• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಾಲ್ಕು ಮಕ್ಕಳನ್ನು ಹೆತ್ತು, ಲಿಂಗ ಸಮಾನತೆ ಮೆರೆದ 21 ವರ್ಷದ ಮಹಿಳೆ

ಪ್ರತಿಧ್ವನಿ by ಪ್ರತಿಧ್ವನಿ
August 6, 2024
in Top Story, ಇತರೆ / Others, ಸರ್ಕಾರಿ ಗೆಜೆಟ್
0
ನಾಲ್ಕು ಮಕ್ಕಳನ್ನು ಹೆತ್ತು, ಲಿಂಗ ಸಮಾನತೆ ಮೆರೆದ 21 ವರ್ಷದ ಮಹಿಳೆ
Share on WhatsAppShare on FacebookShare on Telegram

ಜೈಪುರ: ರಾಜಸ್ಥಾನದ ಜೈಪುರದ ಸರ್ಕಾರಿ ಆಸ್ಪತ್ರೆಯಲ್ಲಿ 21 ವರ್ಷದ ಮಹಿಳೆ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದಾರೆ.ನಾಲ್ಕು ಮಕ್ಕಳಲ್ಲಿ ಎರಡು ಗಂಡು, ಇನ್ನೆರಡು ಹೆಣ್ಣು. ಸಂತೋಷ ದೇವಿ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ತಾಯಿ. ಕಡಿಮೆ ತೂಕ ಮತ್ತು ಕೆಲ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಕಾರಣ ನಾಲ್ಕೂ ಮಕ್ಕಳನ್ನು ಐಸಿಯುನಲ್ಲಿರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.ತಾಯಿಯ ಆರೋಗ್ಯ ಸಹ ಕ್ಷೀಣಿಸಿದ್ದು,ಆಕೆಗೆ ಚಿಕಿತ್ಸೆ ನೀಡಲಾಗುತ್ತಿದೆ. ಮಹಿಳೆ ರಾಜಸ್ಥಾನದ ದೌಸಾ ಜಿಲ್ಲೆಯ ನಿವಾಸಿಯಾಗಿದ್ದಾರೆ.

ADVERTISEMENT

ಸಂಗಾನೇರಿ ಗೇಟ್ ಬಳಿಯಲ್ಲಿರು ಸರ್ಕಾರಿ ಆಸ್ಪತ್ರೆಯಲ್ಲಿ ನಾಲ್ಕು ಮಕ್ಕಳಿಗೆ ಮಹಿಳೆ ಜನ್ಮ ನೀಡಿದ್ದಾರೆ. ನಮ್ಮ ಆಸ್ಪತ್ರೆಯಲ್ಲಿ ಇದೇ ಮೊದಲ ಬಾರಿಗೆ ಮಹಿಳೆಯೊಬ್ಬರು ನಾಲ್ಕು ಮಕ್ಕಳಿಗೆ ಜನ್ಮ ನೀಡಿರೋದು. ಈ ಹಿಂದೆ ಮಹಿಳೆಯೊಬ್ಬರು ಮೂರು ಮಕ್ಕಳಿಗೆ ಜನ್ಮ ನೀಡಿದ ದಾಖಳೆ ಇತ್ತು. ನಾವು ನಾಲ್ಕು ಮಕ್ಕಳನ್ನು ಆರೈಕೆ ಮಾಡಲಾಗುತ್ತಿದ್ದು, ಎಲ್ಲರ ಆರೋಗ್ಯವನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ. ತಾಯಿ ಸಂತೋಷ ದೇವಿ ಗರ್ಭಾಶಯಕ್ಕೆ ಸಂಬಂಧಿಸಿದ ಎನಿಮಿಯಾ ಸಮಸ್ಯೆಯಿಂದ ಬಳಲುತ್ತಿದ್ದರು.

ಮಹಿಳೆಗೂ ನಮ್ಮ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ತಾಯಿ ಆರೋಗ್ಯ ಸರಿ ಇಲ್ಲ. ನಾಲ್ಕು ಮಕ್ಕಳ ಆರೋಗ್ಯದಲ್ಲಿಯೂ ವ್ಯತ್ಯಾಸ ಕಂಡು ಬಂದಿದ್ದು, ಚಿಕಿತ್ಸೆ ನೀಡಲಾಗುತ್ತಿದ್ದು, ಸುಧಾರಣೆಗೆ ಸ್ವಲ್ಪ ಸಮಯ ಬೇಕಾಗುತ್ತದೆ ಎಂದು ಆಸ್ಪತ್ರೆಯ ವೈದ್ಯೆ ಡಾ.ಆಶಾ ವರ್ಮಾ ಮಾಹಿತಿ ನೀಡಿದ್ದಾರೆ.

ಈ ಕುರಿತು ಆಸ್ಪತ್ರೆಯ ಐಸಿಯು ವಿಭಾಗದ ಮುಖ್ಯಸ್ಥ ಡಾ.ವಿಷ್ಣು ಅಗರ್ವಾಲ್, ಅವಧಿ ಪೂರ್ವವೇ ಮಹಿಳೆ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಸೋಮವಾರ ನಮ್ಮ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಹಾಗಾಗಿ ಆಕೆಯನ್ನು ಸಹ ತೀವ್ರಾ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.

ಎನಿಮಿಯಾ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆ ನಮ್ಮಲ್ಲಿಯೇ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಒಂದು ಮಗುವಿನ ತೂಕ 900 ಗ್ರಾಂಗಿಂತಲೂ ಕಡಿಮೆ ಇದೆ. ಎರಡು ಮಕ್ಕಳ ತೂಕ ಒಂದು ಕೆಜಿ ಇದ್ದು, ಮತ್ತೊಂದು ಕೇವಲ 700 ಗ್ರಾಂ ತೂಕ ಹೊಂದಿದೆ. ಸಾಮಾನ್ಯವಾಗಿ ಆರೋಗ್ಯಕರ ನವಜಾತ ಶಿಶು 2.5 ರಿಂದ 3 ಕೆಜಿ ಹೊಂದಿರುತ್ತೆ ಎಂದು ಹೇಳಿದ್ದಾರೆ.

ಮೊದಲ ಬಾರಿಗೆ ಮಹಿಳೆಯನ್ನು ನಮ್ಮಲ್ಲಿಗೆ ಕರೆದುಕೊಂಡು ಬಂದಾಗ ಆಕೆ ಹಲವು ಗಂಭೀರ ಕಾಯಿಲೆಗಳಿಂದ ಬಳಲುತ್ತಿದ್ದರು. ವೈದ್ಯಕೀಯ ತಪಾಸಣೆ ನಡೆಸಿದಾಗ, ಪ್ರಿಕ್ಲೆಂಪಸಿಯಾ,ಆರ್‌ಎಚ್‌ ನೆಗಟಿವ್, ಗರ್ಭಾಶಯದಲ್ಲಿ ತೊಂದರೆ, ಫಾಯಿಬ್ರಡ್, ಎನಿಮಿಯ ಮತ್ತು ಹೊಟ್ಟೆ ನೋವಿನ ಸಮಸ್ಯೆಗಳಿಂದ ಬಳಲುತ್ತಿದ್ದರು. ಹೆರಿಗೆಗೂ ಮೊದಲೇ ಮಹಿಳೆ ಅಧಿಕ ರಕ್ತದೊತ್ತಡದಿಂದಲೂ ಬಳಲುತ್ತಿದ್ದರು ಎಂದು ವೈದ್ಯರು ಹೇಳಿದ್ದಾರೆ.

Tags: #[pratidhvanidigitalGovernment of RajasthanHealth & Family Welfare Serviceministry of health department
Previous Post

ಅಪ್ಪ ಮಗ ಇಬ್ಬರೂ ನಮ್ಮ ರಾಜ್ಯಕ್ಕೆ ಮೋಸ ಮಾಡ್ತಿದ್ದಾರೆ..

Next Post

ಭಾಷಣದುದ್ದಕ್ಕೂ BJPಗೆ Santosh Lad ಪ್ರಶ್ನೆಗಳ ಸುರಿಮಳೆ

Related Posts

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ
Top Story

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

by ಪ್ರತಿಧ್ವನಿ
April 24, 2026
0

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮದ ವೇಳೆ ದಾರುಣ ಘಟನೆ ಸಂಭವಿಸಿದ್ದು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಶಾಸಕ ಲಕ್ಷ್ಮಣ...

Read moreDetails
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post

ಭಾಷಣದುದ್ದಕ್ಕೂ BJPಗೆ Santosh Lad ಪ್ರಶ್ನೆಗಳ ಸುರಿಮಳೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada