
ರಾಜ್ಯ ಸರ್ಕಾರದ ವಿರುದ್ಧ ಹಗರಣ ಹಿಡಿದು ವಿರೋಧ ಪಕ್ಷಗಳು ಹಂಗಾಮ ಮಾಡುತ್ತಿರುವ ಸಮಯದಲ್ಲೇ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ.
ಕೇಂದ್ರ ಗೃಹ ಸಚಿವ ಅಮಿತ್ ಷಾ ಹಾಗು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರನ್ನು ಮಾಜಿ ಪ್ರಧಾನಿ ಹೆಚ್.ಡಿ ದೇವೆಗೌಡ ಭೇಟಿಯಾಗಿದ್ದಾರೆ. ದೆಹಲಿಯಲ್ಲಿ ಉಭಯ ನಾಯಕರನ್ನ ಭೇಟಿಯಾದ ಗೌಡರು ಸುಮಾರು 20 ನಿಮಿಷಗಳ ಕಾಲ ರಾಜ್ಯ ರಾಜಕೀಯದ ಬೆಳವಣಿಗೆ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ.

ಬಿಜೆಪಿ – ಜೆಡಿಎಸ್ ಪಾದಯಾತ್ರೆ ಜೊತೆಗೆ, ಕಾಂಗ್ರೆಸ್ ಜನಾಂದೋಲನ ಯಾತ್ರೆ ಬಗ್ಗೆ ಚರ್ಚೆ ನಡೆಸಿದ್ದಾರೆ.. ಅದ್ರಲ್ಲೂ ರಾಜಭವನದಲ್ಲಿ ಆಗುತ್ತಿರುವ ಬೆಳವಣಿಗೆಗಳ ಮಧ್ಯೆಯೇ ಕೇಂದ್ರ ನಾಯಕರನ್ನ ಭೇಟಿಯಾಗಿ ಮಾತುಕತೆ ನಡೆಸಿರೋದು ಕುತೂಹಲ ಮೂಡಿಸಿದೆ..

ಸಿಎಂ ಸಿದ್ದರಾಮಯ್ಯ ಹಾಗು ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನು ನಿಯಂತ್ರಣ ಮಾಡಲು ಬೇಕಾದ ಮಾರ್ಗಗಳ ಬಗ್ಗೆ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿರುವ ಸಾಧ್ಯತೆ ಇದೆ ಎನ್ನಲಾಗ್ತಿದೆ. ರಾಜ್ಯದ ಮೂರು ಪ್ರಮುಖ ರಾಜಕೀಯ ಪಕ್ಷಗಳಾದ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ತನ್ನದೇ ಆದ ರೀತಿಯಲ್ಲಿ ರಾಜಕೀಯ ನಡೆಯುತ್ತಿರುವ ಈ ಹೊತ್ತಿನಲ್ಲಿ ಒಳರಾಜಕೀಯವೇ ಗೆಲ್ಲುವ ಲಕ್ಷಣ ಕಾಣ್ತಿದೆ.
ಕೃಷ್ಣಮಣಿ






