• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೀದರ್‌ | ಆರು ಪಿಡಿಒಗಳ ವಿರುದ್ಧ ಕ್ರಮಕ್ಕೆ ಶಿಫಾರಸು

ಪ್ರತಿಧ್ವನಿ by ಪ್ರತಿಧ್ವನಿ
August 4, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೀದರ್: ಮಾರ್ಗಸೂಚಿಗಳನ್ನು ಉಲ್ಲಂಘಿಸಿ ತಾಲ್ಲೂಕಿನ ಗಾದಗಿ ಗ್ರಾಮ ಪಂಚಾಯಿತಿ ಅಧೀನದ ಗ್ರಾಮಗಳಲ್ಲಿ ಇ-ಸ್ವತ್ತು ತಂತ್ರಾಂಶದಡಿ ಡಿಜಿಟಲ್‌ ಖಾತೆಗಳನ್ನು ಅಕ್ರಮವಾಗಿ ವಿತರಿಸಿರುವ ಆರು ಜನ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ (ಪಿಡಿಒಗಳು) ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಶಿಫಾರಸು ಮಾಡಲಾಗಿದೆ.

ADVERTISEMENT

ಈ ಸಂಬಂಧ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್‌ ಬದೋಲೆ ಅವರು ಪಂಚಾಯತ್‌ ರಾಜ್‌ ಇಲಾಖೆಯ ಆಯುಕ್ತರಿಗೆ ಪತ್ರ ಬರೆದು ಶಿಫಾರಸು ಮಾಡಿದ್ದಾರೆ. ಅದರ ಪ್ರತಿ ‘ಪ್ರಜಾವಾಣಿ’ಗೆ ಲಭ್ಯವಾಗಿದೆ.ಪಿಡಿಒಗಳಾದ ವಿಜಯಶೀಲಾ ಶಂಕರರಾವ್‌, ಅಬ್ದುಲ್‌ ಅಜೀಂ ಸಿದ್ದಿಕಿ, ಶಿವಕುಮಾರ ಪಾಟೀಲ, ಶರತಕುಮಾರ ಅಭಿಮಾನ, ಶ್ರೀಧರ ಹಾಗೂ ಭೀಮರಾವ್‌ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಯುಕ್ತರಿಗೆ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಪಂಚಾಯಿತಿ ಸದಸ್ಯೆ ಅರುಣಾದೇವಿ ವರದಯ್ಯಾ ಮಠಪತಿ ಎಂಬುವರು ಅಕ್ರಮದ ಕುರಿತು ದೂರು ಸಲ್ಲಿಸಿದ್ದರು. ಗಾದಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಾದ ಹಮೀಲಾಪೂರ, ಬಾವಪೂರ, ಸೋಲಪೂರ, ಸಿಪ್ಪಲಗೇರಾ, ಮಾಮನಕೇರಿ, ಮಾತನಕೇರಿ, ದತನಕೇರಾ, ಕಬೀರವಾಡ, ಶಾಮರಾಜಪೂರ ಗ್ರಾಮಗಳಲ್ಲಿ 2013ರಿಂದ 2023ರ ವರೆಗಿನ ಸದರಿ ದಾಖಲೆಗಳು ಪಂಚಾಯಿತಿಯಲ್ಲಿ ಇಲ್ಲವೆಂದು ದೂರಿನಲ್ಲಿ ತಿಳಿಸಿದ್ದರು.ಡಾ. ಗಿರೀಶ್‌ ಬದೋಲೆ, ಸಿಇಒ, ಜಿಲ್ಲಾ ಪಂಚಾಯಿತಿ ಬೀದರ್‌ಆರು ಜನ ಪಿಡಿಒಗಳ ಅವಧಿಯ ಕಡತಗಳು ಪಂಚಾಯಿತಿಯಲ್ಲಿ ಇಲ್ಲ ಎನ್ನುವುದು ಉಪ ಕಾರ್ಯದರ್ಶಿ ನಡೆಸಿದ ತನಿಖೆಯಿಂದ ಗೊತ್ತಾಗಿದ್ದು ಅವರ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಿರುವೆ.

ಗಾದಗಿ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಬುಡಾ, ನಗರ ಮತ್ತು ಗ್ರಾಮೀಣ ಅಡಿಯಲ್ಲಿ ಎನ್‌.ಎ. ಲೇಔಟ್‌ಗಳ ಸಿ.ಎ ನಿವೇಶನ ಹಾಗೂ ಉದ್ಯಾನವನವನ್ನು ಪಂಚಾಯಿತಿ ಹೆಸರಿಗೆ ಮಾಡಿಕೊಂಡಿರುವ ದಾಖಲೆಗಳು ಗ್ರಾಮ ಪಂಚಾಯಿತಿಯಲ್ಲಿ ಇರುವುದಿಲ್ಲವೆಂದು ದೂರಿನಲ್ಲಿ ವಿವರಿಸಿದ್ದರು. ಈ ದೂರಿನ ಮೇರೆಗೆ ಸಿಇಒ ಅಧಿಕಾರಿಗಳಿಂದ ತನಿಖೆ ನಡೆಸಿದಾಗ ಅಕ್ರಮ ಎಸಗಿರುವುದು ಗೊತ್ತಾಗಿದೆ.2013ರ ನವೆಂಬರ್‌ 13ರಿಂದ 2024ರ ಮಾರ್ಚ್‌ 16ರ ವರೆಗೆ ಒಟ್ಟು ಎಂಟು ಜನರು ಪಿಡಿಒಗಳಾಗಿ ಕೆಲಸ ನಿರ್ವಹಿಸಿದ್ದಾರೆ.

ಈ ಪೈಕಿ ಇಬ್ಬರು ಪಿಡಿಒಗಳ ಅವಧಿಯ ದಾಖಲಾತಿಗಳು ಪಂಚಾಯಿತಿಯಲ್ಲಿ ಲಭ್ಯ ಇವೆ. ಉಳಿದ ಆರು ಜನರು ಸಿ.ಎ ನಿವೇಶನ, ಸಾರ್ವಜನಿಕ ಉದ್ಯಾನವನ ಮತ್ತು ರಸ್ತೆಯನ್ನು ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸಿರುವುದು ಕಂಡು ಬಂದಿಲ್ಲ. ಆರೂ ಜನರು ಮೇಲ್ನೋಟಕ್ಕೆ ಅಕ್ರಮ ಎಸಗಿರುವುದು ಕಂಡು ಬಂದಿದ್ದು, ಶಿಸ್ತು ಕ್ರಮ ಜರುಗಿಸಬಹುದು ಎಂದು ಶಿಫಾರಸು ಪತ್ರದಲ್ಲಿ ಸಿಇಒ ತಿಳಿಸಿದ್ದಾರೆ.

Tags: #[pratidhvanidigitalGovernment of KarnatakaPanchayat Raj Department
Previous Post

ಮೌಲ್ಯಗಳ ಪುನರ್‌ಸ್ಥಾಪನೆ ವರ್ತಮಾನದ ತುರ್ತು..

Next Post

ಕರ್ನಾಟಕದಲ್ಲಿ ಜನನಾಯಕರಾಗಿ ಬೆಳೆದವರಲ್ಲಿ ಮಾಜಿ ಮುಖ್ಯ ಮಂತ್ರಿ ಶ್ರೀ ಬಿ. ಎಸ್. ಯಡಿಯೂರಪ್ಪನವರೂ ಒಬ್ಬರು….

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
Next Post
ಕರ್ನಾಟಕದಲ್ಲಿ ಜನನಾಯಕರಾಗಿ ಬೆಳೆದವರಲ್ಲಿ ಮಾಜಿ ಮುಖ್ಯ ಮಂತ್ರಿ ಶ್ರೀ ಬಿ. ಎಸ್. ಯಡಿಯೂರಪ್ಪನವರೂ ಒಬ್ಬರು….

ಕರ್ನಾಟಕದಲ್ಲಿ ಜನನಾಯಕರಾಗಿ ಬೆಳೆದವರಲ್ಲಿ ಮಾಜಿ ಮುಖ್ಯ ಮಂತ್ರಿ ಶ್ರೀ ಬಿ. ಎಸ್. ಯಡಿಯೂರಪ್ಪನವರೂ ಒಬ್ಬರು....

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada