• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಅಂಕಣ

ಹುಚ್ಚಾಸ್ಪತ್ರೆಯಲ್ಲಿ ಕುಮಾರಸ್ವಾಮಿಗೆ ಆದಷ್ಟು ಬೇಗ ಚಿಕಿತ್ಸೆ ಕೊಡಿಸಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
August 10, 2024
in ಅಂಕಣ, ಇತರೆ / Others, ಕರ್ನಾಟಕ, ರಾಜಕೀಯ
0
ಹುಚ್ಚಾಸ್ಪತ್ರೆಯಲ್ಲಿ ಕುಮಾರಸ್ವಾಮಿಗೆ ಆದಷ್ಟು ಬೇಗ ಚಿಕಿತ್ಸೆ ಕೊಡಿಸಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್
Share on WhatsAppShare on FacebookShare on Telegram

ಕನಕಪುರ:ಕುಮಾರಸ್ವಾಮಿ ಅವರ ಹೇಳಿಕೆ ನೋಡುತ್ತಿದ್ದರೆ ಅವರಿಗೆ ಆದಷ್ಟು ಬೇಗ ಹುಚ್ಚಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು.ಕನಕಪುರದಲ್ಲಿ ಜನರನ್ನು ಭೇಟಿ ಮಾಡಿ ಅಹವಾಲು ಸ್ವೀಕರಿಸಿದ ಬಳಿಕ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಶನಿವಾರ ಪ್ರತಿಕ್ರಿಯೆ ನೀಡಿದರು.

ADVERTISEMENT

ಎಸ್.ಎಂ ಕೃಷ್ಣ ಅವರ ಅಳಿಯ ಸಿದ್ಧಾರ್ಥ ಅವರ ಸಾವಿಗೆ ಕಾರಣ ಯಾರು ಎಂದು ನಿಮ್ಮ ವಿರುದ್ಧ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ ಎಂದು ಮಾಧ್ಯಮಗಳು ಕೇಳಿದಾಗ, “ನಾನು ಅವರ ತಂದೆ ವಿರುದ್ಧ 1985ರಲ್ಲಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದೆ. ಬಂಗಾರಪ್ಪನವರ ಸಂಪುಟದಲ್ಲಿ ಸಚಿವನಾಗಿದ್ದೆ. ನನ್ನ ಹಾಗೂ ಎಸ್.ಎಂ ಕೃಷ್ಣ ಅವರ ನಡುವಣ ಸಂಬಂಧ ಏನು ಎಂದು ಕುಮಾರಸ್ವಾಮಿಗೆ ಏನು ಗೊತ್ತಿದೆ? ಅವರಿಗೆ ಹುಚ್ಚು ಹಿಡಿದಿದೆ. ಅವರಿಗೆ ಸೂಕ್ತ ಚಿಕಿತ್ಸೆ ಕೊಡಿಸಿ ಎಂದು ಅವರ ಪಕ್ಷದವರಿಗೆ, ನಾಯಕರಿಗೆ, ಹಿತೈಷಿಗಳಿಗೆ ಹೇಳೋಣ” ಎಂದು ತಿಳಿಸಿದರು.

ಡಿ.ಕೆ ಶಿವಕುಮಾರ್ ಬಡವರ ಆಸ್ತಿ ಲೂಟಿ ಮಾಡಿದ್ದಾರೆ ಎಂಬ ಕುಮಾರಸ್ವಾಮಿ ಆರೋಪದ ಬಗ್ಗೆ ಗಮನ ಸೆಳೆದಾಗ, “ನಾನು ಯಾವ ಬಡವನ ಆಸ್ತಿ ಲೂಟಿ ಮಾಡಿದ್ದೇನೆ. ಆತನನ್ನು ಕರೆದುಕೊಂಡು ಬಂದು ನನ್ನ ಮುಂದೆ ನಿಲ್ಲಿಸಲಿ. ನಾವು ಬಡವರಿಗೆ ತೊಂದರೆ ನೀಡಿ ಆಸ್ತಿ ಕಿತ್ತುಕೊಂಡಿರುವುದು ನಮ್ಮ ಜಾಯಮಾನದಲ್ಲಿಲ್ಲ. ಕುಮಾರಸ್ವಾಮಿ ಅವರ ಬಗ್ಗೆ ಯೋಗೇಶ್ವರ್ ಅವರೇ ಈಗಾಗಲೇ ಮಾಹಿತಿ ನೀಡಿದ್ದಾರೆ. ಅವರ ಬಗ್ಗೆ ಯೋಗೇಶ್ವರ್ ಉತ್ತರ ನೀಡುತ್ತಾರೆ” ಎಂದು ತಿಳಿಸಿದರು.ಶಿವಕುಮಾರ್ ಅವರಿಗೆ ರಾಜಕೀಯಕ್ಕೆ ಬಂದ ಮೇಲೆ ಆಸ್ತಿ ಬಂದಿದೆ.

ಅವರ ತಂದೆ ಏನಾಗಿದ್ದರು ಎಂಬ ಪ್ರಶ್ನೆಗೆ, “ನಾವು ಬಡವರು, ಹೊಲ ಉಳುಮೆ ಮಾಡಿಕೊಂಡಿದ್ದೆವು. ನಾನು ಬೆಂಗಳೂರಿನ ಎನ್ ಪಿಎಸ್ ಶಾಲೆಯಲ್ಲಿ ಓದಿದವನು. ನನ್ನ ಇತಿಹಾಸ ಅಲ್ಲಿಂದ ಶುರುವಾಗಿದೆ” ಎಂದು ತಿಳಿಸಿದರು.ನಿಮ್ಮನ್ನು ಜೈಲಿಗೆ ಹಾಕಲು ಷಡ್ಯಂತ್ರ ನಡೆಯುತ್ತಿದೆಯೇ ಎಂದು ಕೇಳಿದಾಗ, “ಮೊದಲಿಂದಲೂ ದೊಡ್ಡ ಸಂಚು ನಡೆದುಕೊಂಡು ಬಂದಿದ್ದು, ಈಗಲೂ ಷಡ್ಯಂತ್ರ ಮಾಡುತ್ತಿದ್ದಾರೆ.

ಹೀಗಾಗಿ 10 ತಿಂಗಳಲ್ಲಿ ಸರ್ಕಾರ ತೆಗೆಯುವುದಾಗಿ ಹೇಳಿದ್ದಾರೆ” ಎಂದು ತಿಳಿಸಿದರು.ಶಿವಕುಮಾರ್ ನನ್ನ ಮೇಲೆ ಕಲ್ಲು ಬಂಡೆ ಎತ್ತಿಹಾಕಿದ್ದಾರೆ ಎಂಬ ಕುಮಾರಸ್ವಾಮಿ ಆರೋಪದ ಬಗ್ಗೆ ಕೇಳಿದಾಗ, “ನಾನು ಯಾವ ರೀತಿ ಅವರ ಮೇಲೆ ಬಂಡೆ ಹಾಕಿದ್ದೇನೆ ಎಂದು ಅವರು, ಅವರ ಪಕ್ಷದ ನಾಯಕರು ಹೇಳಲಿ.

ಅವರ ಮಾತುಗಳನ್ನು ಕೇಳುತ್ತಿದ್ದರೆ, ಅವರಿಗೆ ಚಿಕಿತ್ಸೆ ಕೊಡಿಸುವುದು ಉತ್ತಮ” ಎಂದರು.ಸಿಎಂ ಸದನದಲ್ಲಿ ಉತ್ತರ ನೀಡದೇ ರಣಹೇಡಿಯಂತೆ ಕದ್ದು ಓಡಿ ಹೋಗುತ್ತಾರೆ ಎಂಬ ವಿಜಯೇಂದ್ರ ಆರೋಪದ ಬಗ್ಗೆ ಕೇಳಿದಾಗ, “ಹೇಡಿ ಯಾರು ಎಂಬುದನ್ನು ಸದನದಲ್ಲಿ ಬಂದು ಮಾತನಾಡಲಿ” ಎಂದು ತಿಳಿಸಿದರು.ಕುಮಾರಸ್ವಾಮಿ ಮೇಲೆ ಕಣ್ಣಾಕಿದರೆ ಸರ್ವನಾಶವಾಗ್ತಾರೆ ಎಂಬ ಹೇಳಿಕೆ ಬಗ್ಗೆ ಕೇಳಿದಾಗ, “ನಮ್ಮ ಮೇಲೆ ಕಣ್ಣಾಕಿದರೂ ಅದೇ ಸಮಸ್ಯೆ ಆಗುತ್ತದೆಯಲ್ಲವೇ” ಎಂದು ತಿಳಿಸಿದರು.

Tags: Congress PartyDCM DK ShivakumarHD KumaraswamyJDS
Previous Post

ಕೊಪ್ಪಳ | ಅಂಗನವಾಡಿ ಮಕ್ಕಳ ತಟ್ಟೆಗೆ ಮೊಟ್ಟೆ ಹಾಕಿ, ಕಸಿದುಕೊಂಡ ವಿಡಿಯೋ ವೈರಲ್: ಇಬ್ಬರು ಅಮಾನತು

Next Post

ಜೆಡಿಎಸ್ ಗಂಡಸ್ತನ ಪೆನ್​ಡ್ರೈವ್​ನಲ್ಲಿ ಎಲ್ಲಾಕಡೆ ಪ್ರದರ್ಶನ ಆಯ್ತಲ್ಲ: ಸಚಿವ ಪ್ರಿಯಾಂಕ್​ ಖರ್ಗೆ

Related Posts

ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?
Top Story

ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?

by ಪ್ರತಿಧ್ವನಿ
May 26, 2026
0

ಬೆಂಗಳೂರು : ರಾಜ್ಯ ರಾಜಕಾರಣ ದೆಹಲಿಗೆ ಶಿಫ್ಟ್‌ ಆಗಿದ್ದು, ಕಾಂಗ್ರೆಸ್‌ ಪಾಳಯದಲ್ಲಿನ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಚರ್ಚೆಗಳು ಮುನ್ನೆಲೆಗೆ ಬಂದಿವೆ. ಈ ಕುರಿತು ಈಗಾಗಲೇ ದೆಹಲಿಯಲ್ಲಿರುವ ಸಿದ್ದರಾಮಯ್ಯ ಹಾಗೂ...

Read moreDetails
ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

May 26, 2026
ಪ್ರಜಾಪ್ರಭುತ್ವದ ಸಾಂಸ್ಥಿಕ ಅಗ್ನಿಪರೀಕ್ಷೆ-ಎಸ್‌ಐಆರ್‌

ಪ್ರಜಾಪ್ರಭುತ್ವದ ಸಾಂಸ್ಥಿಕ ಅಗ್ನಿಪರೀಕ್ಷೆ-ಎಸ್‌ಐಆರ್‌

May 26, 2026
ಒಂದೆಡೆ ಸಿದ್ದರಾಮಯ್ಯ ಬಣ, ಮತ್ತೊಂದೆಡೆ ಡಿಕೆಶಿ ಕಸರತ್ತು; ದೆಹಲಿ ದಂಗಲ್ ಶುರು!

ಒಂದೆಡೆ ಸಿದ್ದರಾಮಯ್ಯ ಬಣ, ಮತ್ತೊಂದೆಡೆ ಡಿಕೆಶಿ ಕಸರತ್ತು; ದೆಹಲಿ ದಂಗಲ್ ಶುರು!

May 26, 2026
ಬೆಂಗಳೂರು ರಾಜಕೀಯಕ್ಕೆ ವಿಜಯ್ ಎಂಟ್ರಿ? ಗ್ರೇಟರ್ ಬೆಂಗಳೂರು ಚುನಾವಣೆಗೆ ಟಿವಿಕೆ ಮಾಸ್ಟರ್ ಪ್ಲಾನ್!

ಬೆಂಗಳೂರು ರಾಜಕೀಯಕ್ಕೆ ವಿಜಯ್ ಎಂಟ್ರಿ? ಗ್ರೇಟರ್ ಬೆಂಗಳೂರು ಚುನಾವಣೆಗೆ ಟಿವಿಕೆ ಮಾಸ್ಟರ್ ಪ್ಲಾನ್!

May 26, 2026
Next Post

ಜೆಡಿಎಸ್ ಗಂಡಸ್ತನ ಪೆನ್​ಡ್ರೈವ್​ನಲ್ಲಿ ಎಲ್ಲಾಕಡೆ ಪ್ರದರ್ಶನ ಆಯ್ತಲ್ಲ: ಸಚಿವ ಪ್ರಿಯಾಂಕ್​ ಖರ್ಗೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada