ಇಂಧನ ಇಲಾಖೆಗೆ ಸಂಬಂಧಿಸಿದಂತೆ ಚಿಕ್ಕಮಗಳೂರು ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಹೊಂದಿರುವ ಇಂಧನ ಸಚಿವ ಕೆ. ಜೆ. ಜಾರ್ಜ್ ಅವರು ಬೆಂಗಳೂರಿನ ಬೆಳಕು ಭವನದಲ್ಲಿ ಬುಧವಾರ ಸಭೆ ನಡೆಸಿದರು.
ಸಭೆಯಲ್ಲಿ ಸಚಿವರು ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಉಪಕೇಂದ್ರಗಳ ಸ್ಥಾಪನೆ ಮತ್ತು ವಿದ್ಯುತ್ ಮೂಲಸೌಕರ್ಯಗಳ ಅಭಿವೃದ್ಧಿ ಕುರಿತಂತೆ ಪ್ರಗತಿ ಪರಿಶೀಲಿಸಿದರು.
ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು, ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್, ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬಿಳಗಿ, ಮೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕಿ ಡಿ. ಪದ್ಮಾವತಿ, ಕ್ರೆಡಲ್ನ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ. ರುದ್ರಪ್ಪಯ್ಯ, ಕೆಪಿಟಿಸಿಎಲ್, ಬೆಸ್ಕಾಂ, ಮೆಸ್ಕಾಂನ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.