ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಚೊಂಬು; ಎಂ.ಲಕ್ಷ್ಮಣ್ ಆಕ್ರೋಶ
ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ
ಚೊಂಬು, ತೆಂಗಿನ ಚಿಪ್ಪು ನೀಡಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಮೈಸೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಇಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಮೋದಿ ನೇತೃತ್ವದ 3.0 ಸರ್ಕಾರದ ಬಜೆಟ್ ಮಂಡನೆಯಲ್ಲಿ ಕೇಂದ್ರ ಸರ್ಕಾರವು ರಾಜ್ಯಕ್ಕೆ ತೆಂಗಿನಚಿಪ್ಪು, ಚೊಂಬು ನೀಡಿದೆ ಎಂದು ಹರಿಹಾಯ್ದರಲ್ಲದೆ, ನಿರ್ಮಲಾ ಸೀತಾರಾಮನ್ ನೀರು ಕುಡಿಯದೇ ಬಜೆಟ್ ಮಂಡನೆ ಮಾಡಿದ್ದಾರೆ.
ಕರ್ನಾಟಕಕ್ಕೆ ಬಜೆಟ್ ನಲ್ಲಿ ಏನೂ ಸಿಕ್ಕಿಲ್ಲ.ಈ ಬಗ್ಗೆ ಸಿಎಂ, ಡಿಸಿಎಂ ವಿಧಾನಸಭೆಯಲ್ಲಿ ಮಾತನಾಡಿದ್ದಾರೆ.
ಜೆಡಿಎಸ್, ಬಿಜೆಪಿಯಿಂದ 19 ಎಂಪಿ ಗಳನ್ನು ಆಯ್ಕೆ ಮಾಡಿ ಕಳುಹಿಸಿದ್ದಾರೆ.ಆದರೆ ರಾಜ್ಯಕ್ಕೆ ಕೇಂದ್ರ ಸರ್ಕಾರ ಚೊಂಬು ಕೊಟ್ಟಿದೆ, ಅಲ್ಲದೇ ನಾಮ ಇಟ್ಟಿದೆ ಎಂದಿದ್ದಾರೆ.ಈ ಹಿಂದೆ ಕಾಂಗ್ರೆಸ್ ಸರ್ಕಾರ ಮನಮೋಹನ್ ಸಿಂಗ್ ಅವಧಿಯವರೆಗೂ ಕೇವಲ 53 ಲಕ್ಷ ಕೋಟಿ ಸಾಲ ಮಾಡಿತ್ತು. ಆದರೆ ಮೋದಿ ಅಧಿಕಾರಕ್ಕೆ ಬಂದಾಗಿನಿಂದ 183 ಲಕ್ಷ ಕೋಟಿ ಸಾಲ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.