ಬೀದರ್:ಸಿಕ್ಕಿಂನಲ್ಲಿ ಹೃದಯಾಘಾತದಿಂದ ಬೀದರ್ನ ಯೋಧ ಸಾವನ್ನಪ್ಪಿದ ಘಟನೆ ಜರುಗಿದೆ.ಕೋರಿಯಾಳ ಗ್ರಾಮದ ಯೋಧ ಹವಾಲ್ದಾರ್ ಅನಿಲ್ ಕುಮಾರ್ ನವಾಡೆ ಹೃದಯಾಘಾತದಿಂದ ನಿಧನರಾಗಿದ್ದಾರೆ.ಅನಿಲ್ ಕಳೆದ 20 ವರ್ಷದಿಂದ ಸೈನ್ಯದಲ್ಲಿ ಸೇವೆ ಸಲ್ಲಿಸುತ್ತಿದ್ದರು.
ಸಿಕ್ಕಿಂ ಗಡಿ ಭಾಗದ ಹಿಮ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಹಿಮಪಾತವಾಗಿ ಆರೋಗ್ಯದಲ್ಲಿ ಏರುಪೇರಾಗಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆಮೃತ ಯೋಧನಿಗೆ ತಂದೆ-ತಾಯಿ, ನಾಲ್ವರು ಸಹೋದರರು, ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ. ಅನಿಲ್ ಕುಮಾರ್ ಅವರು 2004ರಲ್ಲಿ ಭಾರತೀಯ ಸೇನೆಗೆ ಸೇರಿದ್ದರು. ಹವಾಲ್ದಾರರಾಗಿ ಸಿಕ್ಕಿಂ ಗಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ