• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

2ನೇ ವಿಮಾನ ನಿಲ್ದಾಣ: ಮತ್ತೊಂದು ಸುತ್ತು ಚರ್ಚೆ ನಡೆಸಿದ ಸಚಿವ ಪಾಟೀಲ

ಪ್ರತಿಧ್ವನಿ by ಪ್ರತಿಧ್ವನಿ
July 24, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು: ರಾಜಧಾನಿಯ ಸಮೀಪದಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವ ಸಂಬಂಧವಾಗಿ ಮೂಲಸೌಕರ್ಯ ಅಭಿವೃದ್ಧಿ ಮತ್ತು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು ವಿಮಾನಯಾನ ವಲಯದ ಪ್ರಮುಖರ ಜತೆ ಬುಧವಾರ ಇಲ್ಲಿ ಮತ್ತೊಂದು ಸುತ್ತಿನ ವಿಸ್ತೃತ ಚರ್ಚೆ ನಡೆಸಿದರು.

ADVERTISEMENT

ವಿಧಾನಸೌಧದ ಸಚಿವರ ಕಚೇರಿಯಲ್ಲಿ ನಡೆದ ಈ‌ ಮಹತ್ವದ ಸಭೆಯಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ‌ ನಿಲ್ದಾಣ ನಿಯಮಿತದ (ಬಿಐಎಎಲ್) ಸಿಇಒ ಹರಿ ಮರಾರ್, ಕ್ಯಾಪ್ಟನ್ ಗೋಪಿನಾಥ್, ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್, ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಎನ್ ಮಂಜುಳಾ, ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್.

ಕೃಷ್ಣ, ಕರ್ನಾಟಕ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಸತೀಶ, ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಉಪ ಕಾರ್ಯದರ್ಶಿ ಹೆಬ್ಸಿಬಾ ಕೋರ್ಲಪಟ್ಟಿ ಉಪಸ್ಥಿತರಿದ್ದರು.ಬಳಿಕ ಮಾತನಾಡಿದ ಸಚಿವರು, ‘ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಮತ್ತು ವಿಮಾನ ಪ್ರಯಾಣಿಕರ ದಟ್ಟಣೆ ಅನುಭವಿಸುತ್ತಿರುವ ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ ಬೇಕೆನ್ನುವುದರಲ್ಲಿ ಅನುಮಾನವಿಲ್ಲ.

ಸ್ಥಳದ ಆಯ್ಕೆ ಇತ್ಯಾದಿಗಳನ್ನು ಇನ್ನೂ ಆಖೈರುಗೊಳಿಸಿಲ್ಲ. ಈ ಬಗ್ಗೆ ಮತ್ತಷ್ಟು ಸಮಾಲೋಚನಾ ಸಭೆಗಳನ್ನು ನಡೆಸುವ ಅಗತ್ಯವಿದೆ’ ಎಂದರು. ಈ ಯೋಜನೆಯನ್ನು ಹೇಗೆ ಮುಂದಕ್ಕೆ ಕೊಂಡೊಯ್ಯಬೇಕು ಎನ್ನುವ ಬಗ್ಗೆ ಉದ್ಯಮಿಗಳು ಮತ್ತು ಸಂಬಂಧಿಸಿದ ಅಧಿಕಾರಿಗಳು ಸಭೆಯಲ್ಲಿ ಸಲಹೆಗಳನ್ನು ನೀಡಿದ್ದಾರೆ.

ಮುಂಬರುವ ದಿನಗಳಲ್ಲಿ ಮತ್ತಷ್ಟು ಸಭೆಗಳು ನಡೆಯಲಿವೆ ಎಂದು ಅವರು ಹೇಳಿದ್ದಾರೆ.ಪ್ರಯಾಣಿಕರ ದಟ್ಟಣೆ ಮತ್ತು ಕೈಗಾರಿಕಾ ಅಗತ್ಯ ಎರಡನ್ನೂ ಯೋಜನೆಯಲ್ಲಿ ಪರಿಗಣಿಸುವ ಚಿಂತನೆ ಇದೆ. ಜೊತೆಗೆ ಭೂಮಿಯ ಲಭ್ಯತೆ ಇತ್ಯಾದಿ ತಾಂತ್ರಿಕ ಅಂಶಗಳ ಕಡೆಗೂ ಗಮನಹರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

Tags: #[pratidhvanidigitalCM Siddaramaiah‌Congress PartyDCM DK ShivakumarMB Patil
Previous Post

ಲಾಡ್ ಒಂದೇ ಮಾತಿಗೆ ಇಡೀ ಬಿಜೆಪಿ ನಾಯಕರು ಸೈಲೆಂಟ್..!

Next Post

ಸಿದ್ದರಾಮಯ್ಯ ಸಾಹೇಬ್ರು ಕರ್ನಾಟಕದ ಮಸ್‌ ಲೀಡರ್‌ ಪ್ರತಾಪ್‌ ಸಿಂಹ.!

Related Posts

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು
ಕರ್ನಾಟಕ

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

by ಪ್ರತಿಧ್ವನಿ
April 28, 2026
0

ಕಲಬುರಗಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕುರಿತ ಚರ್ಚೆಗಳು ರಾಜಕೀಯ ವಲಯದಲ್ಲಿ ಗರಿಗೆದರಿರುವ ನಡುವೆಯೇ, ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು,...

Read moreDetails
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

April 27, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
Next Post

ಸಿದ್ದರಾಮಯ್ಯ ಸಾಹೇಬ್ರು ಕರ್ನಾಟಕದ ಮಸ್‌ ಲೀಡರ್‌ ಪ್ರತಾಪ್‌ ಸಿಂಹ.!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada