ಇತ್ತೀಚೆಗೆ ರಾಜಸ್ಥಾನದಿಂದ ಸರಬರಾಜಾಗುತ್ತಿದ್ದ ಮಾಂಸದ ಕುರಿತಾದ ಘಟನೆಗಳ ಹಿನ್ನೆಲೆಯಲ್ಲಿ ರೈಲುಗಳಲ್ಲಿ ಬಂದಿದ್ದ ಮಾಂಸದ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಗಳಿಗೆ ಕಳುಹಿಸಲಾಗಿತ್ತು.
ಇದೀಗ ಪ್ರಯೋಗಾಲಯಗಳಿಂದ ಪರೀಕ್ಷಾ ವರದಿ ಬಂದಿದ್ದು ರಾಜಸ್ಥಾನದಿಂದ ಬಂದ ಮಾಂಸವು ‘ಕುರಿ’ಯದ್ದೇ ಆಗಿದೆ ಎಂಬುದನ್ನು ಪ್ರಯೋಗಾಲಯವು ಖಚಿತಪಡಿಸಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಅನಗತ್ಯ ಗೊಂದಲ ಸೃಷ್ಟಿಸದಂತೆ ಮತ್ತು ಈ ಕುರಿತ ಗಾಳಿ ಸುದ್ದಿಗಳಿಗೆ ಕಿವಿಗೊಡದಂತೆ ನಾನು ಸಾರ್ವಜನಿಕರಲ್ಲಿ ವಿನಂತಿಸುತ್ತೇನೆ.