• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯದಿಂದ 1,403 ಕೋಟಿ ರೂ. ಮೌಲ್ಯದ ವಿದ್ಯುತ್ ಮಾರಾಟ: ಸಚಿವ ಜಾರ್ಜ್‌..

ಪ್ರತಿಧ್ವನಿ by ಪ್ರತಿಧ್ವನಿ
July 30, 2024
in Top Story, ಇದೀಗ, ಕರ್ನಾಟಕ, ರಾಜಕೀಯ, ವಿಶೇಷ
0
ರಾಜ್ಯದಿಂದ 1,403 ಕೋಟಿ ರೂ. ಮೌಲ್ಯದ ವಿದ್ಯುತ್ ಮಾರಾಟ: ಸಚಿವ ಜಾರ್ಜ್‌..
Share on WhatsAppShare on FacebookShare on Telegram

ವಿದ್ಯುತ್ ವಲಯದಲ್ಲಿ ಸ್ವಾವಲಂಬನೆ ಸಾಧಿಸುವ ನಿಟ್ಟಿನಲ್ಲಿ ಹೆಜ್ಜೆ ಹಾಕಿರುವ ಇಂಧನ ಇಲಾಖೆ, ಕಳೆದ ಬೇಸಿಗೆ (ಎಪ್ರಿಲ್ 1) ನಂತರ ರಾಜ್ಯದಲ್ಲಿ 1,403 ಕೋಟಿ ರೂ. ಮೌಲ್ಯದ ವಿದ್ಯುತ್ ಮಾರಾಟ ಮಾಡಿದೆ.

ADVERTISEMENT

ಬೆಸ್ಕಾಂ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿರುವ ಇಂಧನ ಸಚಿವ ಕೆ.ಜೆ.ಜಾರ್ಜ್, “2024ರ ಏಪ್ರಿಲ್ 1ರಿಂದ ಜುಲೈ ಅಂತ್ಯದವರೆಗೆ 1,403 ಕೋಟಿ ರೂ. ಮೊತ್ತದ ವಿದ್ಯುತ್ ಮಾರಾಟ ಮಾಡಲಾಗಿದೆ. ಮೇ 18ರವರೆಗೆ ವಿದ್ಯುತ್ ಖರೀದಿ ಹೆಚ್ಚಾಗಿದ್ದರೆ, ನಂತರದಲ್ಲಿ ಮಾರಾಟ ಹೆಚ್ಚಾಗಿದೆ. ಪ್ರತಿನಿತ್ಯ 30ರಿಂದ 40 ಕೋಟಿ ರೂ. ಮೊತ್ತದ ವಿದ್ಯುತ್ ಮಾರಾಟ ಮಾಡಲಾಗುತ್ತಿದೆ,” ಎಂದು ಮಾಹಿತಿ ನೀಡಿದರು.

“ಪ್ರಸ್ತುತ ರಾಜ್ಯದಲ್ಲಿ ನಿತ್ಯ ಸರಾಸರಿ 250 ಮಿಲಿಯನ್ ಯೂನಿಟ್ ವಿದ್ಯುತ್ ಉತ್ಪಾದಿಸಲಾಗುತ್ತಿದೆ. ಈ ಪೈಕಿ 20 ಮಿಲಿಯನ್ ಯೂನಿಟ್ಅನ್ನು ಬೇಸಿಗೆಯಲ್ಲಿ ವಿನಿಮಯ ಆಧಾರದ ಮೇಲೆ ವಿದ್ಯುತ್ ಪಡೆದುಕೊಂಡಿರುವ ಪಂಜಾಬ್ ಮತ್ತು ಉತ್ತರ ಪ್ರದೇಶ ರಾಜ್ಯಗಳಿಗೆ ಪೂರೈಸಲಾಗುತ್ತಿದೆ. 40ರಿಂದ 50 ಮಿಲಿಯನ್ ಯೂನಿಟ್ ಮಾರಾಟ ಮಾಡಲಾಗುತ್ತಿದೆ. 180 ಮಿಲಿಯಿನ್ ಯೂನಿಟ್ ವಿದ್ಯುತ್ ರಾಜ್ಯದಲ್ಲಿ ಬಳಕೆಯಾಗುತ್ತಿದೆ,” ಎಂದು ಹೇಳಿದರು.

“ಪ್ರಸ್ತುತ ರಾಯಚೂರು ಉಷ್ಣ ವಿದ್ಯುತ್ ಸ್ಥಾವರದಲ್ಲಿ 1,006, ಬಳ್ಳಾರಿ ಉಷ್ಣ ವಿದ್ಯುತ ಸ್ಥಾವರದಲ್ಲಿ 1,049, ಯರಮರಸ್ ಉಷ್ಣ ವಿದ್ಯುತ ಸ್ಥಾವರದಲ್ಲಿ 898 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ. ಮಳೆ ಹೆಚ್ಚಾಗಿದ್ದರಿಂದ ಜಲ ವಿದ್ಯುತ್ ಉತ್ಪಾದನಾ ಪ್ರಮಾಣ 34.96 ಮಿಲಿಯನ್ ಯೂನಿಟ್ ವರೆಗೆ ಹೆಚ್ಚಾಗಿದೆ. ಸೌರ ಶಕ್ತಿಯಿಂದ 34.64 ಹಾಗೂ ಪವನದಿಂದ 60.05 ಮಿಲಿಯನ್ ಯೂನಿಟ್ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ,” ಎಂದು ವಿವರಿಸಿದರು.

ವಿದ್ಯುತ್ ಉತ್ಪಾದನೆ, ಆದಾಯದಲ್ಲಿ ದಾಖಲೆ

“ಕಳೆದ ಸಾಲಿನಲ್ಲಿ ಕೆಪಿಸಿಎಲ್ ನಿಂದ ನಿರ್ವಹಣೆ ಮಾಡುತ್ತಿರುವ ರಾಜ್ಯದ ಮೂರು ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ದಾಖಲೆಯ ವಿದ್ಯುತ್ ಉತ್ಪಾದನೆ ಜತೆಗೆ ದಾಖಲೆಯ ಆದಾಯವನ್ನೂ ಗಳಿಸಲಾಗಿದೆ. 2022-23ನೇ ಸಾಲಿನಲ್ಲಿ 18,419 ಮಿಲಿಯನ್ ಯೂನಿಟ್ ವಿದ್ಯುತ್ ಉತ್ಪಾದನೆಯಾಗಿ 9,326 ಕೋಟಿ ರು. ಆದಾಯ ಬಂದಿದ್ದರೆ, 2023-24ನೇ ಸಾಲಿನಲ್ಲಿ 22,313 ಮಿಲಿಯನ್ ಯೂನಿಟ್ ಉತ್ಪಾದನೆ ಮಾಡಿ 10,916 ಕೋಟಿ ರು. ಆದಾಯ ಗಳಿಸಲಾಗಿದೆ. ಇದು ಈವರೆಗಿನ ದಾಖಲೆ ಎಂದು ಹೇಳಿದ ಸಚಿವರು, RTPS ನ ಉತ್ಪಾದನಾ ಘಟಕಗಳು ಬೇಸಿಗೆಯಲ್ಲಿ ಸತತ 103 ದಿನ ವಿದ್ಯುತ್ ಉತ್ಪಾದಿಸಿ ದಾಖಲೆ ನಿರ್ಮಿಸಿವೆ”ಎಂದು ಸಚಿವರು ವಿವರಿಸಿದರು.

ಯಲಹಂಕ, ಬಿಡಿದಿ ಘಟಕ ಮುಂದಿನ ತಿಂಗಳು ಉದ್ಘಾಟನೆ
“ಯಲಹಂಕ ಸಮೀಪ ಸ್ಥಾಪನೆಯಾಗಿರುವ ರಾಜ್ಯದಲ್ಲಿಯೇ ಪ್ರಪ್ರಥಮ ಅನಿಲ ಆಧಾರಿತ 370 ಮೆಗಾ ವಾಟ್‌ ಸಾಮರ್ಥ್ಯದ ‘ಯಲಹಂಕ ಸಂಯೋಜಿತ ಆವರ್ತ ವಿದ್ಯುತ್ ಸ್ಥಾವರ’ (CCPP) ಹಾಗೂ ಕರ್ನಾಟಕ ವಿದ್ಯುತ್‌ ನಿಗಮ ನಿಯಮಿತ (KPCL) ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವತಿಯಿಂದ 260 ಕೋಟಿ ರೂ. ವೆಚ್ಚದಲ್ಲಿ ಬಿಡದಿಯಲ್ಲಿ ಸ್ಥಾಪಿಸಲಾಗುತ್ತಿರುವ ತ್ಯಾಜ್ಯದಿಂದ ತ್ಯಾಜ್ಯದಿಂದ 11.5 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದಿಸುವ ಘಟಕವು ಮುಂದಿನ ತಿಂಗಳು ಉದ್ಘಾಟನೆಗೊಳ್ಳಲ್ಲಿದೆ,” ಎಂದು ಸಚಿವರು ತಿಳಿಸಿದರು.

ಇಂಧನ ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬೀಳಗಿ, ಕ್ರೆಡಲ್ ವ್ಯವಸ್ಥಾಪಕ ನಿರ್ದೇಶತಕ ಕೆ.ಪಿ.ರುದ್ರಪ್ಪಯ್ಯ ಸೇರಿದಂತೆ ಹಿರಿಯ ಅಧಿಕಾರಿಗಳು ಇದ್ದರು.

Tags: BescomBJPcongressCongress PartyKJ GeoargeKPCLMescompower supplyಬಿಜೆಪಿ
Previous Post

ಕೆಮ್ಮು ಹಾಗೂ ಗಂಟಲು ನೋವು ಸಮಸ್ಯೆಗೆ ಈ ಸಿಂಪಲ್ ಮನೆಮದ್ದನ್ನು ಟ್ರೈ ಮಾಡಿ.!

Next Post

ಭಾರಿ ಮಳೆಯಿಂದ ಎಸ್ಕಾಂಗಳಿಗೆ 96.66 ಕೋಟಿ ರೂ. ನಷ್ಟ: ಜಾರ್ಜ್

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
Top Story

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

by ಪ್ರತಿಧ್ವನಿ
May 27, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಸಿಎಂ ಕಚೇರಿಯ ಸಿಬ್ಬಂದಿಯಲ್ಲಿ ಭಾವುಕ ವಾತಾವರಣ ನಿರ್ಮಾಣವಾಗಿದೆ. ಜಾತಿಗಣತಿ ವರದಿ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

May 27, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
Next Post
ಭಾರಿ ಮಳೆಯಿಂದ ಎಸ್ಕಾಂಗಳಿಗೆ 96.66 ಕೋಟಿ ರೂ. ನಷ್ಟ: ಜಾರ್ಜ್

ಭಾರಿ ಮಳೆಯಿಂದ ಎಸ್ಕಾಂಗಳಿಗೆ 96.66 ಕೋಟಿ ರೂ. ನಷ್ಟ: ಜಾರ್ಜ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada