
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮದ ತನಿಖೆ ವೇಳೆ ಅಧಿಕಾರಿಗೆ ಒತ್ತಡ ಹೇರಿದ ಆರೋಪದ ಮೇಲೆ ಇಡಿ ವಿರುದ್ಧ ದಾಖಲಾಗಿದ್ದ ಎಫ್ಐಆರ್ಗೆ ಕೋರ್ಟ್ ತಡೆ ನೀಡಿದೆ. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮದ ತನಿಖೆಯ ವೇಳೆ ಮಾಜಿ ಸಚಿವ ನಾಗೇಂದ್ರ ಅವರ ಹೆಸರು ಹೇಳುವಂತೆ ಒತ್ತಡ ಹೇರಿರುವ ಆರೋಪದ ಮೇಲೆ ವಿಲ್ಸನ್ ಗಾರ್ಡನ್ ಠಾಣೆಯಲ್ಲಿ (Vilsan Garden Police Station) ತಮ್ಮ ವಿರುದ್ಧ ಎಫ್‌ಐಆರ್ ದಾಖಲಿಸಿರುವುದನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯದ (ED) ಇಬ್ಬರು ಅಧಿಕಾರಿಗಳು ಹೈಕೋರ್ಟ್ ಮೊರೆ ಹೋಗಿದ್ದು. ಇದೀಗ ಹೈಕೋರ್ಟ್, ಇಡಿ ಅಧಿಕಾರಿಗಳ ವಿರುದ್ಧದ ಎಫ್ಐಆರ್ಗೆ(FIR) ತಡೆ ನೀಡಿ ಆದೇಶ ಹೊರಡಿಸಿದೆ.
ಮಾಜಿ ಸಚಿವ ಬಿ.ನಾಗೇಂದ್ರ ಒತ್ತಡದಿಂದ ಅಕ್ರಮವಾಗಿ ಹಣ ವರ್ಗಾವಣೆ ಮಾಡಿರುವುದಾಗಿ ಒಪ್ಪಿಕೊಳ್ಳುವಂತೆ ತಮ್ಮ ಮೇಲೆ ಇಡಿ ಅಧಿಕಾರಿಗಳು ಒತ್ತಡ ಹಾಕಿದ್ದಾರೆ ಹಾಗೂ, ಮಾನಸಿಕವಾಗಿ ಹಿಂಸೆ ನೀಡಿದ್ದಾರೆ ಎಂದು ಆರೋಪಿಸಿ ನಿಗಮದ ಹಿಂದಿನ ವ್ಯವಸ್ಥಾಪಕ ನಿರ್ದೇಶಕ ಕಲ್ಲೇಶ್.ಬಿ ದೂರು ನೀಡಿದ್ದರು. ಸೋಮವಾರವಷ್ಟೇ (July 22nd) ನಗರದ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯ ಪೊಲೀಸರು, ಇಡಿ ಅಧಿಕಾರಿಗಳಾದ ಕಣ್ಣನ್ (Kannan) ಹಾಗೂ ಮಿತ್ತಲ್ (Mittal) ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು. ಈ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಈ ಅಧಿಕಾರಿಗಳು ಮಂಗಳವಾರ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದು, ಇಂದು (July 23) ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್(High Court), ಇಡಿ ಅಧಿಕಾರಿಗಳ (ED Officers) ವಿರುದ್ಧದ ಎಫ್ಐಆರ್ಗೆ ತಡೆ ನೀಡಿ ಆದೇಶಿಸಿದೆ.