
ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಕೆ ಶಿವಕುಮಾರ್ (DK Shivakumar) ಅವರು ಇಂದು ವಿಧಾನಸೌಧದಲ್ಲಿ ನಡೆದ ಔಪಚಾರಿಕ ಸಚಿವ ಸಂಪುಟ ಸಭೆಯಲ್ಲಿ (Cabinet Meeting) ಭಾಗಿಯಾಗಿದ್ದರು.
ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡ (MUDA Scam ), ವಾಲ್ಮೀಕಿ ನಿಗಮದ ಹಗರಣ (Valmiki Scam) ಆರೋಪ ಸಂಬಂಧ ರಾಜ್ಯಪಾಲರು ನೋಟಿಸ್ ಜಾರಿ ಮಾಡಿದ್ದು, ಇದಕ್ಕೆ ಉತ್ತರಿಸುವುದು, ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದರೆ ಮುಂದೇನು ಎಂಬುವುದರ ಬಗ್ಗೆ ಸಭೆಯಲ್ಲಿ ಗಂಭೀರ ಚರ್ಚೆ ನಡೆಸಲಾಗಿದೆ.ಬ್ರೇಕ್ ಫಾಸ್ಟ್ ಸಭೆಯಲ್ಲಿ ರಾಜ್ಯಪಾಲರ ನೋಟಿಸ್ ಬಗ್ಗೆ ಪ್ರಸ್ತಾಪಿಸಿದ ಸಿಎಂ, ಮೂಡ ಕೇಸ್ ವಿಚಾರವಾಗಿ ರಾಜ್ಯಪಾಲರು ಸರ್ಕಾರಕ್ಕೆ ನೋಟಿಸ್ ಕೊಟ್ಟಿದ್ದಾರೆ.
ಮೂಡ ನಿವೇಶನ ಪಡೆಯಲು ನಾನು ಯಾವುದೇ ಪ್ರಭಾವ ಬೀರಿಲ್ಲ. ಬಿಜೆಪಿ ಅವಧಿಯಲ್ಲಿ ಕೊಟ್ಟ ನಿವೇಶನಗಳು ಅವು, ಆದರೂ ನನ್ನ ವಿರುದ್ಧ ಷಡ್ಯಂತ್ರ ಮಾಡಿ ಸಿಲುಕಿಸಲು ಹೊರಟಿದ್ದಾರೆ. ನಮ್ಮ ಪಕ್ಷದವರು ವಿಪಕ್ಷದವರ ಷಡ್ಯಂತ್ರಕ್ಕೆ ಕೈ ಜೋಡಿಸಿದ್ದಾರೆ, ಹೈಕಮಾಂಡ್‌ಗೂ ವಾಸ್ತವವನ್ನ ಮನವರಿಕೆ ಮಾಡಿಕೊಟ್ಟಿದ್ದೇನೆ. ನಾನು ಯಾವ ತಪ್ಪನ್ನೂ ಮಾಡಿಲ್ಲ, ರಾಜ್ಯಪಾಲರಿಗೆ ಉತ್ತರ ಕೊಡುವ ಕೆಲಸ ಮಾಡೋಣ. ಪ್ರಾಸಿಕ್ಯೂಷನ್ ವಿರೋಧಿಸಿ ನಿರ್ಣಯ ಮಾಡುವಾಗ ನಾನು ಕ್ಯಾಬಿನೆಟ್‌ನಲ್ಲಿ ಇರುವುದಿಲ್ಲ.
ನೀವೇ ನಿರ್ಣಯ ಮಾಡಿ ರಾಜ್ಯಪಾಲರಿಗೆ ಕಳುಹಿಸಿ, ಉತ್ತರ ಕೊಟ್ಟ ಬಳಿಕವೂ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದರೆ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದು ಸಂಪುಟ ಸಹೋದ್ಯೋಗಿಗಳ ಜೊತೆ ಸಿಎಂ ಭಾವನಾತ್ಮಕವಾಗಿ ಮಾತನಾಡಿದ್ದರು ಎನ್ನಲಾಗಿದೆ.ಇನ್ನು, ಸಭೆಯಲ್ಲಿ ಬಿಜೆಪಿ- ಜೆಡಿಎಸ್ ವಿರುದ್ಧ ರಾಜ್ಯಾದ್ಯಂತ ಹೋರಾಟಕ್ಕೆ ನಿರ್ಧಾರ ಮಾಡಲಾಗಿದ್ದು, ಗವರ್ನರ್ ಮೂಲಕ ಸರ್ಕಾರ ಉರುಳಿಸುವ ಕೆಲಸ ಎಂದು ಜನರಿಗೆ ತಿಳಿಸಲು ಸಭೆಯಲ್ಲಿ ಚರ್ಚೆ ನಡೆಸಲಾಗಿದೆಯಂತೆ.
ಅಲ್ಲದೇ, ಕಾನೂನು ಹೋರಾಟದ ಜೊತೆಗೆ ಹೋರಾಟದ ಮೂಲಕ ಜನರಿಗೆ ತಲುಪಿಸಲು ತಯಾರಿ ನಡೆಸಿಕೊಳ್ಳಲು ತೀರ್ಮಾನಿಸಲಾಗಿದೆಯಂತೆ.ಇದಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಹಿಂಬಾಗಿಲಿನಿಂದ ಸರ್ಕಾರ ಉರುಳಿಸುವ ಪ್ರಯತ್ನ ಮಾಡಲಾಗುತ್ತಿದೆ. ನೂರಕ್ಕೆ ನೂರರಷ್ಟು ಕೇಂದ್ರ ಸರ್ಕಾರ ಆಯ್ಕೆ ಸರ್ಕಾರವನ್ನ ಬಿಳಿಸುವ ಷಡ್ಯಂತ್ರ ಮಾಡ್ತಿದೆ.
ನಾವು ಕಾನೂನು ಹೋರಾಟ, ರಾಜಕೀಯ ಹೋರಾಟ ಮಾಡ್ತೀವಿ. ರಾಜ್ಯಪಾಲ ವಿರುದ್ಧ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡ್ತೀವಿ ಎಂದು ತಿಳಿಸಿದ್ದರು.ಕಾನೂನು ಸಚಿವ ಎಚ್.ಕೆ.ಪಾಟೀಲ್ ಮಾತನಾಡಿ, ರಾಜ್ಯಪಾಲರು ಶೋಕಾಸ್ ನೊಟೀಸ್ ಕೊಟ್ಟಿದ್ದಾರೆ. ಅದು ತಪ್ಪು ಅಂತ ಅನ್ನಿಸುತ್ತಿದೆ, ಮೌಲ್ಯದ ಆಧಾರದ ಮೇಲೆ ಸಿಎಂ ಸಭೆಗೆ ಬರ್ತಿಲ್ಲ. ಇಂದಿನ ಕ್ಯಾಬಿನೆಟ್ ಸಭೆಗೆ ಅವರು ಬರ್ತಿಲ್ಲ, ಪ್ರಮುಖ ನಿರ್ಣಯ ಡಿಸೈಡ್ ಮಾಡೋಕೆ ಹೇಳಿದ್ದಾರೆ. ಸಭೆಯಲ್ಲಿ ನೋಟಿಸ್ ಬಗ್ಗೆ ಚರ್ಚೆಯಾಗಲಿದೆ ಎಂದು ತಿಳಿಸಿದರು.