• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಹಕಾರ ಸಂಘಗಳ ಕಾಯ್ದೆ ತಿದ್ದುಪಡಿ ಸಂವಿಧಾನಬಾಹಿರ: ಹೈಕೋರ್ಟ್ ಏಕಸದಸ್ಯ ಪೀಠದಿಂದ ಮಹತ್ವದ ತೀರ್ಪು

ಪ್ರತಿಧ್ವನಿ by ಪ್ರತಿಧ್ವನಿ
August 8, 2024
in Top Story, ಇದೀಗ, ಕರ್ನಾಟಕ, ರಾಜಕೀಯ, ವಿಶೇಷ
0
Share on WhatsAppShare on FacebookShare on Telegram

ಸಹಕಾರ ಸಂಘಗಳ ಕಾಯ್ದೆಯ ತಿದ್ದುಪಡಿ ಮಾಡಿದ್ದ ಸಿದ್ದರಾಮಯ್ಯ ಸರ್ಕಾರಕ್ಕೆ ಹಿನ್ನೆಡೆಯಾಗಿದೆ. ಸಹಕಾರ ಸಂಘಗಳ ಕಾಯ್ದೆಯ ತಿದ್ದುಪಡಿ ಸಂವಿಧಾನಬಾಹಿರ. ಅಲ್ಲದೇ ಸಂವಿಧಾನದ ಉಲ್ಲಂಘನೆ ಎಂದು ಕರ್ನಾಟಕ ಹೈಕೋರ್ಟ್​ ಮಹತ್ವದ ತೀರ್ಪು ನೀಡಿದೆ

ADVERTISEMENT

ಸಹಕಾರ ಸಂಘಗಳ ಕಾಯ್ದೆಯ ತಿದ್ದುಪಡಿ ಸೆಕ್ಷನ್​ 128A ಪ್ರಕಾರ ಸಂವಿಧಾನಬಾಹಿರ ಎಂದು ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ಮಹತ್ವದ ತೀರ್ಪು ನೀಡಿದೆ. ಎಸ್‌ಸಿ/ಎಸ್‌ಟಿ ಸಮುದಾಯಗಳಿಗೆ ಮೀಸಲಾತಿಯನ್ನು ಖಾತ್ರಿಪಡಿಸುವ ಮೂಲಕ ಪ್ರಮುಖ ಸಹಕಾರ ಸಂಸ್ಥೆಗಳ ಆಡಳಿತ ಮಂಡಳಿಗಳಲ್ಲಿ ಮೀಸಲಾತಿ ಆಧಾರದ ಮೇಲೆ ಸರ್ಕಾರದ ನಾಮನಿರ್ದೇಶಿತರ ಸಂಖ್ಯೆಯನ್ನು ಮೂರಕ್ಕೆ ಹೆಚ್ಚಿಸುವ ಕರ್ನಾಟಕ ಸಹಕಾರ ಸಂಘಗಳ(ತಿದ್ದುಪಡಿ) ಮಸೂದೆಯನ್ನು ಸಿದ್ದರಾಮಯ್ಯ ಸರ್ಕಾರ ಅಂಗೀಕರಿಸಿತ್ತು. ಆದ್ರೆ, ಇದೀಗ ಇದನ್ನು ಸಂವಿಧಾನಬಾಹಿರ. ತಿದ್ದುಪಡಿ ಸಂವಿಧಾನದ ಆರ್ಟಿಕಲ್ 19(1)ಸಿ ಉಲ್ಲಂಘನೆ ಎಂದು ನ್ಯಾಯಮೂರ್ತಿ ಅನಂತ್ ರಾಮನಾಥ್ ಹೆಗಡೆ (Justice Ananth Ramanath Hegde) ಅವರಿದ್ದ ಹೈಕೋರ್ಟ್ ಪೀಠ ತೀರ್ಪು ಪ್ರಕಟಿಸಿದೆ.

ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959ರ ಪ್ರಕರಣ 28 ಎ (3)ರ ಉಪ ಪ್ರಕರಣ (3)ರಲ್ಲಿ ಪ್ರಾಥಮಿಕ ಸಹಕಾರ ಸಂಘಗಳ ಮಂಡಳಿಯಲ್ಲಿ ಅನುಸೂಚಿತ ಜಾತಿಗಳು/ಅನುಸೂಚಿತ ಬುಡಕಟ್ಟುಗಳು, ಹಿಂದುಳಿದ ವರ್ಗಗಳು ಮತ್ತು ಮಹಿಳೆಯರಿಗಾಗಿ ಈಗಾಗಲೇ ಮೀಸಲಾತಿ ಕಲ್ಪಿಸುವುದು. ಅದಕ್ಕನುಸಾರವಾಗಿ, ಮಾಧ್ಯಮಿಕ ಫೆಡರಲ್ ಮತ್ತು ಅಪೆಕ್ಸ್ ಸಹಕಾರ ಸಂಘಗಳ ಮಂಡಳಿಯಲ್ಲಿ ಪ್ರಾತಿನಿಧ್ಯ ಹೊಂದಿರದ ವರ್ಗದ ಅಥವಾ ಸಮುದಾಯದ ಜನರಿಗೆ ಸಾಮಾಜಿಕ ನ್ಯಾಯವನ್ನು ಒದಗಿಸುವ ಸದುದ್ದೇಶದಿಂದ ಈ ತಿದ್ದುಪಡಿ ತರಲಾಗಿತ್ತು.

ಸುದೀರ್ಘ ಚರ್ಚೆಯ ಬಳಿಕ ಕರ್ನಾಟಕ ಸಹಕಾರ ಸಂಘಗಳ (ತಿದ್ದುಪಡಿ) ವಿಧೇಯಕ-2024 ಅಂಗೀಕಾರವಾಗಿತ್ತು. ಸಹಕಾರ ಸಚಿವ ಕೆ.ಎನ್. ರಾಜಣ್ಣ ಮಂಡಿಸಿದ್ದ ಬಿಲ್ ಇದಾಗಿತ್ತು. ನಿಯಮಗಳನ್ನು ‌ಮಾಡುವಾಗ ಕೆಲವೊಂದು ತಿದ್ದುಪಡಿ ಮಾಡುವಂತೆ ಸದನದಲ್ಲಿ ಸಲಹೆಗಳು ಕೇಳಿಬಂದವು. ಅದಕ್ಕೆ ಪ್ರತಿಕ್ರಿಯೆ ನೀಡಿದ ರಾಜಣ್ಣ, ಸಲಹೆಗಳೊಂದಿಗೆ ಪರಿಷ್ಕರಿಸುವುದಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ವಿಧೇಯಕವನ್ನು ಅಂಗೀಕಾರ ಮಾಡಲಾಗಿತ್ತು.

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಸಹಕಾರ ಸಂಘಗಳ ತಿದ್ದುಪಡಿ ಮಸೂದೆಯನ್ನು ರಾಜ್ಯ ಸರ್ಕಾರ 2024 ಫೆಬ್ರವರಿ 20ರಂದು ವಿಧಾನಸಭೆಯಲ್ಲಿ ಅಂಗೀಕರಿಸಿದ್ದು, ಎಸ್‌ಸಿ/ಎಸ್‌ಟಿ ಸಮುದಾಯದಿಂದ ಒಬ್ಬರು, ಮಹಿಳೆ ಮತ್ತು ಸಾಮಾನ್ಯ ವರ್ಗದ ಒಬ್ಬರು ನಿರ್ದೇಶಕರಾಗಿರುತ್ತಾರೆ. ಈಗ 22 ಇರುವ ಅಪೆಕ್ಸ್ ಬ್ಯಾಂಕ್‌ನ ಆಡಳಿತ ಮಂಡಳಿಯ ಸಂಖ್ಯೆ ಇನ್ನುಮುಂದೆ 25ಕ್ಕೆ ಏರಲಿದ್ದು, ಪ್ರಮುಖ ನಿರ್ಧಾರ ತೆಗೆದುಕೊಳ್ಳುವಲ್ಲಿ ಸರ್ಕಾರ ಮೇಲುಗೈ ಸಾಧಿಸಿತ್ತು.

Tags: BangaloreBJPCo-operative SocietyCongress Partyhigh courtಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕೇಂದ್ರ ಸಚಿವ H D ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌ ಮಂಜೂರಾತಿಗೆ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಲೋಕಾಯುಕ್ತ ಪೊಲೀಸರು..

Next Post

ಹಾಡಿನಲ್ಲೇ ಮೋಡಿ ಮಾಡಿದ “ಲಾಫಿಂಗ್ ಬುದ್ಧ”

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

‘ಸಿಜೆಪಿ’ ಪೇಜ್ ಹ್ಯಾಕ್‌? ‘ಕಾಕ್ರೋಚ್ ಜನತಾ ಪಕ್ಷ’ ಅಭಿಜಿತ್ ದಿಪ್ಕೆ ಹೇಳಿದ್ದೇನು? 

May 23, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಮುಂಗಾರು ಅಬ್ಬರ: ರಾಜ್ಯಾದ್ಯಂತ ಭಾರೀ ಮಳೆ, ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ

May 23, 2026
Next Post

ಹಾಡಿನಲ್ಲೇ ಮೋಡಿ ಮಾಡಿದ "ಲಾಫಿಂಗ್ ಬುದ್ಧ"

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada