ ವಿಶೇಷ ಆದ್ಯತೆ ಕೊಟ್ಟಿದ್ದಾರೆ. 20 ಲಕ್ಷ ಯುವಕರಿಗೆ ಕೌಶಲ್ಯಾಭಿವೃದ್ದಿಗೆ ತರಬೇತಿ ಆದ್ಯತೆ ನೀಡಲಾಗಿದೆ. ಗ್ರಾಮೀಣಾಭಿವೃದ್ಧಿಗೆ 2.65 ಲಕ್ಷ ಕೋಟಿ ರೂ. ಹಂಚಿಕೆ ಮಾಡಿದ್ದಾರೆ. ದೇಶಾದ್ಯಂತ 12 ಕೈಗಾರಿಕಾ ಪಾರ್ಕ್ ಸ್ಥಾಪಿಸುವುದಾಗಿ ಘೋಷಣೆ ಮಾಡಲಾಗಿದೆ. ಇದು ಬಡವರ ಪರ, ಮಹಿಳೆಯರ ಪರ, ರೈತರ ಪರ ಬಜೆಟ್ ಎಂದು ಹೇಳಿದ್ದಾರೆ.​​​

ಆಂಧ್ರ ಮತ್ತು ಬಿಹಾರಕ್ಕೆ ಹೆಚ್ಚಿನ ಅನುದಾನ ನೀಡಿದ ವಿಚಾರವಾಗಿ ಮಾತನಾಡಿದ್ದು, ಕೇಂದ್ರ ಸರ್ಕಾರ ಒತ್ತಡಕ್ಕೆ ಮಣಿಯಲ್ಲ. ಆಂಧ್ರಪ್ರದೇಶ ಹಾಗೂ ಬಿಹಾರ ಸಹ ಭಾರತದ ಅಂಗವಾಗಿದೆ ಎಂದರು.

Tags: Basavaraj BommaiBJPCongress PartyCT RaviGovind KarjolaR Ashokಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಪ್ರತಿಭಟನೆ ಬಿಟ್ಟು ತರಗತಿಗೆ ಮರಳುವಂತೆ ವಿದ್ಯಾರ್ಥಿಗಳಿಗೆ ಆದೇಶ: ಮೀಸಲಾತಿ ಕಡಿಮೆಗೊಳಿಸಿದ ಸುಪ್ರೀಂಕೋರ್ಟ್..

Next Post

ನಾನ್ಯಾಕೆ ರಾಜೀನಾಮೆ ಕೊಡ್ಬೇಕು! ಸಿಎಂ ಸಿದ್ದು ಫುಲ್ ಗರಂ

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
Next Post

ನಾನ್ಯಾಕೆ ರಾಜೀನಾಮೆ ಕೊಡ್ಬೇಕು! ಸಿಎಂ ಸಿದ್ದು ಫುಲ್ ಗರಂ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada