• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೀದರ್ | ಬಾಲ್ಯ ವಿವಾಹ ತಡೆಯಲು ಕಟ್ಟೆಚ್ಚರ ವಹಿಸಿ: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಪ್ರತಿಧ್ವನಿ by ಪ್ರತಿಧ್ವನಿ
August 1, 2024
in Top Story, ಇತರೆ / Others, ಕರ್ನಾಟಕ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ಬೀದರ್: ಜಿಲ್ಲೆಯಲ್ಲಿ ಬಾಲ್ಯ ವಿವಾಹ, ಅನೈತಿಕ ದತ್ತು ಮಾರಾಟ, ಮಕ್ಕಳ ಅಕ್ರಮ ಮಾರಾಟ ಸೇರಿದಂತೆ ಇನ್ನಿತರ ಕೃತ್ಯಗಳು ಜರುಗದಂತೆ ಅಧಿಕಾರಿಗಳು ನಿಗಾ ವಹಿಸಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಕ್ಕಳ ಕಲ್ಯಾಣ ಮತ್ತು ರಕ್ಷಣಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.ಬಾಲ್ಯ ವಿವಾಹ ಮಾಡುವ ಪಾಲಕರ ವಿರುದ್ಧ ಪೊಕ್ಸೊ ಪ್ರಕರಣ ದಾಖಲಿಸಬೇಕೆಂಬ ನಿಯಮವಿದೆ. ಅದನ್ನು ಎಲ್ಲೆಡೆ ತಿಳಿಹೇಳಿದರೆ ಬಾಲ್ಯ ವಿವಾಹ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತವೆ. ಅಧಿಕಾರಿಗಳು ಕಾಟಾಚಾರಕ್ಕೆ ಕೆಲಸ ಮಾಡದೇ ಪ್ರಜ್ಞಾಪೂರ್ವಕವಾಗಿ ಕೆಲಸ ಮಾಡಬೇಕು ಎಂದು ಎಚ್ಚರಿಕೆ ನೀಡಿದರು.

ADVERTISEMENT

ಮಕ್ಕಳ ಪಾಲನಾ ಸಂಸ್ಥೆಗಳು ಕಡ್ಡಾಯವಾಗಿ ಸರ್ಕಾರದಿಂದ ತಮ್ಮ ಹೆಸರನ್ನು ನೊಂದಣಿ ಮಾಡಿಕೊಳ್ಳಬೇಕು ಮತ್ತು ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರರು ಮಕ್ಕಳ ರಕ್ಷಣಾ ಸಮಿತಿಗಳನ್ನು ರಚಿಸಿ ಆಗಾಗ ಸಭೆ ನಡೆಸಿ ಮಾಹಿತಿ ಪಡೆಯಬೇಕು ಎಂದು ಸೂಚಿಸಿದರು.ಹೋಟೆಲ್, ಗ್ಯಾರೇಜ್ ಹಾಗೂ ಕಾರ್ಖಾನೆಗಳಲ್ಲಿ ಬಾಲ ಕಾರ್ಮಿಕ ಮಕ್ಕಳು ಕಂಡುಬಂದರೆ ಕಾರ್ಮಿಕ ಇಲಾಖೆಯ ಅಧಿಕಾರಿಗಳು ತಕ್ಷಣ ಕ್ರಮ ವಹಿಸಬೇಕು. ಬಾಲ ಕಾರ್ಮಿಕರನ್ನು ಯಾರೂ ದುಡಿಸಿಕೊಳ್ಳಬಾರದು.

ಜಿಲ್ಲೆಯಲ್ಲಿ ಈ ವರ್ಷ ದಾಖಲಾದ 49 ಟಿನೇಜ್‌ ಪ್ರೆಗ್ನೆನ್ಸಿ ಪ್ರಕರಣಗಳ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಹೆಚ್ಚಿನ ಗಮನ ಹರಿಸುವುದರ ಜೊತೆಗೆ ಇಂತಹ ಪ್ರಕರಣಗಳು ನಡೆಯದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.ಪ್ರೌಢಶಾಲೆ ಮತ್ತು ಪಿಯುಸಿಯಲ್ಲಿ ಎಷ್ಟು ಮಕ್ಕಳು ಶಾಲೆ ಬಿಟ್ಟಿದ್ದಾರೆ ಎಂಬ ಮಾಹಿತಿಯನ್ನು ಸಂಗ್ರಹಿಸಬೇಕು ಹಾಗೂ ಶಾಲಾ, ಕಾಲೇಜುಗಳಲ್ಲಿ ಮಕ್ಕಳ ಸಹಾಯವಾಣಿ ಫಲಕ ಅಳವಡಿಸುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ ಮಾತನಾಡಿ, ಮಕ್ಕಳ ಹಕ್ಕುಗಳು ಹಾಗೂ ಅರಿವಿನ ಕುರಿತು ಹಲವಾರು ಜನ ಜಾಗೃತಿ ಕಾರ್ಯಕ್ರಮಗಳನ್ನು ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಬೇಕು ಎಂದು ಸೂಚಿಸಿದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ ಪೂಜಾರ, ನಗರಸಭೆ ಆಯುಕ್ತ ಶಿವರಾಜ ರಾಠೋಡ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಚಂದ್ರಕಾಂತ ಶಾಬಾದಕರ್, ಶಾಲಾ- ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಸಲೀಂ ಪಾಶಾ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಗುರುರಾಜ, ರಕ್ಷಣಾಧಿಕಾರಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಗೌರಿಶಂಕರ ಪರತಾಪೂರ, ಮಕ್ಕಳ ಕಲ್ಯಾಣ ಸಮಿತಿ ಜಿಲ್ಲಾಧ್ಯಕ್ಷೆ ರಜಿಯಾ ಬಳಬಟ್ಟಿ, ಜಿಲ್ಲೆಯ ವಿವಿಧ ತಾಲ್ಲೂಕಿನ ತಹಶೀಲ್ದಾರರು ಹಾಗೂ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಮತ್ತು ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಪದಾಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags: #[pratidhvanidigitalChild RightsDC Shilpa SharmaPrimary and Secondary Education Department
Previous Post

ಬೆಳ್ಳಿ ವಸ್ತುಗಳು ಕಪ್ಪಾಗಿದ್ದರೆ, ಈ ಸಿಂಪಲ್ ಟಿಪ್ಸ್ ಫಾಲೋ ಮಾಡಿ ಹೊಳಪು ಹೆಚ್ಚಿಸಿ.!

Next Post

ಮೋದಿ ವಿರುದ್ಧ ಕಂಪ್ಲೇಂಟ್ ಕೊಡ್ತೀನಿ..!

Related Posts

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ
ಕರ್ನಾಟಕ

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

by ಪ್ರತಿಧ್ವನಿ
April 12, 2026
0

ಧಾರವಾಡ: ಮುಸ್ಲಿಂ ಸಮುದಾಯದ ಮಹಿಳೆಯರ ಕುರಿತು ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಧಾರವಾಡ ಶಹರ ಪೊಲೀಸ್ ಠಾಣೆಯಲ್ಲಿ ಸುಮೊಟೊ ಪ್ರಕರಣ ದಾಖಲಾಗಿದೆ.ಏಪ್ರಿಲ್...

Read moreDetails
ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

April 12, 2026
ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

April 11, 2026
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
Next Post

ಮೋದಿ ವಿರುದ್ಧ ಕಂಪ್ಲೇಂಟ್ ಕೊಡ್ತೀನಿ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada